ದಾಸೋಹ ಕಂಟ್ರೋಲ್ ರೂಂಗೆ ಚಾಲನೆ
Team Udayavani, Apr 4, 2020, 11:55 AM IST
ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಡ ಕಾರ್ಮಿಕರಿಗೆ ಆಹಾರ ಒದಗಿಸುವ ‘ದಾಸೋಹ’ ಕಾರ್ಯಕ್ರಮ ತಂತ್ರಜ್ಞಾನದ ಉತ್ತಮ ಬಳಕೆಗೆ ಉದಾಹರಣೆ. ಇಂಥ ಪಾರದರ್ಶಕ ವ್ಯವಸ್ಥೆ ಎಲ್ಲ ಇಲಾಖೆಗಳಿಗೂ ಮಾದರಿ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ವಾರ್ತಾ ಭವನದ ಮಹಾತ್ಮ ಗಾಂಧಿ ಮಾಧ್ಯಮ ಕೇಂದ್ರದಲ್ಲಿ ನೂತನವಾಗಿ ರೂಪಿಸಲಾಗಿರುವ ‘ದಾಸೋಹ ಕಂಟ್ರೋಲ್ ರೂಂ’ಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, “ಕೋವಿಡ್ 19 ತಂದೊಡ್ಡಿರುವ ಸಂಕಷ್ಟದ ಸಮಯದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಟಾರ್ ಅವರು ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡಿದ್ದಾರೆ.
ಸ್ವಿಗ್ಗಿ ಹಾಗೂ ವಾರ್ತಾ ಇಲಾಖೆಯ ಮೂಲ ಸೌಕರ್ಯ ಬಳಸಿಕೊಂಡು ಬಡ ಕೂಲಿಕಾರ್ಮಿಕರು ಇರುವಲ್ಲಿಗೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.
ಕಾರ್ಮಿಕ ಸಹಾಯವಾಣಿ: ಕಾರ್ಮಿಕರ ಅಗತ್ಯಗಳನ್ನು ಪೂರೈಸಲು ಮತ್ತು ಆಹಾರ ಸರಬರಾಜು ಮಾಡುವ ನಿಟ್ಟಿನಲ್ಲಿ ಈ ರ್ವಾರೂಂ ನೆರವಾಗಲಿದೆ. ಕಾರ್ಮಿಕ ಮತ್ತು ಶ್ರಮಿಕ ವರ್ಗದ ಸಮಸ್ಯೆಗಳಿಗೆ 155214 ಸಹಾಯವಾಣಿಯನ್ನು ಸಂಪರ್ಕಿಸಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.