ಕೋವಿಡ್ ಪ್ರಕರಣ ಹೆಚ್ಚಳ : ಬೆಂಗಳೂರು ನಗರ ಜಿಲ್ಲೆಯಲ್ಲಿ 6-9ನೇ ಭೌತಿಕ ತರಗತಿ ಸ್ಥಗಿತ
ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು.
Team Udayavani, Apr 1, 2021, 9:31 PM IST
ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಪ್ರಸ್ತುತ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ 6-9ನೇ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಲ್ಲಿಸಲಾಗುತ್ತಿದೆ ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ.
ಗುರುವಾರ ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದಿದ್ದಾರೆ.
ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಪರೀಕ್ಷೆ: ಕಡ್ಡಾಯ ಶಿಕ್ಷಣ ಕಾಯಿದೆಯ ಅವಕಾಶಗಳಡಿಯಲ್ಲಿ 6-9ನೇ ತರಗತಿಗಳಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಮುಂದಿನ ದಿನಗಳಲ್ಲಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.