ಕ್ಯಾನ್ಸರ್ ಜಾಗೃತಿಗೆ ಸೈಕ್ಲಥಾನ್
Team Udayavani, May 5, 2019, 3:01 AM IST
ಬೆಂಗಳೂರು: ಕರುಳು, ಗುದನಾಳ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎಚ್‌ಎಎಲ್ ರಸ್ತೆಯ ಮಣಿಪಾಲ್ ಆಸ್ಪತ್ರೆ ವತಿಯಿಂದ ಸೈಕ್ಲಥಾನ್ ಹಮ್ಮಿಕೊಳ್ಳಲಾಗಿತ್ತು. ಆಸ್ಪತ್ರೆ ಆವರಣದಲ್ಲಿ ಶನಿವಾರ ಬೆಳಗ್ಗೆ 6.30ಕ್ಕೆ ಕಿರುತರೆ ನಟಿ ಅನುಪಮಾ ಗೌಡ ಸೈಕ್ಲಥಾನ್‌ಗೆ ಚಾಲನೆ ನೀಡಿದರು.
ಹಳೆಯ ವಿಮಾನ ನಿಲ್ದಾಣ ರಸ್ತೆ, ಎಎಸ್‌ಸಿ ಜಂಕ್ಷನ್, ಟ್ರಿನಿಟಿ ಜಂಕ್ಷನ್, ಹಲಸೂರು ಮೆಟ್ರೋ ಸ್ಟೇಷನ್, ಇಂದಿರಾನಗರ ಮೆಟ್ರೊ ಸ್ಟೇಷನ್, ಕೆಎಫ್ಸಿ ಜಂಕ್ಷನ್, ಬಾರ್ಬೆಕ್ಯೂ ನೇಷನ್ ಬಳಿ 100 ಅಡಿ ರಸ್ತೆಗಳಲ್ಲಿ ಸಾಗಿ ಆಸ್ಪತ್ರೆ ಆವರಣಕ್ಕೆ ಹಿಂದಿರುಗಿತು. ಸುಮಾರು 10 ಕಿ.ಮೀ ಸಾಗಿದ ಜಾಥಾದಲ್ಲಿ ಸುಮಾರು 250 ಸೈಕ್ಲಿಸ್ಟ್‌ಗಳು ಭಾಗವಹಿಸಿದ್ದರು.
ಆನಂತರ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಣಿಪಾಲ್ ಆಸ್ಪತ್ರೆಯ ಚೇರ್ಮನ್ ಡಾ. ಸುದರ್ಶನ್‌ಬಲ್ಲಾಳ್ ಮಾತನಾಡಿ, ಭಾರತದಲ್ಲಿ ಆಲಸ್ಯ ಜೀವನಶೈಲಿ ಮತ್ತು ಆಧುನಿಕ ಆಹಾರ ಪದ್ಧತಿಯಿಂದ ಕೊಲೋರೆಕ್ಟೆಲ್ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ.
ಎಳೆಯ ವಯಸ್ಸಿನವರಲ್ಲಿಯೇ ಈ ರೋಗ ಪತ್ತೆಯಾಗುತ್ತಿದೆ. ಶೀಘ್ರವಾಗಿ ರೋಗ ಗುರುತಿಸುವುದರಿಂದ ಯಶಸ್ವಿ ಚಿಕಿತ್ಸೆ ನೀಡಿ ಗುಣಪಡಿಸಬಹುದು. ಆರೋಗ್ಯ ಉತ್ತಮಗೊಳಿಸಿಕೊಳ್ಳಲು ನಿತ್ಯದ ಊಟ, ವ್ಯಾಯಾಮ ಸೇರಿದಂತೆ ಇನ್ನಿತರ ಚಟುವಟಿಕೆಯಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳುವುದು ಮುಖ್ಯ ಎಂದರು.
ಮಣಿಪಾಲ್ ಆಸ್ಪತ್ರೆಯ ವಿಭಾಗೀಯ ಮುಖ್ಯಸ್ಥ ಡಾ. ಎಸ್.ಪಿ.ಸೋಮಶೇಖರ್ ಮಾತನಾಡಿ, ಜಂಕ್‌ಫುಡ್ ಸೇವನೆ, ಮದ್ಯಪಾನ ಮತ್ತು ಧೂಮಪಾನ ಹೆಚ್ಚಾಗಿರುವುದು ಹಾಗೂ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಳ ಕೂಡ ಇದಕ್ಕೆ ಕಾರಣವಾಗಿವೆ ಎಂದು ತಿಳಿಸಿದರು. ಈ ವೇಳೆ ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸಸ್ ಪ್ರೈ.ಲಿ, ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ದೀಪಕ್ ವೇಣುಗೋಪಾಲ್, ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.