ಕೋವಿಡ್ ಸಂಕಷ್ಟದಲ್ಲೂ 417 ಭೂಸ್ವಾಧೀನ ಪ್ರಕರಣ ಇತ್ಯರ್ಥ : ಡಿಸಿಎಂ ಗೋವಿಂದ ಕಾರಜೋಳ ಶ್ಲಾಘನೆ
Team Udayavani, May 13, 2021, 9:11 PM IST
ಬೆಂಗಳೂರು: ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಕಳೆದ 8 ವರ್ಷಗಳಿಂದ ತಾಂತ್ರಿಕ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 417 ಭೂ ಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, ಸಂಬಂಧಿಸಿದ ಜಮೀನಿನ ರೈತರಿಗೆ ನೇರವಾಗಿ ಪರಿಹಾರ ಧನವನ್ನು ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಶಿವಮೊಗ್ಗ- ಚಿತ್ರದುರ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ -13, ಮುಧುಗಿರಿ- ಆಂಧ್ರಗಡಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ 234, ಕೊಳ್ಳೆಗಾಲ- ಕೇರಳ ಗಡಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ 212 ರಸ್ತೆಗಳ ಅಭಿವೃದ್ಧಿಗಾಗಿ ಭೂ ಸ್ವಾಧೀನ ಪ್ರಕ್ರಿಯೆ ತಾಂತ್ರಿಕ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿತ್ತು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಎಂ, ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸುಧೀರ್ಘ ವಾಗಿ ಚರ್ಚಿಸಿ, ಇಂತಹ ಸಂಕಷ್ಟದ ಸಂದರ್ಭದಲ್ಲಿ ರೈತರು ಪರಿಹಾರ ದನಕ್ಕಾಗಿ ಕಚೇರಿಗೆ ಪದೇ ಪದೇ ಬರುವುದು ಉಚಿತವಲ್ಲ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ನೆರವಾಗುತ್ತದೆ. ತಾಂತ್ರಿಕ ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ಸೂಚನೆ ಹಾಗೂ ಮಾರ್ಗದರ್ಶನಗಳನ್ನು ನೀಡಿದೆ. ಅದರನ್ವಯ ಭೂ ಸ್ವಾಧೀನ ಪ್ರಕರಣಗಳನ್ನು ಕೂಡಲೇ ಇತ್ಯರ್ಥಪಡಿಸಲಾಗಿದೆ.
80 ಕೋಟಿ ರೂ ಪರಿಹಾರ ಧನವನ್ನು ಸಂಬಂಧಿಸಿದ ರೈತರಿಗೆ ಪಾವತಿಸಲಾಗಿದೆ. ಇದೊಂದು ಶ್ಘಾಘನೀಯ ಕಾರ್ಯವಾಗಿದೆ. ದಿನದಿಂದ ದಿನಕ್ಕೆ ಭೂ ಸ್ವಾಧೀನ ಪರಿಹಾರ ಮೊತ್ತವೂ ಹೆಚ್ಚಳವಾಗುವುದರ ಜೊತೆಗೆ ರಸ್ತೆ ನಿರ್ಮಾಣ ವೆಚ್ಚವೂ ಅಧಿಕವಾಗುತ್ತದೆ. ತ್ವರಿತವಾಗಿ ಸಮಸ್ಯೆ ಪರಿಹರಿಸಿದರೆ ಹೆದ್ದಾರಿ ನಿರ್ಮಾಣಗೊಂಡು ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವಾಗಲಿದೆ. ಇಂತಹ ಮಾದರಿಯುತ ಹಾಗೂ ಅಭಿವೃದ್ಧಿ ಗೆ ಪೂರಕ ಚಿಂತನೆಗಳನ್ನು ಅಧಿಕಾರಿಗಳು ಅಳವಡಿಸಿ ಕೊಳ್ಳಬೇಕು ಎಂದು ಡಿಸಿಎಂ ತಿಳಿಸಿದ್ದಾರೆ.
ಭೂ ಸ್ವಾಧೀನ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಿದ್ದಕ್ಕಾಗಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಡಾ. ಕೆ.ಎಸ್.ಕೃಷ್ಣರೆಡ್ಡಿ, ರಾಜ್ಯ ಹೆದ್ದಾರಿ ಮುಖ್ಯ ಅಭಿಯಂತರ ರಾದ ಶ್ರೀ ಗೋವಿಂದ ರಾಜು, ಭೂ ಸ್ವಾಧೀನ ಅಧಿಕಾರಿ ಶ್ರೀಮತಿ ಕಮಲಾಬಾಯಿ ಅವರನ್ನು ಡಿಸಿಎಂ ಗೋವಿಂದ ಎಂ ಕಾರಜೋಳ ಅವರು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.