ಅಪಘಾತದಲ್ಲಿ ಕಾರು ಚಾಲಕ ಸಾವು
Team Udayavani, May 2, 2019, 2:59 AM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕ ಹಾಗೂ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಕೆ.ಜಿ.ಹಳ್ಳಿ ನಿವಾಸಿ ತೌಸಿಫ್ (29) ಮೃತ ಚಾಲಕ. ತೌಸಿಫ್ ಬಾಗಲೂರು ರಸ್ತೆಯಿಂದ ಏರ್ಪೋರ್ಟ್ ಕಡೆ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದರು.
ಏರ್ಪೋರ್ಟ್ ಹಿಂಭಾಗದ ನವೋದಯ ಶಾಲೆ ಸಮೀಪ ತಡರಾತ್ರಿ 12.45ರ ಸುಮಾರಿಗೆ ಕಾರಿನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು, ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.