ಕಳ್ಳತನ ಮಾಡಿದ್ದಾನೆ ಎಂದು ಹತ್ಯೆ


Team Udayavani, Apr 11, 2023, 1:18 PM IST

TDY-7

ಬೆಂಗಳೂರು: ಗುಜರಿ ಅಂಗಡಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಎಂಬ ಆರೋಪದ ಮೇಲೆ ಯುವಕನನ್ನು ಅಪಹರಿಸಿ ಹತ್ಯೆಗೈದು, ಮೃತ ದೇಹವನ್ನು ಚರಂಡಿಗೆ ಎಸೆದು ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಜಿ ಹಳ್ಳಿಯ ಪಿಳ್ಳಣ್ಣಗಾರ್ಡನ್‌ ನಿವಾಸಿ ಶೇಖ್‌ ಜಬಿವುಲ್ಲಾ (26), ಕೋರಂಗ್‌ ಜೋಪಡಿ ನಿವಾಸಿ ಶಹಬಾಜ್‌ ಅಲಿಯಾಸ್‌ ಬಬನ್‌(28) ಮತ್ತು ಉಡುಪಿ ಮೂಲದ ಪ್ರಶಾಂತ್‌ (34) ಬಂಧಿತರು.

ಆರೋಪಿಗಳು ಫೆಬ್ರವರಿಯಲ್ಲಿ ಸೈಫ‌ುಲ್ಲಾ ಎಂಬಾತ ನನ್ನು ಹತ್ಯೆಗೈದು, ಮತದೇಹವನ್ನು ಚರಂಡಿಗೆ ಎಸೆದು ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು. ಡಿ.ಜೆ. ಹಳ್ಳಿಯಲ್ಲಿ ತನ್ನ ತಾತಜತೆ ವಾಸವಾಗಿದ್ದ ಸೈಫ‌ುಲ್ಲಾ ಕುದುರೆ ಗಾಡಿ ಇಟ್ಟು ಕೊಂಡು ಕೂಲಿ ಕೆಲಸ ಮಾಡಿಕೊಂಡಿದ್ದ. ಕೆಲಸ ನಿಮಿತ್ತ ಆಗಾಗ್ಗೆ 10-20 ದಿನಗಳ ಕಾಲ ಮನೆ ಬಿಟ್ಟು ಹೋಗುತ್ತಿದ್ದ. ಕಳೆದ ಫೆಬ್ರವರಿಯಲ್ಲಿ ಮನೆಯಿಂದ ಹೋದ ಸೈಫ‌ುಲ್ಲಾ 40 ದಿನಗಳಾದರೂ ಬಂದಿರಲಿಲ್ಲ. ಫೋನ್‌ ಮಾಡಿದಾಗ ಸ್ವಿಚ್ಡ್ ಆಫ್ ಆಗಿತ್ತು. ಗಾಬರಿಗೊಂಡ ಈತನ ಸಹೋದರ, ದೂರುದಾರ ಫಾಯಾಜುಲ್ಲಾ, ಸೈಫ‌ುಲ್ಲಾ ಜತೆ ಕೆಲಸ ಮಾಡುತ್ತಿದ್ದ ಯುವಕರು ಹಾಗೂ ಇತರರನ್ನು ವಿಚಾರಿಸಿದ್ದಾರೆ. ‌

ಆಗ ಬಬಲ್‌ ಎಂಬಾತ “ನಿಮ್ಮ ತಮ್ಮ ಕಳ್ಳ. ಈಗಾಗಲೇ ಆತನಿಗೆ ಒಂದು ಗತಿ ಕಾಣಿಸಲಾಗಿದೆ’ ಎಂದು ಹೇಳಿ ಎಚ್ಚರಿಕೆ ನೀಡಿ ಕಳುಹಿಸಿದ್ದ. ಅದರಿಂದ ಅನುಮಾನಗೊಂಡು ಕೆ.ಜಿ.ಹಳ್ಳಿ ಠಾಣೆಗೆ ದೂರು ನೀಡಲು ಹೋದಾಗ ಸೈಫ‌ುಲ್ಲಾ ಫೋಟೋ ಠಾಣೆಯ ಬೋರ್ಡ್‌ನಲ್ಲಿ ಹಾಕಿ, ಈತನ ಬಗ್ಗೆ ಮಾಹಿತಿ ಕೋರಲಾಗಿತ್ತು. ಗಾಬರಿಗೊಂಡು ವಿಚಾರಿಸಿದಾಗ ರಾಮ ಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಈತನ ಮೃತದೇಹ ಪತ್ತೆಯಾಗಿರುವುದು ಗೊತ್ತಾಗಿದೆ.

