ಆರೋಪಕ್ಕೆ ತಲೆಬಾಗದೆ ಲಸಿಕೆ ಮುಂದುವರಿಸಿ
Team Udayavani, Sep 20, 2021, 1:36 PM IST
ಬೆಂಗಳೂರು: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶದಂತೆ ಕಾರ್ಮಿಕ ಇಲಾಖೆರಾಜ್ಯಾದ್ಯಂತ ಸಂಘಟಿತ, ಅಸಂಘಟಿತ ಮತ್ತು ವಲಸೆಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ ಮೂಲಕ ಕಾರ್ಮಿಕರಿಗೆ ಆಸರೆಯಾಗಿದೆ.
ಆದರೂ ಕೂಡ ಕೆಲಕಾರ್ಮಿಕ ಸಂಘಟನೆಗಳು ತಮ್ಮ ಸ್ವಪ್ರತಿಷ್ಠೆಗಾಗಿ ಕಾರ್ಮಿಕ ಇಲಾಖೆಯನ್ನು ದೂಷಿಸುತ್ತಿವೆ ಎಂಬ ಮಾತುಗಳುಕಾರ್ಮಿಕ ವಲಯದಲ್ಲಿ ಈಗ ಕೇಳಿ ಬಂದಿದೆ.ಒಂದು ಅಂದಾಜಿನ ಪ್ರಕಾರ ರಾಜ್ಯದಲ್ಲಿ ಸಂಘಟಿತಮತ್ತು ಅಸಂಘಟಿತ ವಲಯಕ್ಕೆ ಸೇರಿದ 1 ಕೋಟಿಗೂಅಧಿಕ ಕಾರ್ಮಿಕರಿದ್ದು ವಿವಿಧ ವಲಯದಲ್ಲಿ ದುಡಿಯುತ್ತಿದ್ದಾರೆ. ಇದರಲ್ಲಿ ಕಟ್ಟಡ ಕಾರ್ಮಿಕರಿಗಾಗಿ ಕಾರ್ಮಿಕಇಲಾಖೆ ಲಸಿಕೆ ನೀಡುವ ಬೃಹತ್ ಅಭಿಯಾನಹಮ್ಮಿಕೊಂಡಿತ್ತು.
ಆದರೆ ರಾಜ್ಯದಲ್ಲಿರುವ ಹತ್ತು ಹಲವು ಕಾರ್ಮಿಕರ ಸಂಘಟನೆಗಳಲ್ಲಿ ಕೇವಲ ಒಂದು ಕಾರ್ಮಿಕ ಸಂಘಟನೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಬೀದಿ ಹೋರಾಟಮಾಡಿತು. ಆ ಹೋರಾಟವನ್ನು ಪರಿಗಣಿಸಿದ ಸರ್ಕಾರ ಕಾರ್ಮಿಕ ಲಸಿಕೆ ಅಭಿಯಾನವನ್ನು ಕೈಬಿಟ್ಟಿರುವುದುಎಷ್ಟು ಸರಿ ಪ್ರಶ್ನೆ ಕಾರ್ಮಿಕ ವಲಯದಲ್ಲಿ ಹುಟ್ಟು ಹಾಕಿದೆ ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಹಿತರಕ್ಷಣಾಯೂನಿನ್‌ನ ಅಧ್ಯಕ್ಷ ಡಿ.ಸಿ.ಪಾಪಣ್ಣ ಆರೋಪಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಸಿಗುತ್ತಿದೆ.ಹೀಗಾಗಿ ಕಾರ್ಮಿಕ ಕಲ್ಯಾಣ ನಿಧಿಯಿಂದ ಕಾರ್ಮಿಕರಿಗೆಲಸಿಕೆ ಬೇಡ ಎಂದು ವಿರೋಧಿಸಲಾಗುತ್ತಿದೆ. ಲಸಿಕೆಗಾಗಿಯಾವುದೇ ಹಣ ಬಳಕೆ ಮಾಡಿದರೂ ಅದು ಹಣವೇ.ಕಟ್ಟಡ ಕಾರ್ಮಿಕರ ಸೆಸ್ ಹಣವನ್ನು ಕಟ್ಟಡಕಾರ್ಮಿಕರಿಗಾಗಿ ಬಳಸಿದರೆ ತಪ್ಪೇನು? ಎಂದುಪ್ರಶ್ನಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಾಗಿ ಹಣನೀಡಲಾಗುತ್ತಿದೆ ಎಂಬ ವಾದವನ್ನು ಮುಂದಿಟ್ಟು ಕೊಂಡುಕಾರ್ಮಿಕರಿಗೆ ನೀಡುತ್ತಿರುವ ಲಸಿಕೆ ವಿರೋಧಿಸುತ್ತಿರುವುದು ಅಸಮಂಜಸವಾಗಿದೆ ಎಂದು ಹೇಳಿದ್ದಾರೆ.
ಹಲವು ಕಾರ್ಮಿಕರಿಗೆ ಲಸಿಕೆ ಸಿಕ್ಕಿಲ್ಲ: ಸರ್ಕಾರದಅಂದಾಜಿನ ಪ್ರಕಾರ ರಾಜ್ಯದಲ್ಲಿ ಇರುವ ಸಂಘಟಿತ,ಅಸಂಘಟಿತ ಮತ್ತು ವಲಸೆ ಕಾರ್ಮಿಕರ ಪೈಕಿ ಈವರೆಗೆಶೇ.5 ಮಂದಿ ಲಸಿಕೆ ಪಡೆದಿದ್ದಾರೆ. ಕಾರ್ಮಿಕರು ಲಸಿಕೆಪಡೆಯಲು ಕನಿಷ್ಠ 3 ದಿನ ವ್ಯಯಿಸಬೇಕಿದೆ.
ಅವರುಇದ್ದಲ್ಲಿಗೇ ತೆರಳಿ ಲಸಿಕೆ ನೀಡಿ ಜಾಗೃತಿಗೊಳಿಸುವಸಲುವಾಗಿ ಸರ್ಕಾರ ಹಮ್ಮಿಕೊಂಡಿದ್ದ ಅಭಿಯಾನಕ್ಕೆಬ್ರೇಕ್ ಬಿದ್ದಿದೆ. ಈ ಬೆಳವಣಿಗೆಯಿಂದ ಶೇ.95ಶ್ರಮಿಕರಿಗೆ ಲಸಿಕೆ ಸಿಕ್ಕಿಲ್ಲ ಎಂದು ಕೆಂಪೇಗೌಡ ಕಟ್ಟಡನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಸಹಕಾರ್ಯದರ್ಶಿ ಸಿ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.