ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಬಂಧನ, 48 ಲಕ್ಷ ರೂ. ನಗದು ವಶ
Team Udayavani, Apr 5, 2023, 2:32 PM IST
ಬೆಂಗಳೂರು: ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಕ್ರಮ್ ಮೆಹ್ತಾ ಬಂಧಿತ. ಆರೋಪಿಯಿಂದ 47.90 ಲಕ್ಷ ರೂ. ನಗದು ಮತ್ತು ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ವಿಠ್ಠಲ್ ಮಲ್ಯ ರಸ್ತೆಯ ಸೂರ್ಯಮುಖೀ ಅಪಾರ್ಟ್‌ಮೆಂಟ್ ನಿವಾಸಿ ವಿಕ್ರಮ್ ಹಲವು ತಿಂಗಳಿನಿಂದ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ. ವಸಂತನಗರದ ಲೂಪ್ ರಸ್ತೆಯಲ್ಲಿ ಓಡಾಡುತ್ತಿದ್ದ ಆರೋಪಿ, ಕ್ರಿಕೆಟ್ ಪಂದ್ಯಗಳ ಸೋಲು- ಗೆಲುವು ಲೆಕ್ಕಾಚಾರದಲ್ಲಿ ಜನರಿಂದ ಹಣ ಕಟ್ಟಿಸಿಕೊಂಡು, ಆನ್‌ಲೈನ್ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದ ಎಂದು ಪೊಲೀಸರು ಹೇಳಿದರು.
ಆರೋಪಿ ಕೃತ್ಯದ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ವಶಕ್ಕೆ ಪಡೆಯಲಾಯಿತು. ಮೊಬೈಲ್ ಆ್ಯಪ್ ಹಾಗೂ ಜಾಲತಾಣಗಳ ಮೂಲಕ ಪಂದ್ಯಗಳ ರೆಶ್ಯೂ ತಿಳಿದುಕೊಂಡು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾಗಿ ಆತನ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.