ಬಳಿಕ ರಾಮಮೂರ್ತಿನಗರ ಠಾಣೆಗೆ ಹೋದಾಗ ಠಾಣೆ ವ್ಯಾಪ್ತಿಯ ಕಸ್ತೂರಿನಗರ ಸರ್ವೀಸ್‌ ರಸ್ತೆಯ ಪಕ್ಕದ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಇದೇ ವೇಳೆ ಬಬನ್‌ ಬಗ್ಗೆಯೂ ಫಾಯಾಜುಲ್ಲಾ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಬಲ್‌ ಹಾಗೂ ಇತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ಕಳ್ಳತನ ಆರೋಪ: ಆರೋಪಿಗಳ ಪೈಕಿ ಶಹಬಾಜ್‌ ಗುಜರಿ ಮಾಲೀಕನಾಗಿದ್ದು, ಪ್ರಶಾಂತ್‌ ಅದಕ್ಕೆ ಭದ್ರತಾ ಸಿಬ್ಬಂದಿಯಾಗಿದ್ದ. ಫೆಬ್ರವರಿಯಲ್ಲಿ ರಾತ್ರಿ ಸೈಫ‌ುಲ್ಲಾ ಗುಜರಿ ಅಂಗಡಿ ಬಳಿ ಬಂದಿದ್ದಾನೆ. ಆಗ ಮೂವರು ಆರೋಪಿಗಳು ಈ ವೇಳೆ ಯಾವ ಕಾರಣಕ್ಕೆ ಗುಜರಿ ಬಳಿ ಬಂದಿರುವೆ? ಏನಾದರೂ ಕಳ್ಳತನ ಮಾಡಿರುವೆಯಾ? ಎಂದೆಲ್ಲ ಪ್ರಶ್ನಿಸಿದ್ದಾರೆ. ಆಗ ಗೊಂದಲಕ್ಕೀಡಾದ ಸೈಫ‌ುಲ್ಲಾ, ಚಿನ್ನಾಭರಣ ಕಳವು ಮಾಡಿದ್ದೇನೆ ಎಂದಿದ್ದಾನೆ. ಹೀಗಾಗಿ ಮೂವರು ಆರೋಪಿಗಳು ಆತನನ್ನು ಅಪಹರಿಸಿ ಗುಜರಿ ಅಂಗಡಿ ಹಿಂಭಾಗದ ಸ್ಥಳದಲ್ಲಿ ಇರಿಸಿ ನಿತ್ಯ ಹಿಂಸೆ ನೀಡಿ, ಚಿನ್ನಾಭರಣ ಇಟ್ಟಿರುವ ಜಾಗವನ್ನು ತೋರಿಸುವಂತೆ ಹಲ್ಲೆ ನಡೆಸುತ್ತಿದ್ದರು. ಆದರೆ, ಸೈಫ‌ುಲ್ಲಾ ಮಾನಸಿಕ ಅಸ್ವಸ್ಥನಾದರಿಂದ ಮರು ದಿನ ಏನನ್ನು ಕಳವು ಮಾಡಿಲ್ಲ ಎಂದಿದ್ದಾನೆ. ಅದರಿಂದ ಆಕ್ರೋಶಗೊಂಡ ಆರೋಪಿಗಳು ಮಾರಕಾಸ್ತ್ರಗಳಿಂದ ಆತನ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದರು. ಬಳಿಕ ಕಸ್ತೂರಿನಗರದ ಸರ್ವೀಸ್‌ ರಸ್ತೆಯ ಚರಂಡಿಯಲ್ಲಿ ಮೃತದೇಹ ಎಸೆದು ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

ರಾಮಮೂರ್ತಿ ನಗರ ಠಾಣಾಧಿಕಾರಿ ರಂಗಸ್ವಾಮಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.