ಸೌಜನ್ಯ ಪ್ರಕರಣ: ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
Team Udayavani, Apr 12, 2017, 10:47 AM IST
ಬೆಂಗಳೂರು:ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ತನಿಖೆ ನಡೆಸುವಂತೆ ಸೂಚಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶಕ್ಕೆ ಮಂಗಳವಾರ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಲೋಪಗಳಿವೆ ಎಂದು ಸೌಜನ್ಯ ತಂದೆ ಚಂದ್ರಪ್ಪಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸಿಬಿಐ ವಿಶೇಷ ನ್ಯಾಯಾಲಯ ಫೆ. 7ರಂದು, ಪ್ರಕರಣ ಸಂಬಂಧ ಹೆಚ್ಚುವರಿ ತನಿಖೆ ನಡೆಸುವಂತೆ ಆದೇಶಿಸಿತ್ತು. ನ್ಯಾಯಾಲಯದ ಈ ಆದೇಶ ರದ್ದುಪಡಿಸುವಂತೆ ಕೋರಿ ಧೀರಜ್ ಜೈನ್ಸೇರಿದಂತೆ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ್ ಭೈರಾರೆಡ್ಡಿ ಅವರಿದ್ದ ವಿಭಾಗೀಯ ಪೀಠ, ಸಿಬಿಐ ನ್ಯಾಯಾಲಯದ ಹೆಚ್ಚುವರಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು.
ಅರ್ಜಿದಾರ ವಕೀಲರಾದ ಪಿ.ಪಿ ಹೆಗಡೆ ವಾದ ಮಂಡಿಸಿ, ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸರು, ಸಿಐಡಿ, ಸಿಬಿಐ, ಚೆನೈ ಸಿಬಿಐ ತಂಡ ತನಿಖೆ ನಡೆಸಿ ಸಂತೋಷ್ರಾವ್ ಆರೋಪಿ ಎಂದು ಚಾರ್ಜ್ಶೀಟ್ ಸಲ್ಲಿಸಿವೆ. ಅಲ್ಲದೆ ಈ ಪ್ರಕರಣದಲ್ಲಿ 19 ಮಂದಿಯ ಹೇಳಿಕೆಯನ್ನು ಪಡೆದುಕೊಳ್ಳಲಾಗಿದೆ. ಜತೆಗೆ ತಮ್ಮ ಕಕ್ಷಿದಾರರಾದ ಧೀರೇಂದ್ರ ಜೈನ್ ಹಾಗೂ ಇತರರನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪ್ರಕರಣದಲ್ಲಿ ಅವರ ಪಾತ್ರವಿಲ್ಲ ಎಂಬುದು ಸಾಬೀತಾಗಿದೆ.
ಹೀಗಿದ್ದರೂ ಆರೋಪಿ ಸಂತೋಷ್ರಾವ್ಗೆ ಶಿಕ್ಷೆಯಾಗುವ ಸಂಧರ್ಭದಲ್ಲಿ ಐದನೇ ಬಾರಿ ತನಿಖೆಗೆ ಆದೇಶಿಸಿರುವ ಕ್ರಮ ಸರಿಯಿಲ್ಲ.ಯಾವುದೇ ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಸಿದ ಬಳಿಕ ನ್ಯಾಯಾಲಯವೇ ಹೆಚ್ಚುವರಿ ತನಿಖೆಗೆ ಆದೇಶಿಸುವ ಅಧಿಕಾರವಿಲ್ಲ. ಒಂದು ವೇಳೆ ತನಿಖಾ ಸಂಸ್ಥೆ ಮನವಿ ಮಾಡಿದರೆ ಮಾತ್ರ ನ್ಯಾಯಾಲಯ ಹೆಚ್ಚುವರಿ ತನಿಖೆಗೆ ಆದೇಶಿಸಬಹುದು ಎಂದು ಸುಪ್ರೀಂಕೋರ್ಟ್ ಕೂಡ ಉಲ್ಲೇಖೀಸಿದೆ. ಪ್ರಕರಣದ ಆರೋಪಿ ಸಂತೋಷ್ರಾವ್ನನ್ನು ಶಿಕ್ಷೆಯಿಂದ ಪಾರು ಮಾಡಲು ಮತ್ತೂಮ್ಮೆ ತನಿಖೆಗೆ ಕೋರಲಾಗಿದೆ ಎಂದು ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.