ಅನುದಾನ ನೀಡದ ಅಧಿಕಾರಿಗಳಿಗೆ ಡಿಸಿಎಂ ತರಾಟೆ
Team Udayavani, Sep 5, 2018, 12:11 PM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡದ ಪಾಲಿಕೆಯ ಅಧಿಕಾರಿಗಳನ್ನು ಉಪಮುಖ್ಯಮಂತ್ರಿಯೂ ಆದ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ತರಾಟೆಗೆ ತೆಗೆದುಕೊಂಡರು.
ಮಂಗಳವಾರ ಶಿವಾಜಿನಗರ ವಿಧಾನ ಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳು ಹಾಗೂ ಅಲ್ಲಿನ ಕುಂದು ಕೊರತೆಗಳನ್ನು ಪರಿಶೀಲಿಸಿದ ಅವರು, ಹಲಸೂರು ವಾರ್ಡ್‌ನ ಎಂ.ವಿ.ಗಾರ್ಡನ್ ಶಿಶುವಿಹಾರ, ಗ್ರಂಥಾಲಯ, ವ್ಯಾಯಾಮ ಶಾಲೆಯ ಕಟ್ಟಡ ಶಿಥಿಲಾವಸ್ಥೆ ತಲುಪಿರುವುದು ಕಂಡು ಅಧಿಕಾರಿಗಳು ಹಾಗೂ ಪಾಲಿಕೆ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು.
ಪಾಲಿಕೆಯಿಂದ 10 ಸಾವಿರ ಕೋಟಿ ರೂ. ಬಜೆಟ್ ಮಂಡಿಸಿದ್ದು, ಅದರಲ್ಲಿ 500 ಕೋಟಿ ರೂ. ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲು ಏನು ಸಮಸ್ಯೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಪಾಲಿಕೆ ಸದಸ್ಯೆ ಮಮತಾ ಶರವಣ ಅವರನ್ನು ಕರೆದು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದರೂ ಏಕೆ ಅಭಿವೃದ್ಧಿಗೆ ಮುಂದಾಗಿಲ್ಲ? ಮಕ್ಕಳಿಗೆ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ? ಕೂಡಲೇ ಶಾಲೆಗಳ ದುರಸ್ತಿಗೆ ಮುಂದಾಗುವಂತೆ ತಿಳಿಸಿದ ಅವರು, ತಮ್ಮದೇ ನಿಧಿಯಿಂದ 5 ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಕನ್ನಡ ಕಲಿಸುವಂತೆ ತಾಕೀತು: ಶಿವಾಜಿನಗರದ ರೆಹಮಾನಿಯ ಸರ್ಕಾರಿ ಉರ್ದು ಶಾಲೆಗೆ ಭೇಟಿ ನೀಡಿ ಅಲ್ಲಿನ ಮಕ್ಕಳೊಂದಿಗೆ ಮಾತುಕತೆ ನಡೆಸಿದ ಪರಮೇಶ್ವರ್, ನೀವೇನು ಕಲಿತಿದ್ದೀರೋ ಅದನ್ನು ಕನ್ನಡಲ್ಲಿ ಹೇಳಿ ಎಂದಾಗ, ಕನ್ನಡದಲ್ಲಿ ಮಾತನಾಡಲು ಮಕ್ಕಳು ತಡಬಡಿಸಿದರು. ಇದರಿಂದ ಬೇಸರಗೊಂಡ ಅವರು, ಮಕ್ಕಳಿಗೆ ಕನ್ನಡ ಭಾಷೆ ಕಲಿಸುವಂತೆ ಅಲ್ಲಿನ ಶಿಕ್ಷಕರಿಗೆ ತಾಕೀತು ಮಾಡಿದರು. ಅಲ್ಲಿಂದ ಭಾರತಿನಗರದ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಸ್ವತ್ಛತೆ, ಚಿಕಿತ್ಸಾ ಗುಣಮಟ್ಟ, ದೊರೆಯುತ್ತಿರವ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಅಲ್ಲಿಂದ ಶಿವಾಜಿನಗರ ಬ್ರಾಡ್‌ವೇ ರಸ್ತೆಯಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿಗಳ ವಸತಿ ಗೃಹ ಸಂಕೀರ್ಣಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ವಾತಾವರಣ ಪರಿಶೀಲಿಸಿದರು. ಈ ವೇಳೆ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‌ಕುಮಾರ್ ಅವರು, ಇದೇ ಸ್ಥಳದಲ್ಲಿ ಬೆಂಗಳೂರು ಪೂರ್ವ ಡಿಸಿಪಿ ಕಚೇರಿ ಹಾಗೂ ಎಸಿಪಿ ಕಚೇರಿ ನಿರ್ಮಾಣಕ್ಕೆ ಎರಡು ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.
ಜಹಮಹಲ್ ವಾರ್ಡ್‌ನಲ್ಲಿ 24 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸೌಲಭ್ಯವುಳ್ಳ ಆಸ್ಪತ್ರೆ ಕಟ್ಟಡ ಕಾಮಗಾರಿ ಪರಿಶೀಲಿಸಿದ ಪರಮೇಶ್ವರ್, ಕಟ್ಟಡ ಕಾಮಗಾರಿ ಕೊನೆಯ ಹಂತದಲ್ಲಿರುವುದನ್ನು ಗಮನಿಸಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಿಗದಿಗೊಳಿಸುವಂತೆ ಪಾಲಿಕೆಯ ಆಯುಕ್ತರಿಗೆ ಸೂಚಿಸಿದರು.
