ಮಾದರಿ ಗ್ರಾಮದಲ್ಲಿ 24x7 ಕರೆಂಟ್‌: ಡಿಕೆಶಿ

Team Udayavani, Jul 5, 2017, 3:30 AM IST

Shivakumar-D-K-1 600.jpg

ಬೆಂಗಳೂರು: ರಾಜ್ಯದ ಪ್ರತಿ ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರದ ತಲಾ ಐದು ಗ್ರಾಮಗಳನ್ನು ದಿನದ 24 ಗಂಟೆ ನಿರಂತರ ವಿದ್ಯುತ್‌ ಪೂರೈಕೆ ಸಹಿತ ‘ವಿದ್ಯುತ್‌ ಅಚಡಣೆ ರಹಿತ ಗ್ರಾಮ’ಗಳನ್ನಾಗಿ ಪರಿವರ್ತಿಸುವ ಯೋಜನೆಯನ್ನು ರಾಜ್ಯ ಸರಕಾರ ರೂಪಿಸಿದೆ. ಪ್ರತಿ ಗ್ರಾಮಕ್ಕೆ ಗರಿಷ್ಠ 40 ಲಕ್ಷ ರೂ. ವೆಚ್ಚದಲ್ಲಿ ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದಂತೆ ಅಗತ್ಯ ಇರುವ ಎಲ್ಲ ಕ್ರಮಗಳನ್ನು ಕೈಗೊಂಡು ಮಾದರಿ ಗ್ರಾಮಗಳನ್ನಾಗಿ ಮಾಡುವುದು ಇದರ ಉದ್ದೇಶ. ಜತೆಗೆ ಐದು ಎಸ್ಕಾಂ ವ್ಯಾಪ್ತಿಯ ಆಯ್ದ ನಗರ ಪ್ರದೇಶ ಒಳಗೊಂಡ ಹದಿನೇಳು ಉಪವಿಭಾಗಗಳನ್ನೂ ಇದೇ ರೀತಿ ಮಾದರಿಯಾಗಿ ರೂಪಿಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಇದಕ್ಕೆ 3,675 ಕೋಟಿ ರೂ. ಮೀಸಲಿಡಲಾಗಿದೆ.

ರಾಜ್ಯದ ಐದು ಎಸ್ಕಾಂ ವ್ಯಾಪ್ತಿಯ ಆಯ್ದ 17 ಉಪ ವಿಭಾಗಗಳನ್ನು ಒಟ್ಟು 3,675 ಕೋಟಿ ರೂ. ವೆಚ್ಚದಲ್ಲಿ ಮಾದರಿ ಉಪವಿಭಾಗ ಯೋಜನೆಯಡಿ ಅಭಿವೃದ್ಧಿ ಹಾಗೂ ಪ್ರತಿ ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತಲಾ ಐದು ಗ್ರಾಮಗಳನ್ನು ಮಾದರಿ ವಿದ್ಯುತ್‌ ಗ್ರಾಮಗಳನ್ನಾಗಿ ರೂಪಿಸಲು ನಿರ್ಧರಿಸಲಾಗಿದೆ. ನಿರಂತರ ಗುಣಮಟ್ಟದ ವಿದ್ಯುತ್‌ ಪೂರೈಕೆ, ತಾಂತ್ರಿಕ ಹಾಗೂ ವಾಣಿಜ್ಯ ವಿದ್ಯುತ್‌ ಸೋರಿಕೆ ಪ್ರಮಾಣ ಶೇ.6ಕ್ಕೆ ಇಳಿಕೆ, ಶೇ.100ರಷ್ಟು ಬಿಲ್ಲಿಂಗ್‌ – ವಸೂಲಿ, ಐದು ಸ್ಟಾರ್‌ಗಳಿರುವ ಗುಣಮಟ್ಟದ ಟ್ರಾನ್ಸ್‌ಫಾರ್ಮರ್‌ ಅಳವಡಿಕೆ ಹಾಗೂ ಗ್ರಾಹಕರ ಸಂತೃಪ್ತಿಗೆ ಆದ್ಯತೆ ನೀಡುವುದು ಯೋಜನೆಯ ಉದ್ದೇಶ  ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಮಾದರಿ ವಿದ್ಯುತ್‌ ಗ್ರಾಮ: ಕನಿಷ್ಠ 2,000 ಜನರಿರುವ ಗ್ರಾಮಗಳನ್ನು ಶಾಸಕರು, ಸಂಸದರು ಮಾದರಿ ವಿದ್ಯುತ್‌ ಗ್ರಾಮಗಳನ್ನಾಗಿ ಆಯ್ಕೆ ಮಾಡಲಿದ್ದು, ಅಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು 25 ಲಕ್ಷ ರೂ.ನಿಂದ 40 ಲಕ್ಷ ರೂ.ವರೆಗೆ ವೆಚ್ಚ ಮಾಡಲಾಗುವುದು. ಈ ಕಾರ್ಯಕ್ರಮ ಅನುಷ್ಠಾನಕ್ಕೆ ಅಗತ್ಯವಿರುವ ಹಣವನ್ನು ಎಸ್ಕಾಂಗಳು ತಮ್ಮ ಬಂಡವಾಳ ಕಾಮಗಾರಿ ಯೋಜನೆಯಡಿ ಭರಿಸಬೇಕಾಗುತ್ತದೆ. ಒಂದೂವರೆ ವರ್ಷದೊಳಗೆ ಮಾದರಿ ವಿದ್ಯುತ್‌ ಗ್ರಾಮಗಳು ರೂಪುಗೊಳ್ಳಲಿವೆ ಎಂದು ಹೇಳಿದರು.

