ತಾಯಿಯ ಗುದ್ದಿ ಗಾಯಗೊಳಿಸಿದ ಹಸುವಿನ ವಿರುದ್ಧ ಪೇದೆ ದೂರು

Team Udayavani, Jan 30, 2017, 11:50 AM IST

cow-.jpg

ಬೆಂಗಳೂರು: ನಗರದ ಆಡುಗೋಡಿ ಪೊಲೀಸ್‌ ಠಾಣೆಯಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪ್ರಕರಣ ದಾಖಲಾಗಿರುವುದು ಒಂದು ಹಸುವಿನ ವಿರುದ್ಧ. ಹೀಗಾಗಿ ಆರೋಪಿ ಹಸುವಿನ  ಬಂಧನ ವಿಚಾರ ಇದೀಗ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. 

ಹೌದು, ಇತ್ತೀಚೆಗೆ ಈ ದೂರು ದಾಖಲಾಗಿದ್ದು, “”ನನ್ನ ತಾಯಿಗೆ ಹಸುವೊಂದು ಗುದ್ದಿ ಗಾಯಗೊಳಿಸಿದೆ,” ಎಂದು ವೃತ್ತಿಯಲ್ಲಿ ಪೊಲೀಸ್‌ ಪೇದೆಯೇ ಆಗಿರುವ ರಾಜು ಎಂಬುವವರು ಆಡುಗೋಡಿ ಠಾಣೆಯಲ್ಲಿ ಹಸುವಿನ ವಿರುದ್ಧ ದೂರು ಕೊಟ್ಟಿದ್ದಾರೆ. 

ನಗರ ಪೊಲೀಸ್‌ ಆಯುಕ್ತರ ಕಚೇರಿಯ ಕಾನ್ಸ್‌ಟೇಬಲ್‌ ರಾಜು ಅವರ ತಾಯಿ ಭಾಗ್ಯಮ್ಮ ಅವರಿಗೆ ಇತ್ತೀಚೆಗೆ ಹಸು ತಿವಿದು ಭುಜದ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಅವರು, ಡಿಸಾcರ್ಜ್‌ ಕೂಡ ಆಗಿದ್ದಾರೆ ಎನ್ನಲಾಗಿದೆ. 

ಘಟನೆ ಏನು?: ಆಡುಗೋಡಿ ಪೊಲೀಸ್‌ ಕ್ವಾಟ್ರìಸ್‌ನಲ್ಲಿ ನೆಲೆಸಿರುವ ಭಾಗ್ಯಮ್ಮ ಅವರು ಇತ್ತೀಚೆಗೆ ಮಧ್ಯಾಹ್ನ 12.30ರಲ್ಲಿ ತಮ್ಮ ಮೊಮ್ಮಗನನ್ನು ಶಾಲೆಯಿಂದ ಕರೆದುಕೊಂಡು ಬರುತ್ತಿದ್ದರು. ಹೊಸೂರು-ಲಷ್ಕರ್‌ ರಸ್ತೆಯಲ್ಲಿ ಬರುತ್ತಿದ್ದಾಗ ಹಿಂದಿನಿಂದ ಬಂದ ಹಸು ಭಾಗ್ಯಮ್ಮ ಅವರ ಬೆನ್ನಿಗೆ ತಿವಿದು ಬೀಳಿಸಿದೆ.

ಜತೆಗೆ ವೃದ್ಧೆಗೆ ಕಾಲಿನಿಂದ ಒದ್ದಿದೆ. ಕೂಡಲೇ ಸ್ಥಳೀಯರು ಭಾಗ್ಯಮ್ಮ ಅವರ ರಕ್ಷಣೆಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಭಾಗ್ಯಮ್ಮ ಅವರ ಪುತ್ರ, ಕಾನ್ಸ್‌ಟೇಬಲ್‌ ರಾಜು ಅವರು ಆಡುಗೋಡಿ ಠಾಣೆಯಲ್ಲಿ ಹಸುವಿನ ವಿರುದ್ಧ ದೂರು ದಾಖಲಿಸಿದ್ದಾರೆ. 

ಮೂಕ ಪ್ರಾಣಿಗಳನ್ನು ಬಂಧಿಸಕ್ಕಾಗುತ್ತಾ?
ಈ ದೂರಿನ ಕುರಿತು ಪ್ರತಿಕ್ರಿಯಿಸಿರುವ ಆಡುಗೋಡಿ ಪೊಲೀಸರು, “ನಾವು ಎಂದೂ ಕೂಡ ಇಂತಹ ಸಂದರ್ಭವನ್ನು ಎದುರಿಸಿಲ್ಲ. ಘಟನೆ ನಡೆದ ಸ್ಥಳದಲ್ಲಿ ಯಾವುದೇ ಸಿಸಿಟಿವಿ ಕೂಡ ಇಲ್ಲ. ಸಿಕ್ಕ -ಸಿಕ್ಕ ಮೂಕ ಪ್ರಾಣಿಗಳನ್ನು ಹಿಡಿದು ಪ್ರಶ್ನಿಸಲು ಸಾಧ್ಯವೇ? ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.