ಎಲ್ಲರ ಚಿತ್ತ ಸೀಕ್ವೆನ್ಸಿಂಗ್‌ ವರದಿಯತ್ತ..!

Team Udayavani, Dec 15, 2021, 12:27 PM IST

covid test

Representative Image used

ಬೆಂಗಳೂರು: ಒಂದು ವಾರದಲ್ಲಿ ವಿದೇಶಗಳಿಂದ ಆಗಮಿಸಿದ ಸಾವಿರಾರು ಮಂದಿ ಪೈಕಿ ಒಟ್ಟಾರೆ 20 ಮಂದಿಗೆ ಕೊರೊನಾ ದೃಢಪಟ್ಟಿದೆ. ಇವರೆಲ್ಲರ ಗಂಟಲುದ್ರವ ಮಾದರಿಗಳನ್ನು ಜಿನೋಮಿಕ್‌ ಸಿಕ್ವೆನ್ಸಿಂಗ್‌ಗೆ ಕಳುಹಿಸಿದ್ದು, ಬುಧವಾರ ವರದಿ ಕೈಸೇರುವ ಸಾಧ್ಯತೆಯಿದೆ.

ನಗರಕ್ಕೆ ಬಂದಿಳಿದ ವಿದೇಶಿ ಪ್ರಯಾಣಿಕರ ಪೈಕಿ ಸೋಂಕು ಕಾಣಿಸಿಕೊಂಡ 20 ಜನರಲ್ಲಿ 12 ಮಂದಿ ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಉಳಿದವರು ಅಪೋಲೋ, ಮಣಿಪಾಲ್‌ ಸೇರಿ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಎಲ್ಲರ ಗಂಟಲು ದ್ರವದ ಮಾದರಿಗಳನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಅದರ ವರದಿ ಬುಧವಾರ ಬರುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸೇರಿದಂತೆ ಎಲ್ಲರ ಚಿತ್ತ ಈಗ ವರದಿಯತ್ತ ನೆಟ್ಟಿದೆ. ವಿದೇಶಗಳಿಂದ ನಗರಕ್ಕೆ ಬರುವವರ ಮೇಲೆ ತೀವ್ರ ನಿಗಾ ವಹಿಸುವ ಮೂಲಕ ಒಮಿಕ್ರಾನ್‌ ಸೇರಿ ಎಲ್ಲ ಮಾದರಿ ಸೋಂಕು ಪತ್ತೆ ಕಾರ್ಯ ನಡೆಯುತ್ತಿದೆ. ವಾರದಲ್ಲಿ 20 ಪ್ರಯಾಣಿಕರಿಗೆ ಸೋಂಕು ದೃಢಪಟ್ಟಿದ್ದು, ಡಿ.15 ರಂದು ವರದಿ ಬರಲಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್‌ ಮಾಹಿತಿ ನೀಡಿದರು.

ಪ್ರಕರಣ ಏರಿಕೆ ಕ್ರಮ; ಹೆಚ್ಚಿದ ಆತಂಕ: ಭೀತಿ ಹುಟ್ಟಿಸಿರುವ ರೂಪಾಂತರಿ ಒಮಿಕ್ರಾನ್‌ ಅತಿ ವೇಗವಾಗಿ ಹರಡುತ್ತದೆ ಎಂಬುದನ್ನು ಇಂಗ್ಲೆಂಡ್‌ ಅಧ್ಯಯನ ಸಮಿತಿ ತಿಳಿಸಿದೆ. ದೇಶಾದ್ಯಂತ ಒಮಿಕ್ರಾನ್‌ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆ ಕ್ರಮದಲ್ಲಿ ಸಾಗಿದೆ. ಈ ನಡುವೆ ದೇಶದಲ್ಲಿ ಜನವರಿಯಲ್ಲಿ ಕೋವಿಡ್‌ 3ನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಬಗ್ಗೆ ಕೇಂದ್ರಸರ್ಕಾರ ಎಲ್ಲ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ವಿದೇಶಿಗರಲ್ಲಿ ಕೊರೊನಾ ದೃಢವಾಗಿರುವುದು ಆತಂಕ ಹುಟ್ಟಿಸಿದೆ. ವಿದೇಶಿ ಪ್ರಯಾಣಿಕರ ಪೈಕಿ ಸೋಂಕಿತರ ಸಂಪರ್ಕಕ್ಕೆ 5 ಮಂದಿ ಪ್ರಾಥಮಿಕ ಮತ್ತು 20 ಜನ ದ್ವಿತೀಯ ಸಂಪರ್ಕಿತರಾಗಿದ್ದಾರೆ. ಇವರ ಕೋವಿಡ್‌ ವರದಿಗಳು ನೆಗೆಟಿವ್‌ ಬಂದಿದ್ದರೂ, ಸೋಂಕಿತರ ಜೀನೋಮಿಕ್‌ ಸೀಕ್ವೆನ್ಸಿಂಗ್‌ ಪರೀಕ್ಷಾ ವರದಿ ಬರುವವರೆಗೂ ಕ್ವಾರಂಟೈನ್‌ಗೆ ಒಳಪಡಿಸಿ ನಿಗಾ ವಹಿಸಲಾಗಿದೆ.

ಮತ್ತೂಂದೆಡೆ ದಕ್ಷಿಣ ಆಫ್ರಿಕದಿಂದ ಡಿ. 1ರಂದು ಬಂದಿದ್ದ 34 ವರ್ಷದ ವ್ಯಕ್ತಿಗೆ ವಿಮಾನ ನಿಲ್ದಾಣದಲ್ಲಿ ಕೋವಿಡ್‌ ಪರೀಕ್ಷೆ ಮಾಡಿದಾಗ ನೆಗೆಟಿವ್‌ ಬಂದಿತ್ತು. ಆದರೆ, ಖಾಸಗಿ ಲ್ಯಾಬ್‌ನಲ್ಲಿ ಮತ್ತೂಮ್ಮೆ ಪರೀಕ್ಷೆ ಮಾಡಿಸಿಕೊಂಡಾಗ ಸೋಂಕು ದೃಢಪಟ್ಟಿತ್ತು. ಮಾದರಿಯನ್ನು ಜೀನೋಮಿಕ್‌ ಸಿಕ್ವೆನ್ಸಿಂಗ್‌ಗೆ ಕಳುಹಿಸಿದಾಗ ಡಿ. 11ರಂದು ಒಮಿಕ್ರಾನ್‌ ಪತ್ತೆಯಾಗಿತ್ತು. ಅವರ ಮೇಲೂ ನಿಗಾ ವಹಿಸಲಾಗಿದೆ.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

8-brahmavar

Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

7-bunts

Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.