ಮಂಗಳೂರು, ಶಿವಮೊಗ್ಗ ಆಯ್ಕೆ: ಮೆಸ್ಕಾಂ ವ್ಯಾಪ್ತಿಯಲ್ಲಿ ಮಂಗಳೂರು ನಗರ, ಶಿವಮೊಗ್ಗ ವಿದ್ಯುತ್‌ ಅಡಚಣೆ ರಹಿತ ಗ್ರಾಮಕ್ಕೆ ಆಯ್ಕೆ ಮಾಡಲಾಗಿದ್ದು, 350 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ ಎಂದರು.

ಪರಿಹಾರ ಮೊತ್ತ ಹೆಚ್ಚಳ: ರಾಜ್ಯದಲ್ಲಿ ವಿದ್ಯುತ್‌ ಅವಘಡದ ವೇಳೆ ಮೃತಪಡುವ ನೌಕರ, ಸಿಬಂದಿ, ಸಾರ್ವಜನಿಕರಿಗೆ ಪರಿಹಾರ ಮೊತ್ತವನ್ನು 2 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ ಮಾಡಲು ನಿರ್ಧರಿಸಲಾಗಿದ್ದು, ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು. ಹಸು, ಎತ್ತು, ಕುರಿ, ಮೇಕೆಯಂತಹ ಜಾನುವಾರುಗಳು ಮೃತಪಟ್ಟರೆ ಪಶುಸಂಗೋಪನ ಇಲಾಖೆ ವರದಿ ಆಧರಿಸಿ 50,000 ರೂ. ವರೆಗೆ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು.

ಈವರೆಗೆ ಪ್ರೊಬೆಷನರಿ ಲೈನ್‌ಮನ್‌ಗಳು ಕಂಬ ಹತ್ತುವಂತಿರಲಿಲ್ಲ. ಆದರೆ ಇನ್ನು ಮುಂದೆ ಪ್ರೊಬೆಷನರಿ ಲೈನ್‌ಮನ್‌ಗಳು ಕಂಬ ಹತ್ತುವುದನ್ನು ಕಡ್ಡಾಯಗೊಳಿಸಲಾಗುವುದು. ಪ್ರೊಬೆಷನರಿ ಲೈನ್‌ಮನ್‌ಗಳು ಕರ್ತವ್ಯ ನಿರ್ವಹಿಸುವಾಗ ಅವಘಡ ಸಂಭವಿಸಿ ಸಾವು ಸಂಭವಿಸಿದರೆ ಕಾಯಂ ನೌಕರರಿಗಿರುವ ಸೌಲಭ್ಯದಂತೆ ಕುಟುಂಬದ ಸದಸ್ಯರಿಗೆ ನೌಕರಿ ನೀಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.