3,495 ಮಂದಿ ಸೋಂಕಿನಿಂದ ಗುಣಮುಖ
Team Udayavani, Sep 15, 2020, 11:43 AM IST
ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಸೋಮವಾರ 2,219 ಪುರುಷರು ಮತ್ತು 1,276 ಮಹಿಳೆಯರು ಸೇರಿ 3,495 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆ ಮತ್ತು ಆರೈಕೆ ಕೇಂದ್ರಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಈಗ 1,30,627ಕ್ಕೆ ಏರಿಕೆಯಾಗಿದೆ.
ಹಾಗೆಯೇಕಳೆದ24 ಗಂಟೆಗಳಲ್ಲಿ 37 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟಾರೆ ಸೋಂಕಿಗೆ ಬಲಿಯಾಗುತ್ತಿರುವವ ಸಂಖ್ಯೆ 2,473ಕ್ಕೆ ಏರಿಕೆಯಾಗಿದೆ. ಹಾಗೆಯೇ ಹೊಸದಾಗಿ ನಗರದಲ್ಲಿ 2,966 ಸೋಂಕಿತ ಪ್ರಕರಣಗಳು ಕಂಡು ಬಂದಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆಇದೀಗ 1,73,628ಕ್ಕೆ ಏರಿಕೆಯಾಗಿದೆ. ಜತೆಗೆ 40,527 ಸಕ್ರಿಯ ಪ್ರಕರಣಗಳಿದ್ದು ಅವರೆಲ್ಲ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಆರೈಕೆ ಪಡೆಯುತ್ತಿದ್ದಾರೆ. ಅಲ್ಲದೆ 263 ಮಂದಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಒಟ್ಟು ಪಾಸಿಟಿವ್ ಪ್ರಮಾಣ ಶೇ.14.05ರಷ್ಟು ಇದ್ದು, ಆಕ್ಟೀವ್ ಪ್ರಮಾಣ ಶೇ.23.08 ರಷ್ಟಿದೆ. ಸೋಮವಾರ 21,722 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಈ ಮೂಲಕ ಇದುವರೆಗೂ 12,35,880 ಮಂದಿಯ ತಪಾಸಣೆ ಮಾಡಲಾಗಿದೆ. ಕೋವಿಡ್ ನಿಂದ ಚೇತರಿಸಿಕೊಳ್ಳುವವರ ಪ್ರಮಾಣ 75.23ರಷ್ಟಿದ್ದು, ಮರಣ ಪ್ರಮಾಣಶೇ.1.42 ರಷ್ಟಿದೆ. ಜತೆಗೆ ಕಳೆದ 24 ಗಂಟೆಗಳಲ್ಲಿ ಯಲಹಂಕ ಮತ್ತು ಪಶ್ಚಿಮ ಶೇ.16ರಷ್ಟು, ಪೂರ್ವದಲ್ಲಿಶೇ.15ರಷ್ಟು, ದಕ್ಷಿಣದಲ್ಲಿ ಶೇ.14ರಷ್ಟು, ಬೊಮ್ಮನಹಳ್ಳಿಯಲ್ಲಿ ಶೇ.13ರಷ್ಟು, ಮಹಾದೇವಪುರದಲ್ಲಿ ಶೇ.11ರಷ್ಟು ಮತ್ತು ರಾಜರಾಜೇಶ್ವರ ನಗರದಲ್ಲಿ ಶೇ.11ರಷ್ಟು ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.