3 ದಿನಗಳ ನಂತರ ಮೃತದೇಹಗಳು ತಾಯ್ನಾಡಿಗೆ

Team Udayavani, Apr 25, 2019, 4:05 AM IST

3dinaga

ದೇವನಹಳ್ಳಿ: ಶ್ರೀಲಂಕಾ ಸ್ಫೋಟದಲ್ಲಿ ಸಾವನ್ನಪ್ಪಿದ ಕರ್ನಾಟಕದ 7 ಮಂದಿಯ ಮೃತದೇಹಗಳನ್ನು 3 ದಿನಗಳ ನಂತರ ತಾಯ್ನಾಡಿಗೆ ತರಲಾಗಿದೆ. ಮಂಗಳವಾರ ತಡರಾತ್ರಿ 2.30ಕ್ಕೆ 4 ಹಾಗೂ ಬುಧವಾರ ಮಧ್ಯಾಹ್ನ 3 ಮೃತದೇಹಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು.

ಏಳು ಮಂದಿ ಸ್ನೇಹಿತರು ಲೋಕಸಭಾ ಚುನಾವಣೆ ಮುಗಿಸಿಕೊಂಡು ಪ್ರವಾಸಕ್ಕಾಗಿ ಶ್ರೀಲಂಕಾಗೆ ತೆರಳಿದ್ದರು. ನೆಲಮಂಗಲ ಮೂಲದ ಹನುಮಂತರಾಯಪ್ಪ, ಶಿವಕುಮಾರ್‌, ಲಕ್ಷ್ಮೀನಾರಾಯಣ್‌, ರಂಗಣ್ಣ ಅವರ ಮೃತದೇಹಗಳನ್ನು ಮಂಗಳವಾರ ತಡರಾತ್ರಿ ತವರಿಗೆ ತರಲಾಯಿತು. ಈ ವೇಳೆ ಗೃಹ ಸಚಿವ ಎಂ.ಬಿ.ಪಾಟೀಲ್‌ ಮೃತದೇಹಗಳನ್ನು ಸ್ವೀಕರಿಸಿ ಅಂತಿಮ ನಮನ ಸಲ್ಲಿಸಿದರು.

ಬುಧವಾರ ಮಧ್ಯಾಹ್ನ 3 ಗಂಟೆಗೆ ತುಮಕೂರು ನಿವಾಸಿ ರಮೇಶ್‌, ನೆಲಮಂಗಲದ ಅಡಕಮಾರನಹಳ್ಳಿ ನಿವಾಸಿ ಮಾರೇಗೌಡ, ಹಾರೋ ಕ್ಯಾತನಹಳ್ಳಿ ನಿವಾಸಿ ಪುಟ್ಟರಾಜು ಅವರ ಪಾರ್ಥಿವ ಶರೀರಗಳು ಇಂಡಿಗೋ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದವು. ಈ ವೇಳೆ ಮೃತರ ಸಂಬಂಧಿಕರು ಮೃತ ದೇಹಗಳನ್ನು ಕಂಡು ಭಾವುಕರಾದರು.

ಶ್ರೀಲಂಕಾದ ಸ್ಫೋಟದಲ್ಲಿ ಗಾಯಗೊಂಡಿರುವ ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರ ಸಂಬಂಧಿ ಪುರುಷೋತ್ತಮ್‌ ಅವರನ್ನು ಕೊಲೊಂಬೋದಿಂದ ಏರ್‌ ಆ್ಯಂಬುಲೆನ್ಸ್‌ ಮೂಲಕ ಕೆಐಎಎಲ್‌ ವಿಮಾನ ನಿಲ್ದಾಣಕ್ಕೆ ಕರೆತಂದು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಗೃಹ ಸಚಿವ ಎಂ.ಬಿ.ಪಾಟೀಲ್‌ ಮಾತನಾಡಿ, ಈಗಾಗಲೇ 7 ಮೃತದೇಹಗಳು ಬಂದಿವೆ.

ಮಂಗಳವಾರ ರಾತ್ರಿ 8.30ಕ್ಕೆ ಒಂದು ಮೃತದೇಹ, ಮಧ್ಯರಾತ್ರಿ 2.30ಕ್ಕೆ ಮತ್ತೂಂದು ಮೃತದೇಹ, ಮಧ್ಯರಾತ್ರಿ 4 ಮೃತದೇಹಗಳು ಹಾಗೂ ಬುಧವಾರ ಮಧ್ಯಾಹ್ನ 3 ಗಂಟೆಗೆ ಮೂರು ಮೃತದೇಹಗಳು ಬಂದಿವೆ. ಇದೊಂದು ಜಗತ್ತೇ ಬೆಚ್ಚಿ ಬೀಳುವ ಘಟನೆ. ಉಗ್ರರ ಕೃತ್ಯವನ್ನು ತೀವ್ರವಾಗಿ ಖಂಡಿಸಬೇಕು. ಮೃತರ ದೇಹಗಳನ್ನು ರಾಜ್ಯಕ್ಕೆ ತರಿಸಲು ಸರ್ಕಾರ ಎಲ್ಲ ರೀತಿಯ ಅಗತ್ಯ ಸಹಕಾರ ನೀಡುತ್ತಿದೆ ಎಂದು ಹೇಳಿದರು.

ಮೂರು ದಿನಗಳಿಂದ ಶ್ರೀಲಂಕದಲ್ಲೇ ಬೀಡುಬಿಟ್ಟಿದ್ದ ನೆಲಮಂಗಲ ಶಾಸಕ ಡಾ. ಶ್ರೀನಿವಾಸಮೂರ್ತಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಇ.ಕೃಷ್ಣಪ್ಪ ಮತ್ತು ಇತರ 12 ಮಂದಿ ಬೆಂಗಳೂರು ಮೂಲದ ಪ್ರವಾಸಿಗರು ಸಹ ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.