ಡಾ.ರಾಜ್ ವ್ಯಕ್ತಿತ್ವ ಸಾಗರದಂತೆ
Team Udayavani, Apr 25, 2019, 4:14 AM IST
ಬೆಂಗಳೂರು: ಕನ್ನಡ ಕಲೆ ಮತ್ತು ಸಾಹಿತ್ಯ ಲೋಕದಲ್ಲಿ ಡಾ.ರಾಜಕುಮಾರ್ ಮತ್ತು ಕುವೆಂಪು ಶಾಶ್ವತ ರಾಯಭಾರಿಗಳು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಕೆ.ಎಸ್.ನಿಸಾರ್ ಅಹಮದ್ ಅಭಿಪ್ರಾಯಪಟ್ಟರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ಆಯೋಜಿಸಿದ್ದ ಡಾ.ರಾಜಕುಮಾರ್ 91ನೇ ಜನ್ಮ ದಿನಾಚರಣೆಯಲ್ಲಿ ಅತಿಥಿಯಾಗಿ ಮಾತನಾಡಿದರು.
ಡಾ.ರಾಜಕುಮಾರ್ ಅವರ ವ್ಯಕ್ತಿತ್ವ ಆಕಾಶ, ಸಾಗರದಂತೆ. ಅದನ್ನು ಎಲ್ಲಿಂದ ಶುರುಮಾಡಿ, ಎಲ್ಲಿ ಮುಗಿಸಬೇಕು ಎಂಬುದು ಗೊತ್ತಾಗುವುದಿಲ್ಲ. ಅವರ ಜೊತೆ ಮಾತುಕತೆಗೆ ಕುಳಿತರೆ ಸಾಕು ಸುಮಾರು ಮೂರರಿಂದ ನಾಲ್ಕು ಗಂಟೆಯವರೆಗೆ ಸುದೀರ್ಘ ಮಾತುಕತೆ ನಡೆಯುತ್ತಿತ್ತು.
ಹೊರ ರಾಜ್ಯದಲ್ಲಿ ರಾಜಕುಮಾರ್ ಅವರ ಚಿತ್ರವೊಂದರ ಚಿತ್ರೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಕೆಲವು ಭಾಷಾಂಧಕಾರರಿಂದ ಅವರ ಮೇಲೆ ಹಲ್ಲೆಯಾಗಿತ್ತು. ಅದನ್ನು ಖಂಡಿಸುವ ಸಲುವಾಗಿ ನಾವೆಲ್ಲ ಒಂದಾಗಿ ಧ್ವನಿಗೂಡಿಸಿದರೂ, ರಾಜಕುಮಾರ್ ಮಾತ್ರ, “ಯಾರೋ ಕೆಲವರಿಂದ ಆದ ಕೃತ್ಯಕ್ಕೆ ಇಡೀ ಭಾಷಾ ಸಮುದಾಯವನ್ನು ದ್ವೇಷಿಸುವುದು ತಪ್ಪು’ ಎಂದು ನಮ್ಮನ್ನು ತಡೆದಿದ್ದರು.
ಸಿನಿಮಾ ಮಾತ್ರವಲ್ಲ ಕನ್ನಡ ನಾಡು ನುಡಿ ಇರುವವರೆಗೂ ರಾಜಕುಮಾರ್ ಅವರ ಹೆಸರು ಚಿರಸ್ತಾಯಿ ಆಗಿರುತ್ತದೆ ಎಂದು ಹೇಳಿದ ಕೆ.ಎಸ್.ನಿಸಾರ್ ಅಹಮದ್, ತಮ್ಮ ಹಾಗು ರಾಜಕುಮಾರ್ ನಡುವಿನ ಒಡನಾಟವನ್ನು ಈ ಸಂದರ್ಭದಲ್ಲಿ ತೆರೆದಿಟ್ಟರು.
ರಾಜಕುಮಾರ್ ಜನ್ಮ ದಿನಾಚರಣೆಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ನಾಗತಿಹಳ್ಳಿ ಚಂದ್ರಶೇಖರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಚಿನ್ನೇಗೌಡ, ರಾಜ್ ಪುತ್ರರಾದ ಶಿವರಾಜಕುಮಾರ್, ರಾಘವೇಂದ್ರರಾಜಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ರಿಜಿಸ್ಟ್ರಾರ್ ದಿನೇಶ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಇದೇ ಸಂದರ್ಭದಲ್ಲಿ ಮೋಹನ್ ಮತ್ತು ತಂಡ ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟಿತು. ಶಿವರಾಜಕುಮಾರ್ ಅವರು ರಾಜಕುಮಾರ್ ಚಿತ್ರಗಳ ಎರಡು ಗೀತೆಗಳನ್ನು ಹಾಡಿ ರಂಜಿಸಿದರು. ಯೋಗರಾಜ್‌ಭಟ್ ಕಾರ್ಯಕ್ರಮ ಸಂಯೋಜಿಸಿದ್ದರು. ಸಾಹಿತಿ ಬರಗೂರು ರಾಮಚಂದ್ರಪ್ಪ, ನಾಗೇಂದ್ರಪ್ರಸಾದ್ ಸೇರಿದಂತೆ ಡಾ.ರಾಜಕುಮಾರ್ ಕುಟುಂಬ ವರ್ಗ ಹಾಗು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.