ಕೋವಿಡ್ ಕರಾಳತೆ :ಮೃತಪಟ್ಟು 3 ದಿನವಾದ್ರೂ ಅಂತ್ಯಸಂಸ್ಕಾರ ಪಡೆಯದ ದೇಹ

Team Udayavani, Apr 28, 2021, 1:28 PM IST

cdcsc

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ ಸೋಂಕಿನ ಮೃತಪಟ್ಟ ತಾಯಿ ಯನ್ನು ನೆನೆದು ಕಣ್ಣೀರಿಡುತ್ತಿದ್ದ ಮಗಳು.ತಾಯಿಯ ಅಂತ್ಯ ಸಂಸ್ಕಾರ ಮಾಡಿ ಎಂದು ಮನವಿ ಮಾಡಿ ದರೂ ಒಪ್ಪದ ಚಿತಾಗಾರದ ಸಿಬ್ಬಂದಿ. ಹೀಗೆ ಮೂರು ದಿನವೂ ತಾಯಿಯ ಮೃತದೇಹವನ್ನು ಚಿತಾಗಾರಕ್ಕೆ ತಂದು ವಾಪಸ್‌ ಕಳುಹಿಸಿದ ಸಿಬ್ಬಂದಿ.

ತಾಯಿ ಮೃತಪಟ್ಟು ಮೂರು ದಿನವಾದರೂ ಮುಕ್ತಿನೀಡಲಾಗಲಿಲ್ಲ’ ಎಂದು ಗೋಳಾಡಿದ ಮಗಳು. ಇದು.. ಮಂಗಳವಾರ ತನ್ನ ತಾಯಿಯನ್ನು ಕಳೆದುಕೊಂಡ ಮಗಳು ಮೂರು ದಿನವಾದರೂ ಅಮ್ಮನಿಗೆ ಮುಕ್ತಿ ನೀಡಲಾಗದೆ ನಗರದ ಪಣತ್ತೂರು ಚಿತಾಗಾರದ ಬಳಿ ಕಣ್ಣೀರಿಟ್ಟ ಮನಕಲಕುವ ದೃಶ್ಯ. ನಗರದಲ್ಲಿ ಕೊರೊನಾ ಎರಡನೇ ಅಲೆಯಿಂದ ನಿತ್ಯ ಸೋಂಕಿತರ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಮೃತದೇಹ ಗಳ ಅಂತ್ಯಸಂಸ್ಕಾರಕ್ಕಾಗಿ ಚಿತಾಗಾರದಲ್ಲಿ ದಿನವಿಡೀ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ನಿತ್ಯ ಊಹಿಸಲು ಅಸಾಧ್ಯವಾದ ಹಲವು ಘನಘೋರಘಟನೆಗಳು ಸಂಭವಿಸುತ್ತಿವೆ.

ಈ ನಡುವೆ ಸೋಂಕಿತ ಮಹಿಳೆ ಮೃತಪಟ್ಟು ಮೂರು ದಿನವಾದರೂ ಶವಸಂಸ್ಕಾರ ನೆರವೇರದೆ ಮತ್ತೆ ಮೃತದೇಹವನ್ನು ಆಸ್ಪತ್ರೆಗೆ ಕೊಂಡೊಯ್ದ ಇಂಥಹದ್ದೇ ಒಂದು ಮನಕಲಕುವಘಟನೆ ನಗರದಲ್ಲಿ ನಡೆದಿದೆ. ಕಳೆದ ಮೂರು ದಿನದಿಂದ ಅಂತ್ಯಸಂಸ್ಕಾರಕ್ಕಾಗಿ ಸ್ಮಶಾನ ವನ್ನು ಹುಡುಕುವ ಪರಿಸ್ಥಿತಿ ಎದುರಾಗಿದೆ. ಚಿತಾಗಾರ ಖಾಲಿ ಇಲ್ಲದೇ ಶವಸಂಸ್ಕಾರ ಮಾಡಲಾಗದ ಕಾರಣ ಮಹಿಳೆಯ ದೇಹವನ್ನು ಆಸ್ಪತ್ರೆಗೆ ಹಿಂತಿರುಗಿಸಲಾಗಿದೆ.

