ಟೀಕೆಗೆ ತುತ್ತಾದ ಖಾಸಗಿ ಶಾಲೆ ಚೀನಿ ವರ್ಷಾಚರಣೆ
Team Udayavani, Aug 10, 2017, 11:13 AM IST
ಬೆಂಗಳೂರು : ಬ್ರಿಟಿಷ್ ಕೌನ್ಸಿಲ್‌ನ ಅಂತಾರಾಷ್ಟ್ರೀಯ ಶಾಲಾ ಪ್ರಶಸ್ತಿಗಾಗಿ ಮಕ್ಕಳಿಗೆ ಚೀನಿ ಹೊಸ ವರ್ಷ ಆಚರಣೆಯ ಸ್ಪರ್ಧೆ
ನಡೆಸಲು ಮುಂದಾಗಿರುವ ಡೆಲ್ಲಿ ಪಬ್ಲಿಕ್ ಸ್ಕೂಲ್ (ಉತ್ತರ) ಆಡಳಿತ ಮಂಡಳಿಯ ನಡೆ ಈಗ ಚರ್ಚೆಗೆ ಗ್ರಾಸವಾಗಿದೆ. ಕಳೆದ ಕೆಲವು ತಿಂಗಳಿಂದ ಭಾರತ-ಚೀನಾ ಗಡಿ ಪ್ರದೇಶದಲ್ಲಿ ಬಿಗುವಿನ ವಾತವರಣ ಉಂಟಾಗಿದೆ. ಚೀನಿ ಸೈನಿಕರು ಭಾರತದ ಗಡಿಯೊಳಗೆ ಕಾಲಿಡುತ್ತಿದ್ದಾರೆ. ಹಾಗೆಯೇ ದೇಶಾದ್ಯಂತ ಚೀನಿ ವಸ್ತುಗಳ ಬಹಿಷ್ಕಾರದ ಅಭಿಯಾನವೂ ಆರಂಭವಾಗಿದೆ. ಈ ಮಧ್ಯೆ ಬೆಂಗಳೂರಿನ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಡೆಲ್ಲಿ ಪಬ್ಲಿಕ್ ಸ್ಕೂಲ್‌ನ(ಉತ್ತರ) ಆಡಳಿತ ಮಂಡಳಿಯು ಆಗಸ್ಟ್ 11ರಂದು ಒಂದನೇ ತರಗತಿಯ ಎ, ಬಿ ಮತ್ತು ಸಿ ವಿಭಾಗದ ಮಕ್ಕಳಿಗೆ ಚೀನಾ ಹೊಸ ವರ್ಷಾಚರಣೆ ಸ್ಪರ್ಧೆ ಏರ್ಪಡಿಸಿ, ಆ.3ರಂದು ಸುತ್ತೋಲೆ ಹೊರಡಿಸಿದೆ.
ಬ್ರಿಟಿಷ್ ಕೌನ್ಸಿಲ್‌ನ ಅಂತಾರಾಷ್ಟ್ರೀಯ ಶಾಲಾ ಪ್ರಶಸ್ತಿಯ ಅಂಗವಾಗಿ ಒಂದು ಪ್ರಾಜೆಕ್ಟ್‌ನ ರೀತಿ ಈ ಸ್ಪರ್ಧೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಆಸಕ್ತ ಮಕ್ಕಳು ಭಾಗವಹಿಸಬಹುದು. ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮಕ್ಕಳಿಗೆ ಬ್ರಿಟಿಷ್ ಕೌನ್ಸಿಲ್ ಪ್ರಶಸ್ತಿ ನೀಡಲಿದೆ. ಬೇರೆ ಶಾಲೆಗಳ ರೀತಿ ನಮ್ಮ ಶಾಲೆಯಲ್ಲೂ ಸ್ಪರ್ಧೆ ನಡೆಸಲಾಗುತ್ತದೆ ಎಂದು ಡೆಲ್ಲಿ ಪಬ್ಲಿಕ್ ಸ್ಕೂಲ್‌ನ (ಉತ್ತರ) ಉನ್ನತ ಮೂಲಗಳಿಂದ ತಿಳಿದುಬಂದಿದೆ. ಶಾಲಾಡಳಿತ ಮಂಡಳಿಯ ಈ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಪೋಷಕರು, ದೇಶದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಎಲ್ಲಾ ರೀತಿಯ ತಯಾರಿ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಚೀನಿ ವರ್ಷಾಚರಣೆಯ ಸ್ಪರ್ಧೆಯ ಅವಶ್ಯಕತೆ ಏನಿತ್ತು? ಮಕ್ಕಳು ಚೀನಿ ಸಂಪ್ರದಾಯದ ಉಡುಗೆ ಧರಿಸಬೇಕು, ಅವರ ಆಹಾರ ಪದ್ಧತಿ ಅನುಸಾರ ತಿಂಡಿ ಮಾಡಿಕೊಂಡು ಬರಬೇಕು, ಅವರ ಸಂಪ್ರದಾಯದ ಅಲಂಕಾರ ವಸ್ತು ತರಬೇಕು ಎನ್ನುವುದು ಸರಿಯಲ್ಲ.
ಚೀನಿ ಸಾಂಪ್ರದಾಯಿಕ ಚಿತ್ರಗಳನ್ನು ಬಿಡಿಸುವುದನ್ನು ಕಡ್ಡಾಯ ಗೊಳಿಸುವುದು ಒಪ್ಪುವಂತದಲ್ಲ ಎಂದು ಅಸಮಾಧಾನ ವ್ಯಕ್ತಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ವರದಿ ತರಿಸಿಕೊಂಡು, ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತದೆ. ಐಸಿಎಸ್‌ಇ, ಸಿಬಿಎಸ್‌ಇ ಶಾಲೆಗಳ ಮೇಲೆ ರಾಜ್ಯ ಸರ್ಕಾರಕ್ಕೆ ನೇರವಾದ ನಿಯಂತ್ರಣ ಇರುವುದಿಲ್ಲ. ಪೋಷಕರಿಂದ ದೂರು ಬಂದರೆ, ಅದನ್ನು ಜಿಲ್ಲಾಧಿಕಾರಿಗಳ ನೇತೃತ್ವದ ನಿಯಂತ್ರಣಾ ಸಮಿತಿಗೆ ವರ್ಗಾಯಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.