Current shock: ಈಜುಕೊಳಕ್ಕೆ ಬಿದ್ದು ಬಾಲಕಿ ಸಾವು
Team Udayavani, Dec 30, 2023, 2:30 PM IST
ಬೆಂಗಳೂರು/ಮಹದೇವಪುರ: ವರ್ತೂರಿನ ಪ್ರಸ್ಟೀಜ್ ಲೀಕ್ ಹ್ಯಾಬಿಟ್ ಅಪಾರ್ಟ್‌ಮೆಂಟ್‌ನ ಆವರಣದಲ್ಲಿದ್ದ ಈಜುಕೊಳಕ್ಕೆ ಬಿದ್ದು ಹತ್ತು ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.
ಮಾನ್ಯಾ ದಾಮೇರ್ಲ (10)ಮೃತ ಬಾಲಕಿ. ಭದ್ರತಾ ಸಿಬ್ಬಂದಿಗಳ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ಅಪಾರ್ಟ್‌ಮೆಂಟ್ ನಿವಾಸಿಗಳು ಆರೋಪಿಸಿದ್ದಾರೆ. ಗುರುವಾರ ಸಂಜೆ 8.30ಕ್ಕೆ ಘಟನೆ ನಡೆದಿದೆ. ಈಜುಕೊಳದ ಬಳಿ ವಿದ್ಯುತ್ ತಂತಿಯಿದ್ದು, ಆ ತಂತಿ ಸ್ಪರ್ಶಿಸಿ ಬಾಲಕಿ ನೀರಿಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಶಂಕಿಸಿದ್ದು, ಈ ಬಗ್ಗೆ ವರ್ತೂರು ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಈಜುಕೊಳದಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ಕಂಡ ಸ್ಥಳೀಯರು ಆಕೆಯನ್ನು ಮೇಲಕ್ಕೆ ಎತ್ತಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾನ್ಯಾಳನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಸುರಕ್ಷತಾ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ?: ಹೈಟೆಕ್ ಅಪಾರ್ಟ್‌ಮೆಂಟ್‌ಗಳ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿಯಾಗಿದ್ದು, ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಬಾಲಕಿ ನೀರಿಗೆ ಇಳಿದ ವೇಳೆ ಚೀರುತ್ತಿದ್ದಂತೆಯೇ ಅಲ್ಲಿದ್ದವರು ಆಕೆಯನ್ನು ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ರಾತ್ರಿ ಆಕೆ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾಳೆ. ಅಪಾರ್ಟ್ ಮೆಂಟ್ ಅಸೋಸಿಯೇಶನ್ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ನಿವಾಸಿಗಳು ಆರೋಪಿಸುತ್ತಿದ್ದಾರೆ.
ಈ ಹಿಂದೆ ಕೂಡ ಅಪಾರ್ಟ್‌ಮೆಂಟ್ ಆಡಳಿತ ಸಮಿತಿಯಿಂದ ಇಂತಹ ಘಟನೆಗಳು ನಡೆದಿರು ವದಾಗಿ ಆರೋಪಿಸಿರುವ ಅಪಾರ್ಟ್‌ಮೆಂಟ್ ವಾಸಿಸುವವರು ಹೇಳುತ್ತಾರೆ. ಸಮಸ್ಯೆಯನ್ನು ಕೂಡಲೇ ಬಗೆಹರಿಸಲೂ ಆಗ್ರಹಿಸಿದ್ದಾರೆ.
ಅಪಾರ್ಟ್‌ಮೆಂಟ್ ಬಿಲ್ಡರ್‌ಗಳು ಕನಿಷ್ಠ ವಿದ್ಯುತ್ ಲೈನ್‌ಗಳನ್ನು ಕೂಡ ಸರಿಯಾಗಿ ಹಾಕಿಲ್ಲ. ಕೆಲದಿನಗಳ ಹಿಂದಷ್ಟೇ ಮಗುವೊಂದು ಆಟವಾಡುತ್ತ ಒಂದು ಕಂಬವನ್ನು ಹಿಡಿದು ನಿಂತಾಗ ಶಾಕ್ ಹೊಡೆದಿತ್ತು. ಈ ದೂರು ಕೇಳಿ ಬಂದ ಬಳಿಕವೂ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿತ್ತು ಎಂದು ಹೇಳಲಾಗಿದೆ. ಕೋಟ್ಯಂತರ ರೂ. ಹಣ ಪಡೆದು ನಿರ್ಮಾಣ ಮಾಡಿರುವ ಅಪಾರ್ಟ್‌ಮೆಂಟ್‌ನಲ್ಲಿ ಜೀವಕ್ಕೆ ಭದ್ರತೆ ಇಲ್ಲ ಎಂಬ ಪ್ರಶ್ನೆಯೂ ಜನರಲ್ಲಿ ಎದುರಾಗಿದೆ.
