ಕೋಮುವಾದದಿಂದ ಅರಾಜಕತೆ ಸೃಷ್ಟಿ


Team Udayavani, Sep 9, 2018, 12:08 PM IST

komuvadi.jpg

ಬೆಂಗಳೂರು: ದೇಶವನ್ನು ಕಾಡುತ್ತಿರುವ ಕೋಮವಾದ, ಜಾತಿವಾದ, ಭ್ರಷ್ಟಾಚಾರ ಸಮಸ್ಯೆಗಳನ್ನು ಕೊನೆಗಾಣಿಸದಿದ್ದರೆ ಅರಾಜಕತೆ ಸೃಷ್ಟಿಯಾಗಲಿದೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಆತಂಕ ವ್ಯಕ್ತಪಡಿಸಿದ್ದಾರೆ.

ದಲಿತ ಸಂಘಟನೆಗಳ ವತಿಯಿಂದ ನಗರದ ಸೆಂಟ್ರಲ್‌ ಕಾಲೇಜಿನ ಸೆನೆಟ್‌ ಹಾಲ್‌ನಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ “ಸಂವಿಧಾನವನ್ನು ಸುಟ್ಟ ಬೆಂಕಿ-ದೇಶವನ್ನು ಸುಡಲಿದೆ’ ವಿಷಯದ ಬಗ್ಗೆ ಮಾತನಾಡಿದರು.

ದೇಶದಲ್ಲಿ ಆರ್ಥಿಕ, ಕೋಮು, ಸಾಮಾಜಿಕ ಭಯೋತ್ಪಾದನೆಗಳಿಂದ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಗಳನ್ನು ಕಿತ್ತೂಗೆಯದಿದ್ದರೆ ಸಂವಿಧಾನವೂ ಉಳಿಯುವುದಿಲ್ಲ. ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಲಿದ್ದು, ನ್ಯಾಯಾಧೀಶರು ಕೂಡ ಬಂಧನಕ್ಕೆ ಒಳಗಾಗುವ ಸ್ಥಿತಿ ಬರಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕೆಲವು ಪಟ್ಟಭದ್ರರು ದೇಶದಲ್ಲಿ ವ್ಯವಸ್ಥಿತವಾಗಿ ತಪ್ಪು ಚಿಂತನೆಗಳನ್ನು ಹರಡುತ್ತಿದ್ದಾರೆ. ಸಂವಿಧಾನ ತಿದ್ದುಪಡಿ ಆಗಬೇಕು ಎಂದು ಹೇಳುತ್ತಿದ್ದಾರೆ. ಆದರೆ, ಸಂವಿಧಾನಕ್ಕೆ ಪರ್ಯಾಯವಾದದನ್ನು ಇವರಿಂದ ಕೊಡಲು ಸಾಧ್ಯವೇ ಇಲ್ಲ ಎಂದು ತಿಳಿಸಿದರು.

ಜಗತ್ತಿನ ಶ್ರೇಷ್ಠ ನ್ಯಾಯಶಾಸ್ತ್ರಜ್ಞರು ಕೂಡ ಭಾರತದದ್ದು ಶ್ರೇಷ್ಠ ಸಂವಿಧಾನ ಎಂದಿದ್ದಾರೆ. ಆದರೆ, ಸಂವಿಧಾನ ಓದದೇ, ಅದರ ಆಶಯಗಳನ್ನು ಅರ್ಥ ಮಾಡಿಕೊಳ್ಳದವರು ಅದನ್ನು ಬದಲಿಸುವ ಮಾತನಾಡುತ್ತಾರೆ. ಸಂವಿಧಾನ ಉಳಿಸಿಕೊಳ್ಳಲು ಎಲ್ಲರೂ ಬದ್ಧರಾಗಬೇಕಾದ ಅನಿವಾರ್ಯತೆಯಿದೆ ಎಂದು ಹೇಳಿದರು.

ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿ, ವ್ಯವಸ್ಥೆಯನ್ನು ಪ್ರಶ್ನಿಸುವವರಿಗೆ “ದೇಶದ್ರೋಹಿ’ ಪಟ್ಟ ಕಟ್ಟಲಾಗುತ್ತಿದೆ. ಗೋರಕ್ಷಣೆ, ದೇಶದ್ರೋಹ ಎಂಬ ಎರಡು ಅಸ್ತ್ರಗಳನ್ನು ಮುಂದಿಟ್ಟುಕೊಂಡು ಪ್ರತಿರೋಧದ ದನಿಗಳನ್ನು ಹತ್ತಿಕ್ಕಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಸಾಹಿತಿ ಕೆ.ಷರೀಫಾ, ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಚಾಲಕ ಆರ್‌.ಮೋಹನ್‌ ರಾಜ್‌, ಮುಖಂಡರಾದ ಬಸವರಾಜ್‌ ಕೌತಾಲ್‌,  ಡಿ.ಶಿವಶಂಕರ್‌, ಡಾ.ಮನೋಹರ ಚಂದ್ರಪ್ರಸಾದ್‌ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

America-Congress

House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Train

Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ

Covid test

HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-water-price

Water Price Hike: ಬಸ್‌ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

18-bng

Bengaluru: ಪೊಲೀಸ್‌ ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆ ಸೆರೆ

17-bng

Bengaluru: ಅನಧಿಕೃತ ಕಾಲ್‌ಸೆಂಟರ್‌ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

16-bng

Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

America-Congress

House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.