ಸಹಕಾರಿ ಬ್ಯಾಂಕ್‌ಗಳ ಕೊಡುಗೆ ಅಪಾರ
Team Udayavani, Jun 4, 2018, 12:09 PM IST
ಬೆಂಗಳೂರು: ದೇಶದ ಆರ್ಥಿಕತೆಗೆ ಸಹಕಾರಿ ಬ್ಯಾಂಕ್‌ಗಳ ಕೊಡುಗೆ ಅಪಾರ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ಅಭಿಪ್ರಾಯಪಟ್ಟರು. ನಗರದ ಶಂಕರಪುರಂ ಚಂದ್ರಶೇಖರ ಭಾರತೀ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀ ಸೀತಾರಾಮ ಮಂದಿರಂ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಅಂದಿನ ಮೈಸೂರು ಸಂಸ್ಥಾನದ ಆಡಳಿತದಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಸೇವೆ ಸಲ್ಲಿಸುವ ಮೂಲಕ ರಾಜ್ಯವನ್ನು ಉಚಾøಯ ಸ್ಥಿತಿಗೆ ತಲುಪಿಸಿದ್ದವು. ಇಂದು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಲ್ಲಿ ಸಹಕಾರಿ ಸಂಘಗಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಪೂರಕವಾಗಿವೆ ಎಂದು ತಿಳಿಸಿದರು.
ಮೈಸೂರು ಅರಸು ಕುಟುಂಬದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಮಾತನಾಡಿ, ಸೀತಾರಾಮ ಮಂದಿರಂ ಸೌಹಾರ್ದ ಸಹಕಾರಿ ಬ್ಯಾಂಕ್ ಜನ್ಮಶತಮಾನೋತ್ಸವ ಆಚರಿಸುತ್ತಿರುವುದು ಹೆಮ್ಮೆ ವಿಚಾರ. ಈ ಬ್ಯಾಂಕ್ ಮುಂದಿನ ದಿನಗಳಲ್ಲಿ ಮತ್ತಷ್ಟು ಗ್ರಾಹಕರಿಗೆ ತನ್ನ ಸೇವೆ ಮುಂದುವರಿಸಲಿ ಎಂದು ಆಶಿಸಿದರು.
ಆಡಳಿತ ಮಂಡಳಿ ಸದಸ್ಯ ಆರ್.ಜಿ ರಾಮಸ್ವಾಮಿ ಮಾತನಾಡಿ, ಸಹಕಾರಿ ವಲಯಕ್ಕೆ ಮೈಸೂರು ರಾಜರ ಕೊಡುಗೆಯ ಇತಿಹಾಸವನ್ನು ಎಲ್ಲರೂ ತಿಳಿಯಬೇಕಿದೆ. ರಾಜ್ಯದಲ್ಲಿ ಸುಮಾರು 60 ಸಾವಿರ ಸಹಕಾರಿ ಸಂಘಗಳಲ್ಲಿ 8ರಿಂದ 10 ಸಂಘಗಳು ನಿಷ್ಕ್ರಿಯವಾಗಿರುವುದು ಹೊರತುಪಡಿಸಿದರೆ ಉಳಿದ ಎಲ್ಲಾ ಸಂಘಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !
Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ
Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.