Fraud: ಡ್ರಗ್ಸ್ ಕೇಸ್ ಎಂದು ಬೆದರಿಸಿದ್ದಕ್ಕೆ 13 ಲಕ್ಷ ರೂ.ನಾಮ ಹಾಕಿಸಿಕೊಂಡ ಶ್ರೀನಿವಾಸ!
Team Udayavani, Sep 24, 2023, 11:26 AM IST
ಬೆಂಗಳೂರು: ಮುಂಬೈನಿಂದ ತೈವಾನ್ಗೆ ನಿಮ್ಮ ಹೆಸರಿನಲ್ಲಿ ಡ್ರಗ್ಸ್ ಪಾರ್ಸೆಲ್ ಹೋಗುತ್ತಿದೆ ಎಂದು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿದ ಸೈಬರ್ ಕಳ್ಳರು 13.64 ಲಕ್ಷ ರೂ. ವಂಚಿಸಿದ್ದಾರೆ. ಗಿರಿನಗರದ ನಿವಾಸಿ ಶ್ರೀನಿವಾಸ ಜೋಯಿಸ್ (54) ವಂಚನೆಗೊಳಗಾದವರು.
ಸೆ.13ರಂದು ಶ್ರೀನಿವಾಸ್ಗೆ ಅಪರಿಚಿತರು ಕರೆ ಮಾಡಿ ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿರುವುದಾಗಿ ನಂಬಿಸಿದ್ದ. ನಿಮ್ಮ ಹೆಸರಿನಲ್ಲಿ ಮುಂಬೈನಿಂದ ತೈವಾನ್ ದೇಶಕ್ಕೆ ಕೊರಿಯರ್ ಮೂಲಕ 150 ಗ್ರಾಂ ಎಂಡಿಎಂಎ ಮಾದಕ ವಸ್ತು ಅಕ್ರಮವಾಗಿ ಪಾರ್ಸೆಲ್ ಹೋಗುತ್ತಿರುವುದು ಗೊತ್ತಾಗಿದೆ. ನಿಮ್ಮ ಕರೆಯನ್ನು ಇದೀಗ ಮುಂಬೈ ಕ್ರೈಂ ಬ್ರ್ಯಾಂಚ್ಗೆ ಕಳುಹಿಸುವುದಾಗಿ ನಂಬಿಸಿದ್ದ. ಆ ವೇಳೆ ಶ್ರೀನಿವಾಸ್ ಜೊತೆಗೆ ಮಾತನಾಡಿದ ಮತ್ತೋರ್ವ ವ್ಯಕ್ತಿ ತನ್ನನ್ನು ಸಿಬಿಐ ತನಿಖಾಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಅಕ್ರಮವಾಗಿ ಡ್ರಗ್ಸ್ ವಿದೇಶಕ್ಕೆ ಹೋಗುತ್ತಿದೆ ಎಂದು ಹೇಳಿದ್ದ.
ಬಳಿಕ ಸ್ಕೈಪ್ ಆ್ಯಪ್ ಮೂಲಕ ವಿಡಿಯೋ ಕರೆ ಮಾಡಿ ನಕಲಿ ಐಡಿ ಕಾರ್ಡ್ ತೋರಿಸಿದ್ದ. ಆರ್ಬಿಐನಿಂದ ಹೆಸರು, ಫೋಟೊ, ಆಧಾರ್ ಕಾರ್ಡ್ ಪಡೆದುಕೊಂಡಿರುವುದಾಗಿ ಅಪರಿಚಿತ ತಿಳಿಸಿದ್ದ. ಈ ಕೇಸ್ ಮುಕ್ತಾಯಗೊಳಿಸಲು ನಮ್ಮ ಬ್ಯಾಂಕ್ ಖಾತೆಗೆ ದುಡ್ಡು ಹಾಕುವಂತೆ ಸೂಚಿಸಿ ಶ್ರೀನಿವಾಸ್ ಅವರಿಂದ ಹಂತ- ಹಂತವಾಗಿ 13.64 ಲಕ್ಷ ರೂ. ಹಾಕಿಸಿಕೊಂಡಿದ್ದ. ಅನುಮಾನ ಬಂದು ಶ್ರೀನಿವಾಸ್ ಈ ಬಗ್ಗೆ ಪರಿಶೀಲಿಸಿದಾಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.