ರಾಮನಗರ, ಚನ್ನಪಟ್ಟಣ ನಗರಸಭೆ ಚುನಾವಣೆ : ಜಿಲ್ಲಾ ಮುಖಂಡರ ಜತೆ ಡಿಸಿಎಂ ಅಶ್ವತ್ಥನಾರಾಯಣ ಸಭೆ
Team Udayavani, Apr 17, 2021, 9:38 PM IST
ಬೆಂಗಳೂರು: ರಾಮನಗರ ಹಾಗೂ ಚನ್ನಪಟ್ಟಣ ನಗರಸಭೆಗಳ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ವಿಧಾನಪರಿಷತ್ ಸದಸ್ಯರ ಜತೆ ನಗರದಲ್ಲಿ ಶನಿವಾರ ಸಮಾಲೋಚನೆ ನಡೆಸಿದರು.
ಇದುವರೆಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಕಪಿಮುಷ್ಠಿಯಲ್ಲಿದ್ದ ಎರಡು ನಗರಸಭೆಗಳನ್ನು ಈ ಬಾರಿ ಬಿಜೆಪಿ ಗೆಲ್ಲಲೇಬೇಕು. ಮಂಗಳವಾರದಿಂದಲೇ ಎರಡೂ ಕಡೆ ವ್ಯವಸ್ಥಿತವಾಗಿ ಪ್ರಚಾರ ನಡೆಸಬೇಕು. ಎಲ್ಲರೂ ಒಗ್ಗಟ್ಟಾಗಿ ಮನೆಮನೆಗೂ ತೆರಳಿ ಮತಯಾಚನೆ ಮಾಡಬೇಕು ಎಂದು ಅವರು ಮುಖಂಡರಿಗೆ ನಿರ್ದೇಶನ ನೀಡಿದರು.
ಬೆಂಗಳೂರಿಗೆ ಅತಿ ಹತ್ತಿರದಲ್ಲಿದ್ದರೂ ರಾಮನಗರ ಈಗಲೂ ದೊಡ್ಡ ಹಳ್ಳಿಯಂತೆ ಕಾಣುತ್ತದೆ. ಹೇಳಿಕೊಳ್ಳುವಂಥ ಒಂದು ರಸ್ತೆ ಇಲ್ಲ, ಸಮರ್ಪಕ ಮೂಲಸೌಕರ್ಯಗಳಿಲ್ಲ, ಒಳಚರಂಡಿ ವ್ಯವಸ್ಥೆ ಇಲ್ಲ, ಸುಸಜ್ಜಿತ ಬಸ್ ನಿಲ್ದಾಣವಿಲ್ಲ, ನಾವು ಅಧಿಕಾರಕ್ಕೆ ಬರುವ ತನಕ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಒಂದೇ ಒಂದು ವೆಂಟಿಲೇಟರ್ ಇರಲಿಲ್ಲ. ಜನರು ಅನಾರೋಗ್ಯವಾದರೆ ಬೆಂಗಳೂರಿಗೆ ಓಡಿ ಹೋಗುವ ಪರಿಸ್ಥಿತಿ ಇತ್ತು. ಈ ಎಲ್ಲ ಅಂಶಗಳನ್ನು ಜನರಿಗೆ ಮನದಟ್ಟು ಮಾಡಬೇಕು, ಅವರನ್ನು ಒಲಿಸಿಕೊಳ್ಳಬೇಕು ಎಂದು ಡಾ.ಅಶ್ವತ್ಥನಾರಾಯಣ ಸಲಹೆ ನೀಡಿದರು.
ರಾಮನಗರದ ಜನ ಉದ್ಯೋಗ ಬೇಕೆಂದರೆ ಬೆಂಗಳೂರಿಗೇ ಬರಬೇಕು. ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡುವಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸರಕಾರಗಳು ವಿಫಲವಾಗಿವೆ. ಜಿಲ್ಲೆಯಿಂದ ಗೆದ್ದುಹೋಗಿ ಅಧಿಕಾರ ಅನುಭವಿಸಿದವರು ಏನು ಮಾಡಿದ್ದಾರೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮುಖಂಡರಿಗೆ ಅವರು ಸಲಹೆ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಅ.ದೇವೇಗೌಡ, ಪುಟ್ಟಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ, ಬಿಜೆಪಿ ಜಿಲ್ಲಾಧ್ಯಕ್ಷ ಹುಲವಾಡಿ ನಾಗರಾಜ್, ಸಂಘಟನಾ ಕಾರ್ಯದರ್ಶಿ ಕಾಂತರಾಜು, ಕೇಶವ ಪ್ರಸಾದ್ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.