ಭ್ರಷ್ಟಾಚಾರ ನಿವಾರಣೆ ನಮ್ಮ ಹೊಣೆ
Team Udayavani, Jan 5, 2018, 11:29 AM IST
ಯಲಹಂಕ: ಭ್ರಷ್ಟಾಚಾರ, ಅನೈತಿಕತೆ, ತಾಂಡವವಾಡುತ್ತಿದೆ ಎಂದು ಎಲ್ಲರೂ ಆರೋಪಿಸುತ್ತಾರೆ. ಆದರೆ ಈ ಸ್ಥಿತಿಗೆ ನಾವೇ ಕಾರಣರಾಗಿದ್ದು, ಪರಿಸ್ಥಿತಿ ಸುಧಾರಿಸುವ ಹೊಣೆಗಾರಿಕೆಯನ್ನು ಕೂಡ ನಾವೇ ಹೊರಬೇಕು ಎಂದು ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಹೇಳಿದರು.
ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜ ಕಟ್ಟುವ ಕೆಲಸ ಇಂದಿನ ತುರ್ತು ಅಗತ್ಯವಾಗಿದೆ. ಇದರೊಂದಿಗೆ ಸಾರ್ವಜನಿಕ ಬದುಕಿನಲ್ಲಿ ಶಿಸ್ತು ಬೆಳೆಸಬೇಕಿದೆ. ಈ ನಿಟ್ಟಿನಲ್ಲಿ ಸಂಘಟನೆಯ ಕಾರ್ಯಕರ್ತರು ಸಕ್ರಿಯರಾಗಿ ಕಾರ್ಯೋನ್ಮುಖರಾದಾಗ ಮಾತ್ರ ಸಂಘಟನೆ ಜನರ ವಿಶ್ವಾಸ ಗಳಿಸಲು ಸಾಧ್ಯ ಎಂದರು.
ಹಿರಿಯ ಪತ್ರಕರ್ತ ಹರಿಶ್ಚಂದ್ರ ಮಾತನಾಡಿ, ರಾಜಕೀಯ ಪಕ್ಷಗಳು ತಿದ್ದಲು ಸಾದ್ಯವಾಗದಂತಹ ಭ್ರಷ್ಟ ವ್ಯವಸ್ಥೆಯನ್ನು ಲೇಖನಿಯಿಂದ ತಿದ್ದುವ ಕೆಲಸವಾಗಬೇಕು. ಇತ್ತೀಚೆಗೆ ಮಾಧ್ಯಮಗಳು ಸಂವೇದನೆ ಬದಲಿಗೆ ಸಂಪಾದನೆಯ ಉದ್ದಿಮೆಗಳಾಗಿದ್ದು, ಮನುಷ್ಯನ ಮನೋಧರ್ಮದ ಮೇಲೂ ಗಂಭೀರ ಪರಿಣಾಮ ಬೀರಿವೆ ಎಂದು ಆತಂಕ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ, ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ, ಸಂಘಟನೆ ಉಪಾಧ್ಯಕ್ಷ ಎಂ.ಡಿ.ಪುಟ್ಟೇಗೌಡ ಮತ್ತಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.