ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಬಂಧನ
Team Udayavani, Apr 8, 2019, 3:00 AM IST
ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯವೊಂದರ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಎಚ್.ಚಂದ್ರೇಗೌಡ (38) ಬಂಧಿತ ಆರೋಪಿ.
ಏ.4ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ರೈಸರ್ ಹೈದರಾಬಾದ್ ನಡುವಿನ ಪಂದ್ಯಕ್ಕೆ ಹಣ ಕಟ್ಟಿಸಿಕೊಂಡು ಮೊಬೈಲ್ ಆ್ಯಪ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ.
ಜತೆಗೆ, ಈಗಾಗಲೇ ಹಲವರಿಂದ ಹಣ ಪಡೆದು ವಾಪಾಸ್ ನೀಡದೆ ವಂಚಿಸಿದ್ದ ಎಂಬ ಬಗ್ಗೆ ಮಾಹಿತಿ ಆಧರಿಸಿ ಹಳೇ ಮದ್ರಾಸ್ ರಸ್ತೆಯ ಹೋಟೆಲ್ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದಾಗ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯಿಂದ ಆರು ಲಕ್ಷ ರೂ. ಹಾಗೂ ಬೆಟ್ಟಿಂಗ್ಗೆ ಬಳಸುತ್ತಿದ್ದ ಎರಡು ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ. ಆರೋಪಿ ಜತೆ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಕೃಷ್ಣಪ್ಪ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.