ಕಲಿಕೆ ನಿರಂತರತೆ ಅಧ್ಯಯನಕ್ಕೆ ಸಮಿತಿ
Team Udayavani, May 20, 2021, 3:17 PM IST
ಬೆಂಗಳೂರು: ಕೊರೊನಾದಿಂದ ಶಾಲಾ ಮಕ್ಕಳ ಶೈಕ್ಷಣಿಕಚಟುವಟಿಕೆ ಹಾಗೂ ಕಲಿಕೆ ನಿರಂತರತೆಗಾಗಿ ತಜ್ಞರ ಸಮಿತಿ ರಚಿಸಿ, ತಿಂಗಳೊಳಗೆ ವರದಿ ಪಡೆಯಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ.
2021-22ನೇ ಸಾಲಿನ ಶೈಕ್ಷಣಿಕ ವರ್ಷವೂ ನಿಗದಿಯಂತೆ ಆರಂಭವಾಗುವುದು ಕಷ್ಟಎಂಬುದನ್ನು ಅರಿತಸಚಿವರು ಬುಧವಾರವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆ ನಂತರ ಮಾತನಾಡಿದ ಅವರು, ವಿಶೇಷವಾಗಿಗ್ರಾಮೀಣ ಹಾಗೂ ಸರ್ಕಾರಿಶಾಲಾ ಮಕ್ಕಳನ್ನು ಕಲಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು, ಶಿಕ್ಷಣಹಕ್ಕಿನ ರಕ್ಷಣೆಗಾಗಿ ಪರ್ಯಾಯ ಕ್ರಮಗಳ ಬಗ್ಗೆ ಸಮಿತಿಯು ರೂಪುರೇಷೆ ಸಿದ್ಧಪಡಿಸಲಿದೆ ಎಂದರು.
ಸಮಿತಿಯಲ್ಲಿ ಶಿಕ್ಷಣ ತಜ್ಞರು, ಭಾರತೀಯ ವಿಜ್ಞಾನ ಸಂಸ್ಥೆಪ್ರತಿನಿಧಿಗಳು, ನಿಮ್ಹಾನ್ಸ್ ಪ್ರತಿನಿಧಿಗಳು, ರಾಜ್ಯದ ಆರೋಗ್ಯ ಇಲಾಖೆಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರು, ಖಾಸಗಿ ಶಾಲೆಗಳ ಪ್ರತಿನಿಧಿ, ಪೋಷಕ ಸಂಘಟನೆಯ ಪ್ರತಿನಿಧಿಗಳು, ಶಿಕ್ಷಕಅಥವಾ ಉಪನ್ಯಾಸಕರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಇರಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.