ಶೌಚಾಲಯ ನಿರ್ಮಾಣ-ನಿರ್ವಹಣೆಗೆ ಸಮಿತಿ ರಚಿಸಿ


Team Udayavani, Dec 20, 2018, 12:13 PM IST

highcourt.jpg

ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಹಾಗೂ ನಿರ್ವಹಣೆಗೆ ಪ್ರತ್ಯೇಕ ನಿರ್ವಹಣಾ ಸಮಿತಿಯೊಂದನ್ನು ರಚಿಸಿಸಲು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ  ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತಂತೆ ಆ್ಯಂಟಿ ಕರಪ್ಷನ್‌ ಕೌನ್ಸಿಲ್‌ ಆಫ್ ಇಂಡಿಯಾ ಎಂಬ ಸಂಸ್ಥೆ ಸಲ್ಲಿಸಿರುವ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಬುಧವಾರ ಮುಖ್ಯ ನ್ಯಾ. ದಿನೇಶ್‌ ಮಹೇಶ್ವರಿ ಹಾಗೂ ನ್ಯಾ. ಎಸ್‌. ಸುಜಾತ ಅವರಿದ್ದ ನ್ಯಾಯಪೀಠದ ವಿಚಾರಣೆ ನಡೆಸಿತು. ಈ ವೇಳೆ ಕೆಲಕಾಲ ವಾದ ಆಲಿಸಿದ ನ್ಯಾಯಪೀಠ, ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ಹಾಗೂ ಅಸಮರ್ಪಕ ನಿರ್ವಹಣೆ ಕುರಿತು ವಿವರಣೆ ನೀಡುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಮೌಖೀಕ ನಿರ್ದೇಶನ ನೀಡಿತು.

ಬೆಂಗಳೂರು ನಗರದಲ್ಲಿ ಸುಮಾರು 1,100 ಸಾರ್ವಜನಿಕ ಶೌಚಾಲಯಗಳ ಕೊರತೆ ಇದೆ. ಈಗಾಗಲೇ ನಿರ್ಮಾಣಗೊಂಡಿರುವ ಶೇ.90ರಷ್ಟು ಪುರುಷ ಹಾಗೂ ಶೇ.94ರಷ್ಟು ಮಹಿಳಾ ಸಾರ್ವಜನಿಕ ಶೌಚಾಲಯಗಳಲ್ಲಿ ಫ್ಲೆಶ್‌ ಕೆಲಸ ಮಾಡುತ್ತಿಲ್ಲ. ಶೇ.87ರಷ್ಟು ಪುರುಷ ಹಾಗೂ ಶೇ.88ರಷ್ಟು ಮಹಿಳಾ ಶೌಚಾಲಯಗಳಲ್ಲಿ ಕಸದ ಡಬ್ಬಿಗಳಿಲ್ಲ. ಶೇ.33 ಪುರುಷ ಹಾಗೂ ಶೇ.58 ಮಹಿಳಾ ಶೌಚಾಲಯಗಳಲ್ಲಿ ಕೈತೊಳೆಯುವ ಸಿಂಕ್‌ ಇಲ್ಲ. ಕಟ್ಟಡಗಳು ದುಸ್ಥಿತಿಯಿಂದ ಕೂಡಿದೆ ಹಾಗೂ ಸ್ವತ್ಛತೆ ಕಾಯ್ದುಕೊಂಡಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಅಲ್ಲದೇ ಸ್ವತ್ಛ ಭಾರತದ ಮಾನದಂಡಗಳ ಪ್ರಕಾರ ಪ್ರತಿ 100 ಪುರುಷರಿಗೆ ಒಂದು ಹಾಗೂ ಪ್ರತಿ 100 ಮಹಿಳೆಯರಿಗೆ ಎರಡು ಶೌಚಾಲಯ ಕೊಠಡಿ ಇರಬೇಕು. ಪ್ರತಿ ಏಳು ಕಿ.ಮೀ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಸಾರ್ವಜನಿಕ ಶೌಚಾಲಯ ಇರಬೇಕು. ಆದರೆ, ನಗರದಲ್ಲಿ 473 ಸಾರ್ವಜನಿಕ ಶೌಚಾಲಯಗಳಿದ್ದು, ಅದರಲ್ಲಿ ಬಿಬಿಎಂಪಿ 150 ಮತ್ತು ಖಾಸಗಿಯವರು 75 ಶೌಚಾಲಯಗಳನ್ನು ನಿರ್ವಹಿಸುತ್ತಿದ್ದಾರೆ.

ಉಳಿದ 246 ಸಾರ್ವಜನಿಕ ಶೌಚಾಲಯಗಳನ್ನು ಯಾರು ನಿರ್ವಹಣೆ ಮಾಡುತ್ತಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಜತೆಗೆ ಸ್ವತ್ಛ ಸರ್ವೇಕ್ಷಣಾ ವರದಿಯಲ್ಲಿ ಬೆಂಗಳೂರಿಗೆ 210ನೇ ರ್‍ಯಾಂಕ್‌ ಸಿಕ್ಕಿದೆ. ಶೌಚಾಲಯಗಳ ಕೊರತೆ ಹಾಗೂ ಅಸಮರ್ಪಕ ನಿರ್ವಹಣೆಯಿಂದಾಗಿ ಬೆಂಗಳೂರಿಗೆ ಕೆಟ್ಟ ಹೆಸರು ಬಂದಿದೆ. ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ನಾಗರಿಕರಿಗೆ ತೊಂದರೆಯಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಕುರಿತು ತನಿಖೆ ನಡೆಸಬೇಕು. ಅವುಗಳ ನಿರ್ಮಾಣ ಹಾಗೂ ನಿರ್ವಹಣೆಗಾಗಿ ನಿರ್ವಹಣಾ ಸಮಿತಿ ರಚಿಸಬೇಕು. ಕಾಲ ಕಾಲಕ್ಕೆ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಹಾಗೂ ಕಾರ್ಯನಿರ್ವಹಣೆಯನ್ನು ಪರಿಶೀಲನೆ ಮಾಡಲು ಸರ್ವೆ ನಡೆಸುವಂತೆ ಹಾಗೂ ಪರಿಸರ ಸ್ನೇಹಿ ಶೌಚಾಲಯ ನಿರ್ಮಿಸುವಂತೆ ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪರಿಸರ ಸ್ನೇಹಿ ಶೌಚಾಲಯದ ಅಗತ್ಯ: ಅಂತರ್ಜಲ ಮಾಲಿನ್ಯ ತಡೆಯಲು ಬಯೋ ಡೈಜೆಸ್ಟ್‌ರ್‌ (ಮಾನವ ತ್ಯಾಜ್ಯವನ್ನು ಗ್ಯಾಸ್‌ ಹಾಗೂ ಗೊಬ್ಬರವಾಗಿ ಪರಿವರ್ತಿಸುವ), ಪರ್ಮಿಯೆಬಲ್‌ ರಿಯಾಕ್ಟಿವ್‌ ಬ್ಯಾರಿಯರ್‌ (ಪಿಆರ್‌ಬಿ), ಸೌರ ಶಕ್ತಿಯಿಂದ ನಿರ್ವಹಿಸುವ ಸ್ವಯಂ ಸ್ವತ್ಛತಾ ಶೌಚಾಲಯಗಳು, ಲೋ-ಟೆಕ್‌ ಬ್ಯಾಂಬೂ ಹಾಗೂ ಈಕೊ ಸ್ಯಾನ್‌ ಮಾದರಿಯ ಪರಿಸರ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸುವ ಅವಶ್ಯಕತೆಯಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.