ಸಿಲಿಂಡರ್ ಸ್ಫೋಟ: ಯುವಕನಿಗೆ ಗಾಯ
Team Udayavani, Feb 22, 2019, 6:22 AM IST
ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕೇರಳ ಮೂಲದ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಬೇಗೂರು ಠಾಣೆ ವ್ಯಾಪ್ತಿಯ ಲಕ್ಷ್ಮೀ ಲೇಔಟ್ನಲ್ಲಿ ಬುಧವಾರ ಸಂಜೆ ನಡೆದಿದೆ. ನಿಶಾಂತ್ (28) ಗಾಯಗೊಂಡ ಯುವಕ. ಘಟನೆಯಲ್ಲಿ ಶೇ.80ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿರುವ ನಿಶಾಂತ್, ವಿಕ್ಟೋರಿಯಾ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಲ ವರ್ಷಗಳಿಂದ ಬೇಗೂರಿನ ಲಕ್ಷ್ಮೀ ಲೇಔಟ್ನ ಬಾಡಿಗೆ ಮನೆಯಲ್ಲಿ ವಾಸವಿರುವ ನಿಶಾಂತ್, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಗ್ಯಾಸ್ ಸ್ಟವ್ ಹಚ್ಚುವಾಗ ಅನಿಲ ಸೋರಿಕೆಯಿಂದ ಸ್ಫೋಟಗೊಂಡಿದೆ ಎಂದು ಹೇಳಲಾಗಿದೆ.
ಆದರೆ, ಪ್ರಾಥಮಿಕ ಮಾಹಿತಿ ಪ್ರಕಾರ ನಿಶಾಂತ್ ಮಾನಸಿಕ ಖನ್ನತೆಗೆ ಒಳಗಾಗಿದ್ದು, ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ನಿಶಾಂತ್ ಪೋಷಕರಿಗೆ ಮಾಹಿತಿ ನೀಡಿದ್ದು, ಅವರು ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.