ಅಪಾರ್ಟ್‌ಮೆಂಟ್ ನಿರ್ವಹಣಾ ತಂಡದ ಎಡವಟ್ಟಿಗೆ ಅಮಾಯಕ ಜೀವ ಬಲಿಯಾಗಿದೆ. ಹಲವು ಬಾರಿ ಘಟನೆ ನಡೆದರೂ ಆಡಳಿತ ಮಂಡಳಿ ಕಣ್ಮುಚ್ಚಿ ಕುಳಿತಿದೆ ಎಂದು ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ವರ್ತೂರು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾವಿಗೆ ಇಂಧನ ಸಚಿವರೇ ಹೊಣೆ: ಸುನೀಲ್ ಆರೋಪ:
ಬೆಂಗಳೂರಿನಲ್ಲಿ ಮೇಲಿಂದ ಮೇಲೆ ನಡೆಯುತ್ತಿರುವ ವಿದ್ಯುತ್ ಅವಘಡಗಳಿಂದ ಜನರು ಸಾವನ್ನಪ್ಪುತ್ತಿರುವುದಕ್ಕೆ ಇಂಧನ ಇಲಾಖೆ ಸಚಿವರೇ ಹೊಣೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ವರ್ತೂರಿನಲ್ಲಿ ಬಾಲಕಿಯೊಬ್ಬಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾಳೆ. ವಿದ್ಯುತ್ ಪೂರೈಕೆ, ವಿದ್ಯುತ್ ಕಂಬಗಳ ನಿರ್ವಹಣೆಯ ವಿಚಾರದಲ್ಲಿ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬ ಆರೋಪಗಳಿವೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಘಟನೆ ನಡೆದ ಕೂಡಲೇ ಸ್ಥಳೀಯರು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಆಕೆ ಮೃತ ಪಟ್ಟಿದ್ದಾಳೆ. ಇದೇ ಅಪಾರ್ಟ್‌ಮೆಂಟಿನಲ್ಲಿ ಮೂರು ತಿಂಗಳ ಹಿಂದೆ ಬಾಲಕಿಗೆ ಕರೆಂಟ್ ಶಾಕ್ ಹೊಡೆದಿತ್ತು. ಆದರೆ, ಆಕೆ ಅದೃಷ್ಟವಶಾತ್ ಬಚಾವಾಗಿದ್ದಳು. ಘಟನಾ ಸ್ಥಳದಲ್ಲಿ ನಿನ್ನೆಯವರೆಗೂ ಇದ್ದ ಸಿಸಿ ಟಿವಿ ವ್ಯವಸ್ಥೆಯನ್ನು ಈಗ ತೆಗೆದಿದ್ದಾರೆ ಎಂಬ ಮಾಹಿತಿಯೂ ಲಭಿಸಿದೆ ಎಂದು ಆರೋಪಿಸಿದರು. ಕಾಡುಗೋಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಜ್ಞರು ನೀಡಿರುವ ವರದಿಯನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಪಾಲಕರ ದೂರಿನ ಮೇಲೆ ಪೊಲೀಸರಿಂದ ತನಿಖೆ :
ಡಿ.28ರಂದು ರಾತ್ರಿ 8 ಗಂಟೆಗೆ ಅಪಾರ್ಟ್‌ಮೆಂಟ್‌ನ ಬಳಿ ಇರುವ ಈಜುಕೊಳದ ನೀರಿನಲ್ಲಿ ಮಾನ್ಯಾ ಮುಳುಗಿದ್ದಳು. ಸಾರ್ವಜನಿಕರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ತಮ್ಮ ಮಗಳ ಸಾವಿನ ಬಗ್ಗೆ ಅನುಮಾನವಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಬಾಲಕಿಯ ತಂದೆ ರಾಜೇಶ್ ಕುಮಾರ್ ಉಲ್ಲೇಖೀಸಿದ್ದಾರೆ. ಇದೀಗ ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.