IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
Team Udayavani, Dec 19, 2024, 11:00 AM IST
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ತಿಕ್ಕಾಟ ಮತ್ತೆ ಮುನ್ನಲೆಗೆ ಬಂದಿದ್ದು, ಡಿ.ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
2023ರ ಫೆ.19ರಂದು ರೋಹಿಣಿ ಸಿಂಧೂರಿ ಅವರು ಮಾಧ್ಯಮ ಹೇಳಿಕೆಯೊಂದನ್ನು ನೀಡಿದ್ದರು. ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿದ್ದರು. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ಈ ಅವಹೇಳನಕಾರಿ ಹೇಳಿಕೆ ನಂತರ ತಮ್ಮ ವರ್ಗಾವಣೆ ಆಗಿದೆ. ರೋಹಿಣಿ ಸಿಂಧೂರಿ ಹೇಳಿಕೆಯಿಂದ, ತಮ್ಮ ಕುಟುಂಬಸ್ಥರಿಗೆ ಮಾನಸಿಕವಾಗಿ ಕಿರಿಕಿರಿಯಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸುವಂತೆ ರೂಪಾ ಅರ್ಜಿ ಸಲ್ಲಿಸಿದ್ದಾರೆ. ಡಿ. ರೂಪಾ ಮೌದ್ಗಿಲ್ ಅವರ ಅರ್ಜಿಯನ್ನು ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ಕೈಗೆತ್ತಿಕೊಂಡು ರೋಹಿಣಿ ಸಿಂಧೂರಿ ಅವರಿಗೆ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Techie Atul Subhash Case: ಅತುಲ್ನಿಂದಲೇ ನನಗೆ ತೊಂದರೆ: ಪತ್ನಿ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.