Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Team Udayavani, Jan 8, 2025, 11:25 AM IST
ನವದೆಹಲಿ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಟೆಕಿ ಅತುಲ್ ಸುಭಾಷ್ ಅವರ ಮಗನನ್ನು ಅತುಲ್ ತಾಯಿಯ ಸುಪರ್ದಿಗೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಮೊಮ್ಮಗನನ್ನು ತಮ್ಮ ಜೊತೆಗೆ ಕಳುಹಿಸಬೇಕು ಎಂದು ಅತುಲ್ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, “ಮಗುವಿಗೆ ಅರ್ಜಿದಾರರ ಪರಿಚಯವೇ ಇಲ್ಲ. ಹೀಗಾಗಿ, ಮಗುವನ್ನು ನಿಮ್ಮ ಸುಪರ್ದಿಗೆ ವಹಿಸಲು ಆಗುವುದಿಲ್ಲ. ನೀವು ಇಚ್ಛಿಸಿದರೆ ಮಗುವನ್ನು ಭೇಟಿಯಾಗಬಹುದು’ ಎಂದು ಹೇಳಿದೆ.
ಅಲ್ಲದೆ, ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಅವರು ಆರೋಪಿಯೇ ಹೊರತು, ಅವರ ವಿರುದ್ಧದ ಆರೋಪ ಇನ್ನೂ ಸಾಬೀತಾಗಿಲ್ಲ. ಮಾಧ್ಯಮಗಳ ತೀರ್ಪನ್ನು ಆಧರಿಸಿ ನಾವು ತೀರ್ಪು ನೀಡಲು ಬರುವುದಿಲ್ಲ ಎಂದ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆ ಅಂದರೆ ಜ.20ರಂದು ಮಗುವನ್ನು ಕೋರ್ಟ್ಗೆ ಹಾಜರುಪಡಿಸುವಂತೆ ಸೂಚಿಸಿತು.
ಇದೇ ವೇಳೆ, 4 ವರ್ಷದ ಮಗು ಸದ್ಯಕ್ಕೆ ಹರ್ಯಾಣದ ಫರೀದಾಬಾದ್ನ ಬೋರ್ಡಿಂಗ್ ಸ್ಕೂಲ್ನಲ್ಲಿದೆ. ನಿಖಿತಾ ಅವರಿಗೆ ಜಾಮೀನು ಸಿಕ್ಕಿರುವ ಕಾರಣ, ಮಗುವನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ನಿಖೀತಾ ಪರ ವಕೀಲರು ನ್ಯಾಯಪೀಠಕ್ಕೆ ಅರಿಕೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.