ಜನಸೇವಕರ ಕಾರ್ಪೊರೇಟ್ ಸೇವೆ
Team Udayavani, Feb 14, 2019, 10:10 AM IST
ಬೆಂಗಳೂರು: ಪ್ರಸ್ತುತ ರಾಜಕಾರಣಿಗಳು ಜನ ಸೇವಕರಾಗಿಲ್ಲ, ಬದಲಾಗಿ ಕಾರ್ಪೊರೇಟ್ ಕಂಪನಿಗಳ ಸೇವಕರಾಗಿ ವರ್ತಿಸುತ್ತಿದ್ದಾರೆ ಎಂದು ಸಾಹಿತಿ ದೇವನೂರು ಮಹಾದೇವ ಹೇಳಿದರು.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಹಯೋಗದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ “ವೈಚಾರಿಕ ಸಮಾವೇಶ’ದಲ್ಲಿ ಮಾತನಾಡಿದ ಅವರು, ಪ್ರಸ್ತುತ ಎಲ್ಲೆಡೆ ಹಣದ ಆಳ್ವಿಕೆ ನಡೆಯುತ್ತಿದೆ. ರೈತರ ಪರ ಕೆಲಸ ಮಾಡಬೇಕಾದ ಜನ ನಾಯಕರು ಕೆಲ ಕಂಪನಿಗಳ ಪರ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣದ ಹೆಸರಿನಲ್ಲಿ ಖಾಸಗಿ ಕಂಪನಿಗಳಿಗೆ ಮಾರುತ್ತಾ, ದೇಶ ಮಾರಾಟವನ್ನೇ ದೇಶ ಪ್ರೇಮ ಎಂದು ಜನತೆಯನ್ನು ನಂಬಿಸುತ್ತಿದ್ದಾರೆ ಎಂದು ಆರೋಪಿಸಿದರು.
ಎಂ.ಡಿ.ನಂಜುಂಡಸ್ವಾಮಿಯವರು ಸುಂದರೇಶ್, ಪುಟ್ಟಣ್ಣಯ್ಯರೊಂದಿಗೆ ಒಟ್ಟುಗೂಡಿಕೊಂಡು ವ್ಯವಸ್ಥೆಯ ಜತೆ ರಾಜಿಯಾಗದೆ ಕಠೊರ ನಿಲುವು ಗಳಿಂದ ಚಳವಳಿ ನಡೆಸಿ ರೈತ ಸಂಘಕ್ಕೆ ಒಂದು ವರ್ಚಸ್ಸು ತಂದುಕೊಟ್ಟರು.
ಸ್ಥಳೀಯ ಸಮಸ್ಯೆ ಗಳೊಂದಿಗೆ ಜಾಗತಿಕ ವಿದ್ಯಮಾನ ಜತೆ ಕಾಣುವ ಒಳನೋಟವನ್ನು ಹೊಂದಿದ್ದರು ಎಂದು ಹೇಳಿದರು. ಕೃಷಿ ಬೆಲೆ ಆಯೋಗದ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಮಾತನಾಡಿ, ದೇಶದ ಕೃಷಿ ವಲಯ ತೀವ್ರವಾದ ಬಿಕ್ಕಟ್ಟಿನಲ್ಲಿದೆ. ಸರ್ಕಾರ ನೀಡುತ್ತಿರುವ ಬೆಂಬಲ ಬೆಲೆಯು ಉತ್ಪಾದನೆಯ ವೆಚ್ಚಕ್ಕಿಂತ ಕಡಿಮೆ ಇದೆ. ರೈತ ಬೆಳೆಯುವ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗಬೇಕಾದರೆ ಅಗತ್ಯ ಕಾನೂನು ತರಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದರು.
ಇದೇ ವೇಳೆ ಪ್ರೋ.ಎಂ.ಡಿ.ಎನ್. ಬಸವರಾಜ್ ಅವರು ಬರೆದ “ವಿಶ್ವ ರೈತ ಸಂತ ಪ್ರೊ.ಎಂ.ಡಿ. ನಂಜುಂಡಸ್ವಾಮಿ’ ಪುಸ್ತಕವನ್ನು ಚುಕ್ಕಿ ನಂಜುಂಡಸ್ವಾಮಿ ಅವರು ಲೋಕಾರ್ಪಣೆಗೊಳಿಸಿದರು. ರೈತರ ಕುರಿತ ರಣಹೇಡಿ ಸಿನಿಮಾದ ಆಡಿಯೋ ಬಿಡುಗಡೆಗೊಳಿಸಲಾಯಿತು. ನಂಜುಂಡ ಸ್ವಾಮಿ ಪುತ್ರಿ ಚುಕ್ಕಿ, ನಟ ಪ್ರಕಾಶ್ ರೈ, ರಾಜ್ಯ ರೈತ ಸಂಘದ ಸುನೀತಾ ಪುಟ್ಟಣ್ಣಯ್ಯ, ಸಮಿತಿಯ ಪ್ರೋ.ಕೆ.ಸಿ.ಬಸವರಾಜ್, ಸ್ವರಾಜ್ಯ ಇಂಡಿಯಾ ಪಕ್ಷದ ರಾಷ್ಟ್ರಾಧ್ಯಕ್ಷ ಪ್ರೊ.ಯೋಗೇಂದ್ರ ಯಾದವ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.