ಮಾನವ ಹಕ್ಕು ಉಲ್ಲಂಘನೆಗೆ ಭ್ರಷ್ಟತೆಯೂ ಕಾರಣ


Team Udayavani, Jul 17, 2017, 11:51 AM IST

human-rtights.jpg

ಬೆಂಗಳೂರು: ನಾಗರಿಕರಿಗೆ ಸಂವಿಧಾನಬದ್ಧವಾಗಿ ನೀಡಲಾಗಿರುವ ಹಕ್ಕುಗಳ ವಂಚನೆ ಮತ್ತು ಸರ್ಕಾರದ ಸೌಲಭ್ಯಗಳಿಗೆ ಲಂಚದ ಬೇಡಿಕೆ ಇಡುವುದು ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತದೆ. ಹೀಗಾಗಿ ಮಾನವಹಕ್ಕುಗಳ ವ್ಯಾಪಕ ಉಲ್ಲಂಘನೆಗೆ ಭ್ರಷ್ಟಾಚಾರ ಕಾರಣ ಎಂದು ಕರ್ನಾಟಕ ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ನ್ಯಾ. ಎಸ್‌.ಆರ್‌. ನಾಯಕ್‌ ಹೇಳಿದ್ದಾರೆ. 

“ಹ್ಯೂಮನ್‌ ರೈಟ್ಸ್‌ ಡಿಫೆಂಡರ್‌ ಫೋರಂ’ ವತಿಯಿಂದ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮಾನವ ಹಕ್ಕುಗಳ ಕುರಿತ ವಿಚಾರಸಂಕಿರಣ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಂಘಟನೆಗಳ ಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, “ಮಾನವಹಕ್ಕುಗಳ ರಕ್ಷಣೆಗೆ ಸಂವಿಧಾನವಿದೆ, ಕಾನೂನುಗಳಿವೆ. ಆದರೆ, ಸಮಾಜದ ಎಲ್ಲ ಹಂತಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆದಿರುವ ಭ್ರಷ್ಟಾಚಾರ ಇದಕ್ಕೆ ಬಹುದೊಡ್ಡ ತೊಡಕಾಗಿದೆ.

ಹಾಗಾಗಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಾಗ ಮಾತ್ರ ಮಾನವ ಹಕ್ಕುಗಳ ಉಲ್ಲಂಘನೆ ತಡೆಯಲು ಸಾಧ್ಯ. ಭ್ರಷ್ಟಾಚಾರ ನಿರ್ಮೂಲನೆ ಮಾಡಿದರೆ ಮಾನವ ಹಕ್ಕುಗಳ ರಕ್ಷಣೆಯ ಜೊತೆಗೆ ಆತನ ವ್ಯಕ್ತಿ ಘನತೆಯನ್ನು ಎತ್ತಿಹಿಡಿಯಬಹುದು. ಇದಕ್ಕಾಗಿ ಸಮಾಜದ ಪ್ರತಿಯೊಬ್ಬರು ತಮ್ಮ ಪಾಲಿನ ಕರ್ತವ್ಯ ನಿರ್ವಹಿಸಬೇಕು,’ ಎಂದು ನ್ಯಾ. ನಾಯಕ್‌ ಕರೆ ನೀಡಿದರು.

“ಮಾನವ ಹಕ್ಕುಗಳು ಮನುಷ್ಯನ ಏಳಿಗೆಗೆ ಮತ್ತು ಸಮಾಜದ ಪ್ರಗತಿಗೆ ಪೂರಕವಾಗಿದ್ದು, ದಬಾrಳಿಕೆ, ದೌರ್ಜನ್ಯ, ಅನ್ಯಾಯಗಳಿಂದ ನಲುಗುತ್ತಿರುವ ಪ್ರತಿಯೊಬ್ಬರನ್ನು ರಕ್ಷಿಸುವ ಧ್ಯೇಯ ಹೊಂದಿವೆ. ಆದರೆ, ಇತ್ತೀಚಿಗೆ ದೇಶ ಸೇರಿದಂತೆ ವಿಶ್ವದೆಲ್ಲಡೆ ಮಾನವ ಹಕ್ಕುಗಳ ವ್ಯಾಪಕ ಉಲ್ಲಂಘನೆ ನಡೆಯುತ್ತಿದೆ.

ಆ ಮೂಲಕ ಮನುಕುಲದ ಶಾಂತಿ ಮತ್ತು ಭದ್ರತೆ ಅಪಾಯಕ್ಕೊಳಗಾಗುತ್ತಿದೆ. ಹಾಗಾಗಿ ಮಾನವ ಹಕ್ಕುಗಳ ರಕ್ಷಣೆಗೆ ಕೇವಲ ಕಾನೂನುಗಳನ್ನು ಜಾರಿಗೆ ತಂದರೆ ಆಗದು, ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಈ ನಿಟ್ಟಿನಲ್ಲಿ ವ್ಯವಸ್ಥೆ ಮತ್ತು ಸಮಾಜವನ್ನು ಜಾಗೃತಗೊಳಿಸಬೇಕು,’ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸಿ.ಜಿ. ಹುನುಗುಂದ್‌, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ, ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷೆ ಡಾ. ಕೃಪಾ ಆಳ್ವ, ಹ್ಯೂಮನ್‌ ರೈಟ್ಸ್‌ ಡಿಫೆಂಡರ್‌ ಫೋರಂನ ರಾಜ್ಯಾಧ್ಯಕ್ಷ ಎನ್‌. ಶ್ರೀನಿವಾಸ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.