ಎನ್‌ಎಂಸಿ ಮಸೂದೆ ವಿರೋಧಿಸಿ ಸಮಾವೇಶ

Team Udayavani, Jan 22, 2018, 11:54 AM IST

Dagalbaji tulu comedy suspense movie.jpg

ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಪರಿಷತ್‌(ಎನ್‌ಎಂಸಿ) ಮಸೂದೆ ವಿರೋಧಿಸಿ ಮೆಡಿಕಲ್‌ ಸರ್ವಿಸ್‌ ಸೆಂಟರ್‌, ಆಲ್‌ ಇಂಡಿಯ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌(ಎಐಡಿಎಸ್‌ಒ), ಅಖೀಲ ಭಾರತ ಶಿಕ್ಷಣ ಉಳಿಸಿ ಸಮಿತಿ ಹಾಗೂ  ಇಂಡಿಯನ್‌ ಮೆಡಿಕಲ್‌ ಅಸೋಸಿಯೇಷನ್‌(ಐಎಂಎ) ವತಿಯಿಂದ ಭಾನುವಾರ ನಗರದ ಐಎಂಎ ಸಭಾಂಗಣದಲ್ಲಿ  ಪ್ರತಿರೋಧ ಸಮಾವೇಶ ನಡೆಯಿತು.

ಕಿಮ್ಸ್‌ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಎಸ್‌. ಶ್ರೀನಿವಾಸ್‌ ಮಾತನಾಡಿ, ಎನ್‌ಎಂಸಿ ಚುನಾಯಿತ ಹಾಗೂ ಸ್ವಾಯತ್ತ ಸಂಸ್ಥೆಯಾಗಿದ್ದು,  109 ಸದಸ್ಯರನ್ನು ಒಳಗೊಂಡಿದೆ. ಈ ಮಸೂದೆ ಎಂಸಿಐ  ಅಸ್ಥಿತ್ವವನ್ನೇ ಇಲ್ಲದಂತೆ ಮಾಡುತ್ತದೆ. ರಾಜ್ಯಗಳ ಪ್ರಾತಿನಿಧ್ಯಕ್ಕೂ ಧಕ್ಕೆ ತರಲಿದೆ.ವಿಶ್ವವಿದ್ಯಾಲಯ ಹಾಗೂ ರಾಜ್ಯ ಸರ್ಕಾರಗಳ ಅಭಿಪ್ರಾಯ ಪಡೆಯಲು ಅವಕಾಶ ನೀಡದಿರುವುದು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಲಿದೆ ಎಂದರು.

ಆಖೀಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಕಾರ್ಯದರ್ಶಿ ಕೆ. ಉಮಾ ಮಾತನಾಡಿ, ಈ ಮಸೂದೆಯಡಿ ಶುಲ್ಕ ನಿಗದಿ ಮಾಡುವ ಅನಿಯಂತ್ರಿತ ಅಧಿಕಾರವನ್ನು ಖಾಸಗಿ ಸಂಸ್ಥೆಗಳಿಗೆ ನೀಡಲಾಗಿದೆ.  ಈ ಸೀಟುಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇರುವುದಿಲ್ಲ. ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಸೀಟುಗಳ ಬಗ್ಗೆ ಮಸೂದೆಯಲ್ಲಿ ಉಲ್ಲೇಖವಿಲ್ಲ.

ಇದರಿಂದ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಇನ್ನಷ್ಟು ತುಟ್ಟಿಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು. ಮೆಡಿಕಲ್‌ ಸರ್ವಿಸ್‌ ಸೆಂಟರ್‌ ಅಧ್ಯಕ್ಷೆ ಡಾ. ಕೆ.ಸುಧಾ ಮಾತನಾಡಿ, ಕೇಂದ್ರ ಸರ್ಕಾರ ಈ ಮಸೂದೆಯನ್ನು ಕೈಬಿಡಬೇಕು.

ಐಎಂಸಿ ಅಧಿಕಾರವನ್ನು ಕಿತ್ತುಕೊಂಡು, ವೈದ್ಯಕೀಯ ಕಾಲೇಜಿನ ಗುಣಮಟ್ಟ ಹಾಗೂ ಅರ್ಹತೆಯನ್ನು ಮಂಡಳಿಯೇ ನಿರ್ಧರಿಸುವಂತೆ ಮಾಡಲಿದೆ. ಎಲ್ಲಾ ವೈದ್ಯ ಪದ್ಧತಿಗಳ ಶಿಕ್ಷಣ ತಜ್ಞರು, ವೈದ್ಯರು, ವಿಜ್ಞಾನಿಗಳು, ಸಂಶೋಧಕರು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುವ ಅಗತ್ಯವಿದೆ ಎಂದರು. ವೈದ್ಯ ಡಾ. ವೆಂಕಟಾಚಲಪತಿ, ಎಐಡಿಎಸ್‌ಒ ರಾಜ್ಯಾಧ್ಯಕ್ಷ ಡಾ. ಪ್ರಮೋದ್‌ ಮೊದಲಾದವರು ಉಪಸ್ಥಿತರಿದ್ದರು.

ಸಮಾವೇಶದ ನಿರ್ಣಯ: ಕೇಂದ್ರ ಸರ್ಕಾರವು ಪ್ರಸ್ತಾಪಿಸಿರುವ ಎನ್‌ಎಂಸಿ ಮಸೂದೆಯನ್ನು ಕೈಬಿಟ್ಟು ಎಂಸಿಐಯನ್ನು ಮುಂದುವರಿಸಬೇಕು. ಅದರ ಸ್ವಾಯತ್ತತೆಯನ್ನು ಕಾಪಾಡಬೇಕು ಹಾಗೂ ಇದನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ಕ್ರಮಗಳನ್ನು ಕೈಗೊಳ್ಳಬೇಕು. ವೈದ್ಯಕೀಯ ಶಿಕ್ಷಣದ ಮಾರಾಟ ನಿಲ್ಲಿಸಲು ವಿದ್ಯಾರ್ಥಿ ಸ್ನೇಹಿ ಕಾಯ್ದೆ ಜಾರಿಗೊಳಿಸಬೇಕು. ರಾಜ್ಯ ಸರ್ಕಾರಗಳ ಹಕ್ಕು ಮೊಟಕುಗೊಳಿಸುವ ಈ ಮಸೂದೆ ಜಾರಿಗೊಳಿಸದಂತೆ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯ ಸಮಾವೇಶದಲ್ಲಿ ತೆಗೆದುಕೊಳ್ಳಲಾಗಿದೆ.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.