ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ
Team Udayavani, Dec 8, 2018, 11:55 AM IST
ಬೆಂಗಳೂರು: ಭಾರತ -ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಆಧರಿಸಿ ಬೆಟ್ಟಿಂಗ್ ಆಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿರುವ ಕೇಂದ್ರ ಅಪರಾಧ ದಳದ (ಸಿಸಿಬಿ) ಪೊಲೀಸರು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರನ್ನು ಬಂಧಿಸಿ 16.43 ಲಕ್ಷ ರೂ. ಜಪ್ತಿ ಮಾಡಿಕೊಂಡಿದ್ದಾರೆ.
ಹೆಮ್ಮಿಗೆಪುರ ನಿವಾಸಿ ಎಚ್.ಆರ್ ಮಂಜುನಾಥ್ (32), ಜೆ.ಪಿ ನಗರದ ಜೆ. ಗೋಪಾಲ್ (45) ಮತ್ತು ಬಿನ್ನಿ (33) ಬಂಧಿತರು. ಹೆಮ್ಮಿಗೆಪುರದ ಮನೆಯೊಂದರಲ್ಲಿ ಆರೋಪಿ ಮಂಜುನಾಥ್ ಕ್ರಿಕೆಟ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ. ಆತನಿಂದ 11.5 ಲಕ್ಷ ರೂ. ನಗದು, ಒಂದು ಆ್ಯಪಲ್ ಐಫೋನ್ ಜಪ್ತಿ ಮಾಡಲಾಗಿದೆ. ಈ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮತ್ತೂಂದು ಪ್ರಕರಣದಲ್ಲಿ, ಜೆ.ಪಿ.ನಗರದಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಮಾಹಿತಿ ಆಧರಿಸಿ ಆರೋಪಿಗಳಾದ ಗೋಪಾಲ್ ಹಾಗೂ ಬಿನ್ನಿಯನ್ನು ಬಂಧಿಸಿ 5.38 ಲಕ್ಷ ರೂ ಜಪ್ತಿ ಮಾಡಿಕೊಳ್ಳಲಾಗಿದೆ. ಈ ಕುರಿತು ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್ಮಾರ್ಟ್ ಓವನ್ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.