ಗಡುವು ಮುಗಿದರೂ ಗುಂಡಿ ಬಾಕಿ


Team Udayavani, Nov 11, 2019, 10:22 AM IST

bng-tdy-2

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಂಟೂ ವಲಯಗಳಲ್ಲಿ ಎಲ್ಲ ರಸ್ತೆ ಗುಂಡಿಗಳನ್ನು ನ.10ರ ಒಳಗಾಗಿ ಮುಚ್ಚಲಾಗುವುದು ಎಂದು ಹೇಳಿದ್ದ ಬಿಬಿಎಂಪಿ, ಭರವಸೆ ನೀಡಿದಂತೆ ರಸ್ತೆ ಗುಂಡಿ ಮುಚ್ಚುವಲ್ಲಿ ವಿಫ‌ಲವಾಗಿದೆ.

ನಗರದಲ್ಲಿ ರಸ್ತೆ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಅ.22 ರಂದು ಸಭೆ ನಡೆಸಿದ ಮೇಯರ್‌ ಗೌತಮ್‌ ಕುಮಾರ್‌ ನ.10ರೊಳಗೆ ನಗರದ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸುವುದಾಗಿ ಮತ್ತು ಯಾವುದೇ ಕಾರಣಕ್ಕೂ ಈ ಬಾರಿ ಡೆಡ್‌ಲೈನ್‌ ಮಿಸ್‌ ಆಗುವುದಿಲ್ಲ ಎಂದೂ ಭರವಸೆ ನೀಡಿದ್ದರು. ಆದರೆ, ಈಗ ಬಿಬಿಎಂಪಿಯ ಅಧಿಕೃತ ಮಾಹಿತಿಯ ಪ್ರಕಾರ ಇನ್ನೂ 1,337 ರಸ್ತೆ ಗುಂಡಿ ಮುಚ್ಚುವುದು ಬಾಕಿ ಇದೆ.

ಗುಂಡಿ ಭರ್ತಿ ಸಂಬಂಧಿಸಿದಂತೆ ಪ್ರತಿದಿನ ಯೋಜನಾ ವಿಭಾಗದ ವಿಶೇಷ ಆಯುಕ್ತರು ಸಭೆ ನಡೆಸಬೇಕೆಂದೂ ಮೇಯರ್‌ ಆದೇಶ ಮಾಡಿದ್ದರು. ಆದರೆ, ಮೇಯರ್‌ ಆದೇಶದಂತೆ ಯಾವುದೇ ಸಭೆ ನಡೆದಿಲ್ಲ. ಪ್ರತಿದಿನ ಎಷ್ಟು ಗುಂಡಿ ಮುಚ್ಚಲಾಗಿದೆ ಎಂಬ ಮಾಹಿತಿ ನೀಡುವುದಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ, ಈ ಪ್ರಕ್ರಿಯೆ ಸಹ ನಿರಂತರವಾಗಿ ನಡೆಯುತ್ತಿಲ್ಲ. ಅ.2ರ ನಂತರ ಖುದ್ದು ರಸ್ತೆ ಗುಂಡಿಗಳ ಪರಿಶೀಲನೆ ನಡೆಸಲಾಗುವುದು ಎಂದಿದ್ದ ಮೇಯರ್‌, ನ.6 ಒಂದು ದಿನ ಹೊರತು ಪಡಿಸಿದರೆ, ಉಳಿದ ದಿನ ರಸ್ತೆ ಗುಂಡಿ ಪರಿಶೀಲನೆ ನಡೆಸಲಿಲ್ಲ. ಇದು ಅಧಿಕಾರಿಗಳಿಗಳು ರಸ್ತೆ ಗುಂಡಿ ಮುಚ್ಚಲು ಹಿಂದೇಟು ಹಾಕುವುದಕ್ಕೆ ಕಾರಣವಾಯಿತು.  ಈ ವರ್ಷ ಮಳೆಗಾಲ ಮುಕ್ತಾಯವಾಗುವುದಕ್ಕೆ ಮುನ್ನ ಮುಖ್ಯರಸ್ತೆ ಗುಂಡಿ ಮುಚ್ಚುವುದಕ್ಕೆ ಮತ್ತು ವಾರ್ಡ್‌ ರಸ್ತೆ ಗುಂಡಿ ಮುಚ್ಚುವುದಕ್ಕೆ ಪ್ರತ್ಯೇಕವಾಗಿ ಹಣ ಮೀಸಲಿಟ್ಟು ಟೆಂಡರ್‌ ನೀಡಲಾಗಿದೆ.

