ಕೃತಕ ತ್ಯಾಜ್ಯ ಸಮಸ್ಯೆ ಸೃಷ್ಟಿ!

Team Udayavani, Mar 11, 2019, 6:30 AM IST

krutaka.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವಾರು ವಾರ್ಡ್‌ಗಳಲ್ಲಿ ಗುತ್ತಿಗೆದಾರರು ತ್ಯಾಜ್ಯ ಸಂಗ್ರಹ ಪ್ರಕ್ರಿಯೆ ಸ್ಥಗಿತಗೊಳಿಸಿದ್ದು, ಲೋಕಸಭಾ ಚುನಾವಣೆ ವೇಳೆಗೆ ನಗರದಲ್ಲಿ ಕೃತಕ ತ್ಯಾಜ್ಯ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ.

ಕಳೆದ ಹದಿನೈದು ದಿನಗಳಿಂದ ಷರತ್ತುಗಳ ನೆಪ ಒಡ್ಡಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರರು ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸುವುದನ್ನು ಸ್ಥಗಿತಗೊಳಿಸಿದ್ದಾರೆ. ಪರಿಣಾಮ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಎರಡು-ಮೂರು ದಿನಗಳ ತ್ಯಾಜ್ಯ ಮನೆಯಲ್ಲಿಟ್ಟುಕೊಳ್ಳಲು ಸಾಧ್ಯವಾಗದೆ, ರಸ್ತೆಬದಿ ಹಾಗೂ ಖಾಲಿ ನಿವೇಶನಗಳಲ್ಲಿ ಸುರಿಯಯುತ್ತಿದ್ದಾರೆ.

ಜನರು ಎಲ್ಲೆಂದರಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದರಿಂದ ರಸ್ತೆಬದಿ ಹಾಗೂ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ರಾಶಿಗಳು ಕಂಡುಬರುತ್ತಿವೆ. ಇನ್ನು ತ್ಯಾಜ್ಯ ರಾಶಿಯಲ್ಲಿ ಆಹಾರ ಹುಡುಕಲು ಮುಗಿ ಬೀಳುವ ಬಿಡಾಡಿ ಹಸುಗಳು ಹಾಗೂ ಬೀದಿ ನಾಯಿಗಳು ತ್ಯಾಜ್ಯವನ್ನು ರಸ್ತೆಗಳಿಗೆ ಎಳೆದು ತರುತ್ತಿದ್ದು, ವಾಹನ ಸವಾರರ ಮೇಲೆ ದಾಳಿ ನಡೆಸಲು ಮುಂದಾದ ಘಟನೆಗಳು ನಡೆಯುತ್ತಿವೆ.

ವೈಜ್ಞಾನಿಕ ತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿಗಾಗಿ ಪಾಲಿಕೆಯಿಂದ ಕೇವಲ ಹಸಿ ತ್ಯಾಜ್ಯ ವಿಲೇವಾರಿಗೆ ಟೆಂಡರ್‌ ಆಹ್ವಾನಿಸಲಾಗಿದೆ. ಈ ವೇಳೆ ಗುತ್ತಿಗೆದಾರರಿಗೆ ಹಲವಾರು ಷರತ್ತುಗಳನ್ನು ವಿಧಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಗುತ್ತಿಗೆದಾರರು ಗೂಡ್ಸ್‌ ಆಟೋಗಳಲ್ಲಿ ತ್ಯಾಜ್ಯ ಸಂಗ್ರಹ ಮಾಡುವಂತಿಲ್ಲ. ಕಡ್ಡಾಯವಾಗಿ ಆಟೋ ಟಿಪ್ಪರ್‌ಗಳನ್ನು ಬಳಸಬೇಕೆಂಬ ನಿಯಮ ಗುತ್ತಿಗೆದಾರರ ಕೋಪಕ್ಕೆ ಕಾರಣವಾಗಿದೆ.

ಪರಿಣಾಮ ಟೆಂಡರ್‌ ಪ್ರಕ್ರಿಯೆ ಮುಗಿದ ನಂತರವೇ ಹೊಸ ಆಟೋಗಳೊಂದಿಗೆ ತ್ಯಾಜ್ಯ ಸಂಗ್ರಹ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತೇವೆ ಎಂದು ಕಳೆದ ಹದಿನೈದು ದಿನಗಳಿಂದ ತ್ಯಾಜ್ಯ ಸಂಗ್ರಹಿಸುತ್ತಿಲ್ಲ. ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರೆ, ಪಾಲಿಕೆಯಿಂದ ಹೊಸದಾಗಿ ಟೆಂಡರ್‌ ಕರೆಯುತ್ತಿರುವುದರಿಂದ ಕೆಲವು ಕಡೆಗಳಲ್ಲಿ ಗುತ್ತಿಗೆದಾರರು ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿಲ್ಲ. ಇದರಿಂದಾಗಿ ಬ್ಲಾಕ್‌ಸ್ಪಾಟ್‌ಗಳ ಸಂಖ್ಯೆ ಹೆಚ್ಚಾಗಿದೆ. ಗುತ್ತಿಗೆದಾರರು ವಿಲೇವಾರಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರೆ ಮಾತ್ರವೇ ಅವರಿಗೆ ಬಿಲ್‌ ಪಾವತಿಸುವಂತೆ ಜಂಟಿ ಆಯುಕ್ತರಿಗೆ ಸೂಚಿಸಲಾಗಿದೆ ಎನ್ನುತ್ತಾರೆ. 

ನಗರದ ಕೆಲವು ವಾರ್ಡ್‌ಗಳಲ್ಲಿ ಕಾರ್ಯಾದೇಶ ಪಡೆದಿರುವ ಗುತ್ತಿಗೆದಾರರು ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ. ಆ ಹಿನ್ನೆಲೆಯಲ್ಲಿ ಪಾಲಿಕೆಯ ವಾಹನಗಳನ್ನು ಬಳಸಿ ತ್ಯಾಜ್ಯ ವಿಲೇವಾರಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ತ್ಯಾಜ್ಯ ವಿಲೇವಾರಿಯಲ್ಲಿ ಪಾಲ್ಗೊಳ್ಳದ ಗುತ್ತಿಗೆದಾರರಿಗೆ ಬಿಲ್‌ ಪಾವತಿಸದಂತೆ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ. 
-ರಂದೀಪ್‌, ವಿಶೇಷ ಆಯುಕ್ತರು (ಘನತ್ಯಾಜ್ಯ ನಿರ್ವಹಣೆ)

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.