ಬೊಮ್ಮನಹಳ್ಳಿ ವಲಯ: ಪ್ರತಿ ವಾರ್ಡ್‍ಗಳಲ್ಲಿ ಕೋವಿಡ್ 19 ವಾರ್ ರೂಂ ಸ್ಥಾಪನೆ
ಉಸ್ತುವಾರಿ ಸಚಿವ ಸುರೇಶ್ ಕುಮಾರ್
Team Udayavani, Jul 24, 2020, 8:00 PM IST
ಬೆಂಗಳೂರು: ಕೋವಿಡ್ 19 ನಿಯಂತ್ರಣದ ಸಂಬಂಧದಲ್ಲಿ ಬೊಮ್ಮನಹಳ್ಳಿ ವಲಯದ ಎಲ್ಲ ವಾರ್ಡ್‍ಗಳಲ್ಲಿಯೂ ಕೊವಿಡ್ ವಾರ್ ರೂಂ ಆರಂಭಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್‍ಕುಮಾರ್ ಸೂಚಿಸಿದ್ದಾರೆ.
ಶುಕ್ರವಾರ ಬೊಮ್ಮನಹಳ್ಳಿ ವಲಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಕಂಟೈನ್‍ಮೆಂಟ್ ವಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು ಬೊಮ್ಮನಹಳ್ಳಿ ವಲಯದ 3 ಲಕ್ಷ ಮನೆಗಳಿಗೆ ಸೋಮವಾರದ ಒಳಗೆ ಕೋವಿಡ್ ಜಾಗೃತಿ ಕರಪತ್ರಗಳನ್ನು ವಿತರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ವಾರ್ಡ್‍ನಲ್ಲಿ ಸ್ಥಾಪನೆಯಾಗುವ ಕೋವಿಡ್ ವಾರ್ ರೂಂನಲ್ಲಿ ಸಾರ್ವಜನಿಕರು ಕೋವಿಡ್ ಸಂಬಂಧದಲ್ಲಿ ಅಹವಾಲುಗಳನ್ನು ಸಲ್ಲಿಸಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದು. ಹಾಗೆಯೇ ವಲಯದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹೈಸ್ಪೀಡ್ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ವಲಯದ ಕೋವಿಡ್ ಉಸ್ತುವಾರಿ ಐಎಎಸ್ ಅಧಿಕಾರಿ ಮಣಿವಣ್ಣನ್ ಅವರಿಗೆ ಸಚಿವರು ಸೂಚಿಸಿದರು.
ಬೊಮ್ಮನಹಳ್ಳಿ ವಲಯದ ಸಿಂಗಸಂದ್ರ, ಅರಕೆರೆ ಮತ್ತು ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ಸಂರಕ್ಷಣಾ ಕ್ರಮಗಳನ್ನು ಪರಿಶೀಲನೆ ನಡೆಸಿ ವೈದ್ಯರು ಹಾಗೂ ಸಿಬ್ಬಂದಿಗೆ ಕೆಲ ಸೂಚನೆ ನೀಡಿದ ಸುರೇಶ್ ಕುಮಾರ್, ಚಿಕಿತ್ಸೆಗಾಗಿ ಬಂದಿದ್ದ ಸಾರ್ವಜನಿಕರೊಂದಿಗೆ ಆಸ್ಪತ್ರೆಯಲ್ಲಿನ ಸೌಲಭ್ಯಗಳು ಮತ್ತು ಚಿಕಿತ್ಸೆ ಕುರಿತಂತೆ ಸಂವಾದ ನಡೆಸಿದರು.
ವಲಯದ ಹೊಂಗಸಂದ್ರ ಮತ್ತು ಅಂಜನಾಪುರ ಕಂಟೈನ್‍ಮೆಂಟ್ ವಲಯಗಳಿಗೆ ಭೇಟಿ ನೀಡಿ ಅಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು. ಕಂಟೈನ್‍ಮೆಂಟ್ ವಲಯದ ಜನರಿಗೆ ಅಗತ್ಯವಾದ ಮೂಲಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸ್ಥಳದಲ್ಲಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಇದೇ ವೇಳೆ ಟೊಯೋಟ ಕಂಪನಿಯ ವತಿಯಿಂದ ಉಚಿತವಾಗಿ ನೀಡಲಾದ ಆಂಬುಲೆನ್ಸ್ ಸೇವೆಗೆ ಸಚಿವರು ಚಾಲನೆ ನೀಡಿದರು.
ಕೆಲ ಬಿಬಿಎಂಪಿ ಅಧಿಕಾರಿಗಳು ಸಭೆಗೆ ಗೈರು ಹಾಜರಾಗಿರುವುದಕ್ಕೆ ಸಿಡಿಮಿಡಿಗೊಂಡ ಸಚಿವರು, ಅಂತಹ ಅಧಿಕಾರಿಗಳಿಗೆ ನೊಟೀಸ್ ನೀಡಬೇಕೆಂದು ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತ ರಾಮಕೃಷ್ಣರಿಗೆ ಸೂಚಿಸಿದರು. ಸಚಿವರು ಬೊಮ್ಮನಹಳ್ಳಿ ವಲಯ ಉಸ್ತುವಾರಿ ವಹಿಸಿಕೊಂಡ 14 ದಿನಗಳಲ್ಲಿ ಈ ವಲಯಕ್ಕೆ ಇದು ಸಚಿವರ ಏಳನೇ ಭೇಟಿಯಾಗಿದೆ.
ಸಚಿವರೊಂದಿಗೆ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ, ಎಂ. ಕೃಷ್ಣಪ್ಪ, ಉಸ್ತುವಾರಿ ಐಎಎಸ್ ಅಧಿಕಾರಿ ಮಣಿವಣ್ಣನ್, ಬಿಬಿಎಂಪಿ ಹಾಗೂ ಪೋಲೀಸ್ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.