ಏ.24ರಂದು ಇಂದಿರಾನಗರದ ಆಸ್ಪತ್ರೆಯಲ್ಲಿ58 ವರ್ಷದ ಮಹಿಳೆ ಕೊರೊನಾದಿಂದ ಸಾವನ್ನಪ್ಪಿದ್ದರು. ಬಳಿಕ, ಖಾಸಗಿ ಆ್ಯಂಬುಲೆನ್ಸ್‌ ಮೂಲಕ ಮೃತದೇಹವನ್ನು ಕುಟುಂಬಸ್ಥರು ಪಣತ್ತೂರು ಚಿತಾಗಾರಕ್ಕೆತೆಗೆದು ಕೊಂಡು ಹೋಗಿದ್ದರು. ಆದರೆ, ಚಿತಾಗಾರ ಖಾಲಿ ಇಲ್ಲ. ಬಿಬಿಎಂಪಿ ವಾಹನದಲ್ಲಿ ಬರುವ ಮೃತದೇಹ ಗಳನ್ನು ಮಾತ್ರ ಅಂತ್ಯಸಂಸ್ಕಾರ ಮಾಡುತ್ತೇವೆ ಎಂದು ಸಿಬ್ಬಂದಿ ವಾಪಸ್‌ ಕಳುಹಿಸಿದ್ದಾರೆ. ಸೋಮವಾರ ರಾತ್ರಿ ಇಡೀ ಚಿತಾಗಾರದಲ್ಲಿಯೇ ಕಾದು ಕುಳಿತಿದ್ದರೂ ಅಂತ್ಯಸಂಸ್ಕಾರ ಮಾಡಲು ಸಾಧ್ಯವಾಗದೇ ಶವವನ್ನು ಹಿಂತಿರುಗಿಸಿದ್ದಾರೆ.

ಹೀಗಾಗಿ,ಮಗಳು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಐಸಿ ಯುನಲ್ಲಿ ಇಟ್ಟಿದ್ದಾರೆ. ಮಂಗಳವಾರ ಮತ್ತೆ ಅಂತ್ಯ ಸಂಸ್ಕಾರಕ್ಕೆಮೃತ ದೇಹವನ್ನು ತೆಗೆದುಕೊಂಡು ಬಂದಿದ್ದು, ಇಂದೂಅಂತ್ಯಸಂಸ್ಕಾರ ನೆರವೇರಿಸಲು ಸಾಧ್ಯ ವಾಗುತ್ತಿಲ್ಲ ಎಂದು ಸಂಬಂಧಿಕರು ಕಣ್ಣೀರಿಟ್ಟಿದ್ದಾರೆ.

ಮೂರು ದಿನವಾದರೂ ಸಿಗದ ಮುಕ್ತಿ: “ನಮ್ಮ ತಾಯಿಕೊರೊನಾದಿಂದ ಶನಿವಾರ ಸಾವನ್ನಪ್ಪಿದರು. ಬಳಿಕ,ಖಾಸಗಿ ಆ್ಯಂಬುಲೆನ್ಸ್‌ನಲ್ಲಿ ಮೃತದೇಹವನ್ನು ಚಿತಾಗಾರಕ್ಕೆ ತಂದೆವು. ಆದರೆ ಸಿಬ್ಬಂದಿ, ಬಿಬಿಎಂಪಿ ವಾಹನದಲ್ಲಿಬಂದರೆ ಮಾತ್ರ ಅಂತ್ಯ ಸಂಸ್ಕಾರ ಮಾಡುತ್ತೇವೆ. ಖಾಸಗಿ ವಾಹನದಲ್ಲಿ ಬಂದರೆ ಅಂತ್ಯಸಂಸ್ಕಾರಮಾಡಲ್ಲ ಎಂದು ವಾಪಸ್‌ ಕಳುಹಿಸಿದರು. ಮಂಗಳವಾರ ಬೆಳಗ್ಗೆ 6 ಗಂಟೆಗೆ ಬಂದು ಮನವಿ ಮಾಡಿದರೂ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡುತ್ತಿಲ್ಲ. ಮೂರು ದಿನವಾದರೂ ತಾಯಿಯ ಶವ ಸಂಸ್ಕಾರ ಮಾಡಲುನಮ್ಮಿಂದ ಸಾಧ್ಯವಾಗಲಿಲ್ಲ’ ಎಂದು ತಾಯಿಯನ್ನುನೆನೆದು ಮಗಳು ಕಣ್ಣೀರಿಟ್ಟರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.