Arrested: ರಸ್ತೆಯಲ್ಲಿ ಕುಡಿಯಬೇಡಿ ಎಂದಿದ್ದಕ್ಕೆ ದಂಪತಿಗೆ ಥಳಿತ; ಮೂವರ ಬಂಧನ
Team Udayavani, Oct 31, 2024, 3:13 PM IST
ಬೆಂಗಳೂರು: ರಸ್ತೆಯಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದನ್ನು ಪ್ರಶ್ನಿಸಿದ ದಂಪತಿ ಮೇಲೆ ಹಲ್ಲೆ ನಡೆಸಿದ ಮೂವರನ್ನು ಬ್ಯಾಡರ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೇರೋಹಳ್ಳಿಯ ತುಂಗಾನಗರ ನಿವಾಸಿ ಆನಂದ್(30), ಸಂಜಯ್(28) ಮತ್ತು ಧನು (27) ಬಂಧಿತರು. ಆರೋಪಿಗಳು ಅ.27ರಂದು ರಾತ್ರಿ ಸ್ಥಳೀಯ ನಿವಾಸಿಗಳಾದ ಶಿವಗಂಗೇಗೌಡ (38) ಮತ್ತು ಅವರ ಪತ್ನಿ ಜಯಲಕ್ಷ್ಮೀ (35) ಮೇಲೆ ಹಲ್ಲೆ ನಡೆಸಿದ್ದರು.
ಏನಿದು ಘಟನೆ?: ದೂರುದಾರ ಶಿವಗಂಗೇಗೌಡ ತಮ್ಮ ಮನೆ ಬಳಿ ರಸ್ತೆ ಪಕ್ಕದಲ್ಲಿ ತಮ್ಮ ಕಾರು ಪಾರ್ಕ್ ಮಾಡಿದ್ದರು. ಇವರ ಮನೆಯ ಮುಂ ಭಾಗದ ಶೆಡ್‌ನಲ್ಲಿ ವಾಸವಾಗಿರುವ ಆರೋಪಿಗಳು, ಪ್ರತಿದಿನ ಕೆಲಸ ಮುಗಿಸಿಕೊಂಡು ಬಂದು ಮದ್ಯ ಸೇವಿಸುತ್ತಿದ್ದರು. ಭಾನುವಾರ ರಾತ್ರಿ 7 ಗಂಟೆಗೆ ಸುಮಾರಿಗೆ ತಮ್ಮ ಶೆಡ್ ಮುಂಭಾಗದಲ್ಲಿ ಮದ್ಯ ಸೇವಿಸುತ್ತಿದ್ದರು. ಈ ವೇಳೆ ಮೂವರು ಏರುಧ್ವನಿಯಲ್ಲಿ ಮಾತನಾಡಿದ್ದಾರೆ. ರಾತ್ರಿ 9 ಗಂಟೆಗೆ ಶಿವಗಂಗೇಗೌಡ ತಮ್ಮ ನಾಯಿಯನ್ನು ಹಿಡಿದುಕೊಂಡು ಮನೆಯಿಂದ ಹೊರಗೆ ಬಂದಿದ್ದಾರೆ. ಆಗಲೂ ಆರೋಪಿಗಳು ಅಲ್ಲೇ ಕುಳಿತು ಮದ್ಯ ಸೇವಿಸುತ್ತಿದ್ದರು. ಈ ವೇಳೆ ಇಲ್ಲಿಂದ ಎದ್ದು ಹೋಗಿ ಎಂದು ಶಿವಗಂಗೇಗೌಡ ಬುದ್ಧಿವಾದ ಹೇಳಿದ್ದಾರೆ. ಅಷ್ಟಕ್ಕೆ ಕೆರಳಿದ ಆರೋಪಿಗಳು ಮತ್ತು ದೂರುದಾರರ ನಡುವೆ ವಾಗ್ವಾದ ನಡೆದಿದೆ.
ಅದು ವಿಕೋಪಕ್ಕೆ ಹೋದಾಗ ಆರೋಪಿಗಳ ಪೈಕಿ ಒಬ್ಟಾತ ಚಾಕುವಿನಿಂದ ಶಿವಗಂಗೇಗೌಡರ ಕೈಗೆ ಇರಿದಿದ್ದಾನೆ. ಉಳಿದ ಆರೋಪಿಗಳು ಬ್ಯಾಟ್, ಇಟ್ಟಿಗೆಯಿಂದ ಮೇಲೆ ಹಲ್ಲೆ ಮಾಡಿದ್ದಾರೆ. ಪತಿಗೆ ಹಲ್ಲೆ ಮಾಡುತ್ತಿರುವುದನ್ನು ಕಂಡು ಹೊರಗೆ ಬಂದ ಜಯಲಕ್ಷ್ಮೀ ಮೇಲೂ ಆರೋಪಿಗಳು ಕ್ರಿಕೆಟ್ ಬ್ಯಾಟ್ ಹಾಗೂ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ
Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್
Bengaluru: ರೈಲಲ್ಲಿ ಬಿಟ್ಟು ಹೋಗಿದ್ದ 5 ಲಕ್ಷ ಚಿನ್ನ ಪ್ರಯಾಣಿಕನಿಗೆ ಹಸ್ತಾಂತರ
Bengaluru: ಬಸ್ ಕಂಡಕ್ಟರ್, ಡ್ರೈವರ್‌ಗೆ ತೀವ್ರ ಹಲ್ಲೆ: ಇಬ್ಬರು ಆರೋಪಿಗಳ ಬಂಧನ
Bengaluru: ಅನಿಲ ಸೋರಿಕೆಯಿಂದ ಬೆಂಕಿ ಅವಘಡ; ಎಸಿ ಮೆಕ್ಯಾನಿಕ್ ದುರ್ಮರಣ
MUST WATCH
ಹೊಸ ಸೇರ್ಪಡೆ
IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್ ಲಿಸ್ಟ್
Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ
Deepavali: ದೀಪ ಬೆಳಕಿನ ಸಂಕೇತ-ಸಂತಸ ಆತ್ಮವಿಶ್ವಾಸ ಹೆಚ್ಚಿಸುವ ದೀಪಾವಳಿ
Deepavali Festival: ಬೆಳಕು ಕತ್ತಲೆಯ ವೈರಿ…ದೀಪ ಹಚ್ಚುವ ಮಹತ್ವ ಅರಿಯೋಣ
Deepavali: ಬೆಳಕು ಅರಿವಿನ ಮೂಲ-ಸಕಲ ಜೀವಿಗಳಿಗೂ ಬೇಕು ಬೆಳಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.