ಸಿಲಿಂಡರ್ ಸ್ಫೋಟಿಸಿಕೊಂಡು ವೃದ್ಧ ಆತ್ಮಹತ್ಯೆ?
Team Udayavani, Apr 23, 2018, 12:49 PM IST
ಬೆಂಗಳೂರು: ನಗರದ ಶ್ರೀನಿವಾಸಪುರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಶ್ರೀರಾಮುಲು ನಾಯ್ಡು (70) ಎಂಬುವವರು ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಭಾನುವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಶ್ರೀರಾಮುಲು ನಾಯ್ಡು ಮನೆಯಿಂದ ಭಾರೀ ಹೊಗೆ ಬರುತ್ತಿರುವುದನ್ನು ಗಮನಿಸಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ತೆರಳಿ ಮನೆಯ ಬಾಗಿಲು ಒಡೆದು ಒಳಪ್ರವೇಶಿಸಿದಾಗ ಶ್ರಿರಾಮುಲು ನಾಯ್ಡು ಸುಟ್ಟು ಕರಕಲಾಗಿದ್ದರು. ಮನೆಯ ವಸ್ತುಗಳೆಲ್ಲಾ ಸುಟ್ಟು ಹೋಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀರಾಮಲು ನಾಯ್ಡು ದಂಪತಿಯ ಇಬ್ಬರು ಗಂಡು ಮಕ್ಕಳು ಮೆಡಿಕಲ್ ಶಾಪ್ ಇಟ್ಟುಕೊಂಡಿದ್ದು, ಹನುಮಂತಪುರದಲ್ಲಿ ಪ್ರತ್ಯೇಕವಾಗಿ ವಾಸವಿದ್ದಾರೆ. ವೃದ್ಧ ದಂಪತಿ ಇಬ್ಬರೇ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ಇಬ್ಬರೂ ಸಂಬಂಧಿಕರೊಬ್ಬರ ಮದುವೆಗೆ ಹೋಗಿದ್ದು, ಪತ್ನಿ ಅಲ್ಲಿಯೇ ಉಳಿದುಕೊಂಡಿದ್ದರು. ಬೆಳಗ್ಗೆ ಮುಹೂರ್ತಕ್ಕೆ ಬರುತ್ತೇನೆ ಎಂದು ಹೇಳಿ ಮನೆಗೆ ವಾಪಾಸ್ ಬಂದಿದ್ದ ಶ್ರೀರಾಮುಲು ನಾಯ್ಡು ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದಾರೆ.
ಶ್ರೀರಾಮಲು ನಾಯ್ಡು ಹಿರಿಯ ಪುತ್ರ ಕಳೆದ ವರ್ಷ ಹೃದಯಾಘಾತದಿಂದ ಅಸುನೀಗಿದ್ದರು. ಇದರಿಂದ ಸಾಕಷ್ಟು ನೊಂದಿದ್ದ ಅವರು ಮಾನಸಿಕ ಖನ್ನತೆಗೆ ಒಳಗಾಗಿದ್ದರು ಎಂದು ಅವರ ಮನೆಯವರು ಹೇಳುತ್ತಾರೆ. ಶ್ರೀರಾಮಲು ಅವರೇ ಗ್ಯಾಸ್ ಲೀಕ್ ಮಾಡಿ ಸಿಲಿಂಡರ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಆಕಸ್ಮಿಕವಾಗಿ ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸ್ಫೋಟಿಸಿ ಮೃತಪಟ್ಟಿದ್ದಾರೋ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.