ದಲಿತರಿಗೆ ವಿಶೇಷ ಬಜೆಟ್‌ ಮಂಡಿಸಲು ಆಗ್ರಹ

Team Udayavani, Feb 16, 2017, 12:31 PM IST

protest.jpg

ಬೆಂಗಳೂರು: “ದಲಿತರಿಗೆ ಈ ಬಾರಿ ವಿಶೇಷ ಬಜೆಟ್‌ ಮಂಡನೆ ಮಾಡಬೇಕು ಹಾಗೂ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನ ಶೇ.25ರಷ್ಟು ಹಣವನ್ನು ಮೀಸಲಿಡಬೇಕು,” ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಬುಧವಾರ ನಗರದ ಪುರಭವನ ಮುಂಭಾಗ ಪ್ರತಿಭಟನೆ ನಡೆಸಿದರು. 

“ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮೇಲ್ನೋಟಕ್ಕೆ ಭಾರೀ ಯೋಜನೆ, ಕಾರ್ಯಕ್ರಮಗಳನ್ನು ಘೋಷಿಸಿದರೂ ಅವುಗಳಿಗೆ ಸೂಕ್ತ ಅನುದಾನ ಬಿಡುಗಡೆಯಾಗಲಿ, ಬಿಡುಗಡೆಯಾದ ಅನುದಾನ ಸಮರ್ಪಕ ಬಳಕೆಯಾಗಲಿ ಮಾಡುತ್ತಿಲ್ಲ. ಇದರಿಂದ ಪರಿಶಿಷ್ಟರ ಅಭಿವೃದ್ಧಿ ಮರೀಚಿಕೆಯಾಗಿಯೇ ಉಳಿದಿದೆ,” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 

ಪ್ರತಿಭಟನೆ ನೇತೃತ್ವ ವಹಿಸಿದ್ದ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎನ್‌.ಮೂರ್ತಿ ಮಾತನಾಡಿ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಎಸ್‌ಇಪಿ ಟಿಎಸ್‌ಪಿ ಕಾಯ್ದೆಯಡಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟರಿಗೆ 19,300 ಕೋಟಿ ರೂ. ಮೀಸಲಿಟ್ಟರೂ, ಅದರಲ್ಲಿ ಪರಿಶಿಷ್ಟರಿಗೆ ಬಳಕೆಯಾಗಿರುವುದು ಕೇವಲ 9 ಸಾವಿರ ಕೋಟಿ ರೂ. ಉಳಿದ 10 ಸಾವಿರ ಕೊಟಿ ರೂ.ಗಳನ್ನು ಬೇರೆ ಬೇರೆ ಕಾರ್ಯಗಳಿಗೆ ಬಳಸಲಾಗಿದೆ. ಪರಿಶಿಷ್ಟರಿಗೆ ಮೀಸಲಿಟ್ಟ ಹಣ ಅವರಿಗಾಗಿಯೇ ಖರ್ಚು ಮಾಡಲು ಕಾಯ್ದೆ ತಂದರೂ ಪ್ರಯೋಜನವಾಗಿಲ್ಲ. ಈ ಕಾಯ್ದೆಯಲ್ಲಿನ ಕೆಲ ನಿಯಮಗಳ ಲೋಪದಿಂದಾಗಿ ಪರಿಶಿಷ್ಟರಿಗೆ ಪೂರ್ಣ ಹಣ ಬಳಕೆಯಾಗುತ್ತಿಲ್ಲ,” ಎಂದು ದೂರಿದರು.

“ರಾಜ್ಯ ಸರ್ಕಾರ ಮುಂದಿನ ಬಜೆಟ್‌ನಲ್ಲಿ ಪರಿಶಿಷ್ಟರ ಜನಸಂಖ್ಯೆ ಆಧರಿಸಿ ಬಜೆಟ್‌ನ ಶೇ.25ರಷ್ಟು ಹಣವನ್ನು ಈ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಸಬೇಕು. ಅದೇ ರೀತಿ ದಲಿತರಿಗೆ ವಿಶೇಷ ಬಜೆಟ್‌ ಮಂಡಿಸಬೇಕು. ದಲಿತರ ಅಭಿವೃದ್ಧಿಗಾಗಿ ನ್ಯಾ.ಎ.ಜೆ.ಸದಾಶಿವ ಆಯೋಗ ಮತ್ತು ಕಾಂತರಾಜ್‌ ಅವರ ವರದಿಗಳನ್ನು ಜಾರಿಗೆ ತರಬೇಕು,” ಎಂದು ಒತ್ತಾಯಿಸಿದರು. 

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.