ಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆ
Team Udayavani, Dec 13, 2018, 1:01 PM IST
ಬೆಂಗಳೂರು ಗುತ್ತಿಗೆ ಪದ್ಧತಿಯನ್ನುರದ್ದು ಗೊಳಿಸುವುದು, ಇಎಸ್ಐ- ಪಿಎಫ್ ಸೌಲಭ್ಯ, ವಾರದ ರಜೆ, ಪ್ರತಿ ತಿಂಗಳ 7ನೇ ತಾರೀಖೀನೊಳಗೆ ವೇತನ ಪಾವತಿ ಸೇರಿದಂತೆ ಹತ್ತಾರು ಬೇಡಿಕೆಗಳ ಈಡೇರಿಕೆಗಾಗಿ ಗುತ್ತಿಗೆ ಪೌರಕಾರ್ಮಿಕರು ಬುಧವಾರ ಪ್ರತಿಭಟನೆ ನಡೆಸಿದರು.
ಬಿಬಿಎಂಪಿ ಕೇಂದ್ರ ಕಚೇರಿ ಮೇಯರ್ ಕಚೇರಿ ಭವನದ ಎದುರು ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಸಂಘ, ಎಐಸಿಸಿಟಿಯು ನೇತೃತ್ವದಲ್ಲಿ ನೂರಾರು ಪೌರಕಾರ್ಮಿಕರು ತಮ್ಮ ಸಮಸ್ಯೆ ಗಳನ್ನು ಶೀಘ್ರ ನಿವಾರಣೆ ಮಾಡು ವವರೆಗೆ ಜಾಗ ಬಿಟ್ಟು ಕದಲುವುದಿಲ್ಲ. ಜತೆಗೆ ಪೌರಕಾರ್ಮಿಕರ
ಮೇಲಾಗು ತ್ತಿರುವ ದೌರ್ಜನ್ಯ ತಡೆಗೆ ಕೂಡಲೇ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆ ಉದ್ದೇಶಿಸಿದ ಮಾತನಾಡಿದ ಸಂಘಟನೆಯ ಪ್ರಧಾನ ಕ್ಟಾಢದರ್ಶಿ ನಿರ್ಮಲಾ, ಪೌರಕಾರ್ಮಿಕರನ್ನು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ. ಸರಿಯಾದ ಸಮಯಕ್ಕೆ ವೇತನ ಪಾವತಿಸದ ಹಿನ್ನೆಲೆಯಲ್ಲಿ ಕಷ್ಟ ಅನುಭವಿಸುವಂತಾಗಿದೆ.
ಜತೆಗೆ ಇಂದಿರಾ ಕ್ಯಾಂಟೀನ್ ನಿಂದ ಪೂರೈಕೆ ಮಾಡುತ್ತಿರುವ ಆಹಾರ ಗುಣಮಟ್ಟದಿಂದ ಕೂಡಿಲ್ಲವೆಂದು ಆರೋಪಿಸಿದರು.
ಪೌರಕಾರ್ಮಿಕರು ಕೆಲಸ ಮಾಡುವ ವೇಳೆ ಕೈಚೀಲ, ಮಾಸ್ಕ್, ಷೋ ಸೇರಿದಂತೆ ಇನ್ನಿತರ ಪರಿಕರಗಳನ್ನು ನೀಡಬೇಕಿದೆ. ಆದರೆ, ಪಾಲಿಕೆಯಿಂದ ಯಾವುದೇ ಸೌಲಭ್ಯಗಳನ್ನು ನೀಡದಿರುವುದರಿಂದ ಅಪಾಯದ ನಡುವೆ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಜತೆಗೆ ಕೆಲಸದಿಂದ ತೆಗೆದಿರುವ ಒಂದು ವರ್ಷ ಕೆಲಸ ಮಾಡಿದ ಪೌರಕಾರ್ಮಿಕರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸಫ್ರಾಜ್ ಖಾನ್, ಈಗಾಗಲೇ ಕೆಲ ವಲಯಗಳಲ್ಲಿ ಪೌರಕಾರ್ಮಿಕರಿಗೆ ಸ್ವತ್ಛತಾ ಪರಿಕರಗಳನ್ನು ನೀಡಲಾಗಿದ್ದರೂ ಅವರು ಬಳಸು ತ್ತಿಲ್ಲ. ಒಂದು ವರ್ಷ ಕೆಲಸ ಮಾಡಿ ದವರು ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಅವರನ್ನು ಕೆಸಲಕ್ಕೆ ಪರಿಗಣಿಸಲಾಗುವುದು. ಜತೆಗೆ ಉಳಿದ ಬೇಡಿಕೆ ಗಳನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.