ಹೊಸ ಮನೆ ಕೊಡಿಸುವುದಾಗಿ ಭರವಸೆ: ಪರಿಶೀಲನೆ ವೇಳೆ ಯಲ್ಲಮ್ಮ ಕೋಳಿ ಕಾಲೋನಿಗೆ ಭೇಟಿ ನೀಡದಾಗ ಕೊಳಚೆಪ್ರದೇಶದಲ್ಲಿ 25 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ 27 ಮನೆಗಳು ದುರಸ್ಥಿಯಾಗಿವೆ. ಮಳೆಗಾಲದಲ್ಲಿ ಸೋರುತ್ತಿರುವುದರಿಂದ ಸಮಸ್ಯೆಯಾಗುತ್ತಿದೆ ಎಂದು ಅಳಲು ತೋಡಿಕೊಂಡರು. ಅದಕ್ಕೆ ಸ್ಪಂದಿಸಿದ ಸಚಿವರು, ಸ್ಥಳಿಯ ಶಾಸಕ ರೋಷನ್‌ಬೇಗ್ ಅವರಿಗೆ ಶಿಥಿಲಾವಸ್ಥೆಯಲ್ಲಿರುವ ಮನೆಗಳನ್ನು ಕೆಡವಿ, ಕೊಳಚೆ ನಿರ್ಮೂಲನಾ ಮಂಡಳಿಯಿಂದ ಹೊಸ ಮನೆ ಕಟ್ಟಿಸಿಕೊಡುವಂತೆ ತಿಳಿಸಿದರು.
ಡಯಾಲಿಸಿಸ್ ಕೇಂದ್ರ ತೆರೆಯಲು ಸೂಚನೆ: ಮುನಿವೆಂಕಟಪ್ಪ ಕಾಲೋನಿಯ 546 ಮನೆಗಳನ್ನು ನಿರ್ಮಿಸಿ 45 ವರ್ಷವಾಗಿದ್ದು, ಅವುಗಳಲ್ಲಿ ಬಹುತೇಕ ಮನೆಗಳು ಶಿಥಿಲಗೊಂಡಿವೆ. ಈ ಮನೆಗಳ ಜಾಗವನ್ನು 99 ವರ್ಷಗಳ ಭೋಗ್ಯಕ್ಕೆ ನೀಡಲಾಗಿದೆ. ಆದರೆ, ಆ ಜಾಗದ ಹಕ್ಕು ಪತ್ರವನ್ನು ಇದುವರೆಗೆ ನೀಡಿಲ್ಲ ಎಂದು ಸ್ಥಳೀಯರು ದೂರಿದರು. ಅದಕ್ಕೆ ಪರಮೇಶ್ವರ್, ಆದಷ್ಟು ಬೇಗ ಹಕ್ಕುಪತ್ರ ಕೊಡಲು ಕ್ರಮಕೈಗೊಳ್ಳುವ ಜತೆಗೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಡಯಾಲಿಸಿಸ್ ಕೇಂದ್ರ ಆರಂಭಿಸುವಂತೆ ಅಧಿಕಾರಿಗಳು ಸೂಚಿಸಿದರು.
ಅಂಗರಕ್ಷಕನಿಂದ ಶೂ ಸ್ವತ್ಛ ಮಾಡಿಸಿಕೊಂಡರು: ಹಲಸೂರು ಕೆರೆ ಬಳಿಯ ರಾಜಕಾಲುವೆ ಪರಿಶೀಲನೆ ವೇಳೆ ಅವರ ಬಟ್ಟೆ ಹಾಗೂ ಶೂಗೆ ಮಣ್ಣಾಗಿತ್ತು. ಅದನ್ನು ಸ್ವತ್ಛಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾದಾಗ ಅವರನ್ನು ತಡೆದ ಪರಮೇಶ್ವರ್, ಅಂಗರಕ್ಷನಿಗೆ ನೀರು ತರಲು ಹೇಳಿದರು. ತಕ್ಷಣ ಅಂಗರಕ್ಷಕ ತಮ್ಮ ಕರವಸ್ತ್ರದಿಂದಲೇ ಅವರ ಅವರ ಪ್ಯಾಂಟ್ ಹಾಗೂ ಶೂ ಸ್ವತ್ಛಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ.
ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಪರಮೇಶ್ವರ್, ಏನೋ ಅಚಾನಕ್ ಆಗಿ ಕೆಸರು ಸಿಡಿದಿತ್ತು, ಕೂಡಲೇ ನಮ್ಮ ಸಿಬ್ಬಂದಿ ಬಂದು ಅದನ್ನು ಸ್ವತ್ಛ ಮಾಡಿದ್ದಾರೆ. ಸಣ್ಣ ಸುದ್ದಿಯನ್ನು ನೀವು ಇಂಟರ್‌ನ್ಯಾಷನಲ್ ನ್ಯೂಸ್ ರೀತಿಯಲ್ಲಿ ಬಿಂಬಿಸುತ್ತಿದ್ದೀರಾ ಅದಕ್ಕೆ ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
MUST WATCH
ಹೊಸ ಸೇರ್ಪಡೆ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.