ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಬಂಧನ
Team Udayavani, Apr 2, 2019, 5:00 AM IST
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಹಾಗೂ ಸನ್ರೈಸರ್ ಹೈದ್ರಾಬಾದ್ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹೆಗ್ಗನಹಳ್ಳಿನಿವಾಸಿ ವಿಶ್ವನಾಥ್ (35) ಬಂಧಿತ.
ಕಪಿಲಾನಗರ, 4ನೇ ಕ್ರಾಸ್ನಲ್ಲಿರುವ ನಿವಾಸದಲ್ಲಿ ಆರೋಪಿ ವಿಶ್ವನಾಥ್ ಮಾರ್ಚ್ 31ರಂದು ನಡೆದ ರಾಯಲ್ ಚಾಲೆಂಜರ್ಸ್ ಹಾಗೂ ಸನ್ರೈಸರ್ ಹೈದ್ರಬಾದ್ ನಡುವಣ ಕ್ರಿಕೆಟ್ ಪಂದ್ಯಕ್ಕೆ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ.
ಈ ಕುರಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ ಎರಡು ಮೊಬೈಲ್ ಹಾಗೂ 1.89 ಲಕ್ಷ ರೂ. ಹಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಿಶ್ವನಾಥ್, ತನಗೆ ಪರಿಚಯವಿರುವವರ ಬಳಿಕ ಹಣ ಸಂಗ್ರಹಿಸಿ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ. ಈತನ ಜತೆ ಸಂಪರ್ಕದಲ್ಲಿದ್ದ ಬುಕ್ಕಿ ನಿತಿನ್ಗೆ ಬೆಟ್ಟಿಂಗ್ ಆಡುವವರನ್ನು ಪರಿಚಯಿಸಿ ಆಡಿಸುತ್ತಿದ್ದ. ಇದಕ್ಕೆ ಪ್ರತಿಯಾಗಿ ಶೇ 10ರಷ್ಟು ಕಮಿಷನ್ ಪಡೆಯುತ್ತಿದ್ದ. ಸದ್ಯ ತಲೆಮರೆಸಿಕೊಂಡಿರುವ ನಿತಿನ್ ಬಂಧನಕ್ಕೆ ಬಲೆಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.