1.5 ಲಕ್ಷಕ್ಕೆ ಹೆಚ್ಚಿದ ಸೋಂಕಿತರ ಸಂಖ್ಯೆ
Team Udayavani, Sep 8, 2020, 12:22 PM IST
ಬೆಂಗಳೂರು: ನಗರದಲ್ಲಿ ಸೋಮವಾರ 2,942 ಕೋವಿಡ್ ಸೋಂಕಿತ ಪ್ರಕರಣಗಳು ಕಂಡು ಬಂದಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ ಇದೀಗ 1,50,523ಕ್ಕೆ ಏರಿಕೆಯಾಗಿದೆ. ಕೋವಿಡ್ ಗೆ ಮತ್ತೆ 33 ಪರುಷರು ಮತ್ತು 15 ಮಹಿಳೆಯರು ಸೇರಿದಂತೆ 48 ಮಂದಿ ಬಲಿಯಾಗಿದ್ದಾರೆ.
ಸಾವಿನ ಪ್ರಮಾಣ ಶೇ.1.47 ರಷ್ಟಿದೆ. ಕಳೆದ ಹದಿನೇಳು ದಿನದಲ್ಲಿ ಒಟ್ಟು 50 ಸಾವಿರ ಹೊಸ ಕೋವಿಡ್ ಸೋಂಕು ದೃಢಪಟ್ಟಿದೆ. ಹಾಗೆಯೇ ಹೊಸದಾಗಿ 2,935 ಕೋವಿಡ್-19 ಸೋಂಕಿತರು ಬಿಡುಗಡೆ ಆಗಿದ್ದು ಈ ಮೂಲಕ ಕೊರೊನಾ ಸೋಂಕಿನಿಂದ ವಿವಿಧ ಆಸ್ಪತ್ರೆಗಳಿಂದ ಚೇತರಿಸಿಕೊಂಡು ಬಿಡುಗಡೆ ಆಗುತ್ತಿರುವವ ಸಂಖ್ಯೆ 1,08,642ಕ್ಕೆ ಏರಿದೆ.
ಚೇತರಿಕೆ ಪ್ರಮಾಣ ಶೇ.71.62 ರಷ್ಟಿದೆ. ಪ್ರಸ್ತುತ 39,669 ಸಕ್ರಿಯ ಪ್ರಕರಣಗಳು ನಗರದಲ್ಲಿದ್ದು, ಅಲ್ಲದೆ 265 ಮಂದಿ ತೀವ್ರ ನಿಗಾಘಟಕಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ 22,713 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಇದುವರೆಗೂ 10,60,813 ಮಂದಿಯ ತಪಾಸಣೆ ಮಾಡಲಾಗಿದೆ.
ಸೋಂಕು: ಆರ್‌ಎಂಸಿ ಯಾರ್ಡ್ ಠಾಣೆ ಎಎಸ್‌ಐ ಸಾವು :ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ವೊಬ್ಬರು ಮೃತಪಟ್ಟಿದ್ದಾರೆ.
ಆರ್‌ಎಂಸಿ ಯಾರ್ಡ್ ಠಾಣೆಯ ಎಎಸ್‌ಐ ಸೋಮಶೇಖರ್ (58) ಮೃತರು. ಕೆಲದಿನಗಳ ಹಿಂದೆ ಎಎಸ್‌ಐ ಸೋಮಶೇಖರ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ಮುಂದುವರಿದಿದ್ದು ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ವಿಜಯನಗರದ ಮೂಡಲಪಾಳ್ಯದಲ್ಲಿ ಕುಟುಂಬದ ಜತೆ ವಾಸಿಸುತ್ತಿದ್ದ ಮೃತ ಸೋಮಶೇಖರ್ ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ ಎಂದು ಪೊಲೀಸರು ತಿಳಿಸಿದರು. ಶನಿವಾರ ತಡರಾತ್ರಿ ಯಷ್ಟೇ ಇದೇ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರಾಘವೇಂದ್ರ ಸೋಂಕಿನಿಂದ ಮೃತಪಟ್ಟಿದ್ದರು. ಎರಡೇ ದಿನಗಳ ಅಂತರದಲ್ಲಿ ಇಬ್ಬರು ಸಹೋದ್ಯೋಗಿಗಳನ್ನು ಕಳೆದುಕೊಂಡು ಸಿಬ್ಬಂದಿ ಆಘಾತ ಕ್ಕೊಳಗಾಗಿದ್ದು ಅಗಲಿದ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.
………………………………………………………………………………………………………………………………………………………
ಕೋವಿಡ್ ಕೇರ್ ಸಿಬ್ಬಂದಿಯಿಂದ ಧರಣಿ : ಬೆಂಗಳೂರು: ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದಲ್ಲಿ ಬಿಬಿಎಂಪಿ ನಡೆಸುತ್ತಿರುವ ಕೊವಿಡ್ ಆರೈಕೆ ಕೇಂದ್ರದಲ್ಲಿನ ಸಿಬ್ಬಂದಿಗೆ ವೇತನ ನೀಡಿಲ್ಲ ಎಂದು ಆರೋಪಿಸಿ ಇಲ್ಲಿನ ಸಿಬ್ಬಂದಿ ಬಿಬಿಎಂಪಿ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದಲ್ಲಿ ಕೊರೊನಾ ಸೌಮ್ಯ ಲಕ್ಷಣ ಇರುವವರ ಆರೈಕೆಗೆ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಗುರೂಜಿ ಆಶ್ರಮದಲ್ಲಿ ಬಿಬಿಎಂಪಿ ವತಿಯಿಂದ ಕೋವಿಡ್ ಆರೈಕೆ ಕೇಂದ್ರವನ್ನು ಪ್ರಾರಂಭಿಸಲಾಗಿದ್ದು, 140 ಮಂದಿ ಕೋವಿಡ್ ಸೋಂಕಿತರಿಗೆ ಆರೈಕೆ ನೀಡಲಾಗುತ್ತಿದೆ. ಇದೀಗ ಇಲ್ಲಿನ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿರುವುದರಿಂದ ಕೋವಿಡ್ ಆರೈಕೆ ಕೇಂದ್ರದಲ್ಲಿ ಆರೈಕೆಗೆ ದಾಖಲಾಗಿರುವ ಸೋಂಕಿತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಲಿಕೆಯು ನಗರದಲ್ಲಿ ಕೋವಿಡ್ ಸೋಂಕು ದೃಢಪಟ್ಟು ಸೌಮ್ಯ ಲಕ್ಷಣ ಸೋಂಕಿತರಿಗೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಆರೈಕೆ ನೀಡುತ್ತಿದೆ. ವಿವಿಧ ಕೋವಿಡ್ ಆರೈಕೆ ಕೇಂದ್ರದ ವ್ಯವಸ್ಥೆಯ ಬಗ್ಗೆ ಮೊದಲಿನಿಂದಲೂ ದೂರುಗಳು ಕೇಳಿಬರುತ್ತಲೇ ಇವೆ. ಈ ಮಧ್ಯೆ ಕೆಲವು ಕೋವಿಡ್ ಕೇರ್ ಸೆಂಟರ್ ನಿರ್ವಹಣೆಗೆ ವೇತನ ನೀಡಿಲ್ಲ ಎಂದು ಸಿಬ್ಬಂದಿ ಹಾಗೂ ಗುತ್ತಿಗೆದಾರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.