ಇಷ್ಟಾದರೂ ನಗರದ ರಸ್ತೆಗಳು ಗುಂಡಿ ಮುಕ್ತವಾಗಲಿಲ್ಲ. ಮೇಯರ್‌ ಪತ್ರ ವ್ಯವಹಾರವೂ ಫ‌ಲ ನೀಡಲಿಲ್ಲ: ಬೆಂಗಳೂರಿನ ಎಲ್ಲ ಶಾಸಕರಿಗೂ ಪತ್ರ ಬರೆದಿದ್ದ ಮೇಯರ್‌ ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದ್ದರು. ಆದರೆ, ಮೇಯರ್‌ ಪತ್ರಕ್ಕೆ ಯಾವುದೇ ಶಾಸಕರು ಅಧಿಕೃತವಾಗಿ ಬೆಂಬಲ ಸೂಚಿಸಿ ರಸ್ತೆಗಿಳಿದು ರಸ್ತೆ

ಗುಂಡಿ ಮುಚ್ಚುವುದಕ್ಕೆ ಮುಂದಾಗಲಿಲ್ಲ. 9 ಸಾವಿರ ಗುಂಡಿಗಳಿಗೆ ಮುಕ್ತಿ ಅ.1ರಿಂದ ನ.8ರವರೆಗೆ 10,656 ರಸ್ತೆ ಗುಂಡಿಗಳನ್ನು ಗುರುತಿಸಿದ್ದು, ಇವುಗಳಲ್ಲಿ 9,319 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇನ್ನು 1,337 ರಸ್ತೆ ಗುಂಡಿಗಳನ್ನು ಮುಚ್ಚುವುದು ಬಾಕಿ ಇದೆ ಎಂದು ಬಿಬಿಎಂಪಿಯ ಆಯುಕ್ತರಾದ ಬಿ.ಎಚ್‌. ಅನಿಲ್‌ ಕುಮಾರ್‌ ತಿಳಿಸಿದ್ದಾರೆ.

ವಲಯ ಒಟ್ಟು ರಸ್ತೆ ಗುಂಡಿಗಳು ಮುಚ್ಚಿರುವುದು ಬಾಕಿ ಪೂರ್ವ 1063 986 77 ಪಶ್ಚಿಮ 2688 2367 321ದಕ್ಷಿಣ 1476 1343 133 ಬೊಮ್ಮನಹಳ್ಳಿ 2079 1800 279 ದಾಸರಹಳ್ಳಿ 496 422 74 ಯಲಹಂಕ 720 643 86 ಮಹದೇವಪುರ 1742 1535 207 ರಾಜರಾಜೇಶ್ವರಿ ನಗರ 392 232 160 ಒಟ್ಟು 10,656 9,319 1,337 ಬಿಬಿಎಂಪಿಯ ಮುಂದಿನ ನಡೆ ಏನು? ನ.10ರ ನಂತರ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ವಿಫ‌ಲವಾಗುವ ಎಂಜಿನಿಯರ್‌ಗಳ ಅಮಾನತು ಹಾಗೂ ನಿರ್ಲಕ್ಷ್ಯ ಧೋರಣೆ ಅನುಸರಿಸುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಮೇಯರ್‌ ಎಂ. ಗೌತಮ್‌ ಕುಮಾರ್‌ ಹೇಳಿದ್ದರು. ಆದರೆ, ಈಗ ಈ ಬಗ್ಗೆ ಮೇಯರ್‌ ಸ್ಪಷ್ಟ ನಿಲುವು ತಾಳದೆ ಇರುವುದು ಅಧಿಕಾರಿಗಳಿಗೆ ಶಿಕ್ಷೆಯಾಗುವ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವುದು ಅನುಮಾನ ಎನ್ನಲಾಗಿದೆ.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.