Credit card fraud: ಕ್ರೆಡಿಟ್ ಕಾರ್ಡ್ ಕೊಡಿಸುವುದಾಗಿ ವಂಚನೆ
Team Udayavani, Dec 11, 2023, 10:58 AM IST
ಬೆಂಗಳೂರು: ಕ್ರೆಡಿಟ್ ಕಾರ್ಡ್ ಕೊಡಿಸುವುದಾಗಿ ವೃದ್ಧರೊಬ್ಬರನ್ನು ನಂಬಿಸಿದ ವಂಚಕರು, 4.77 ಲಕ್ಷ ರೂ. ಹಾಕಿಸಿಕೊಂಡು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಕೋಡಿಚಿಕ್ಕನಹಳ್ಳಿ ನಿವಾಸಿ ಸತ್ಯನಾರಾಯಣ ಕಾಮತ್ (70) ಹಣ ಕಳೆದುಕೊಂಡವರು. ಈ ಸಂಬಂಧ ಸತ್ಯನಾರಾಯಣ ಅವರ ಪುತ್ರ ಸುರ್ಜಿತ್ ಕಾಮತ್ ನೀಡಿದ ದೂರಿನ ಮೇರೆಗೆ ಆಗ್ನೇಯ ವಿಭಾಗದ ಸೆನ್ ಪೊಲೀಸ್ ಠಾಣೆ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.
ಕೆಲ ದಿನಗಳ ಹಿಂದೆ ಸತ್ಯನಾರಾಯಣ ಕಾಮತ್ ಅವರ ಮೊಬೈಲ್‌ಗೆ ಕರೆ ಮಾಡಿದ್ದ ಅಪರಿಚಿತರು, ತಾವು ಬ್ಯಾಂಕ್ ಪ್ರತಿನಿಧಿಗಳು ಎಂದು ಪರಿಚಯಿಸಿಕೊಂಡಿದ್ದಾರೆ. ಬಳಿಕ ನಿಮಗೆ ರಾಷ್ಟ್ರಿಕೃತ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ಕೊಡಿಸುವುದಾಗಿ ನಂಬಿಸಿದ್ದಾರೆ. ಬಳಿಕ ಅದಕ್ಕಾಗಿ ಇಂತಿಷ್ಟು ಹಣ ಕಟ್ಟಬೇಕಿದೆ. ಕೂಡಲೇ ಹಣ ವರ್ಗಾವಣೆ ಮಾಡುವಂತೆ ತಿಳಿಸಿದ್ದಾರೆ. ಅದನ್ನು ನಂಬಿಸಿದ ಸತ್ಯನಾರಾಯಣ ಕಾಮತ್, ವಂಚಕರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ-ಹಂತವಾಗಿ 4.77 ಲಕ್ಷ ರೂ. ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾರೆ. ಕೆಲ ಹೊತ್ತಿನ ನಂತರ ಸತ್ಯನಾರಾಯಣ ಅವರಿಗೆ ತಾವು ಸೈಬರ್ ವಂಚನೆಗೆ ಒಳಗಾಗಿರುವುದು ಗೊತ್ತಾಗಿ, ಈ ವಿಚಾರವನ್ನು ಪುತ್ರ ಸುರ್ಜಿತ್‌ಕಾಮತ್ ಗೆ ತಿಳಿಸಿದ್ದರು. ಬಳಿಕ ಸುರ್ಜಿತ್ ಕಾಮತ್ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.