ಸಾಲಬಾಧೆ: ವಿವಿಧೆಡೆ ನಾಲ್ವರು ರೈತರ ಆತ್ಮಹತ್ಯೆ
Team Udayavani, Jul 10, 2018, 7:00 AM IST
ಬೆಂಗಳೂರು: ರಾಜ್ಯದ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ ಸಾಲಬಾಧೆ ತಾಳದೆ ನಾಲ್ವರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹಳೇಬೀಡು ಗ್ರಾಮದ ಪುಟ್ಟಸ್ವಾಮಿ(53) ಎಂಬುವರು ನೇಣು
ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೂವರೆ ಎಕರೆ ಜಮೀನು ಹೊಂದಿರುವ ಪುಟ್ಟಸ್ವಾಮಿ, ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ 60 ಸಾವಿರ ರೂ. ಸಾಲ ಪಡೆದಿದ್ದು, ಖಾಸಗಿ ವ್ಯಕ್ತಿಗಳಿಂದ ಸುಮಾರು 6ಲಕ್ಷ ರೂ.ಗಳವರೆಗೆ ಕೈಸಾಲ ಮಾಡಿದ್ದರು ಎನ್ನಲಾಗಿದೆ.
ಖಾಸಗಿ ವ್ಯಕ್ತಿಗಳಿಂದ ಪಡೆದಿದ್ದ ಸಾಲ ವಾಪಸ್ ನೀಡುವಂತೆ ಸಾಲಗಾರರು ಪೀಡಿಸುತ್ತಿದ್ದರು, ಇದರಿಂದ ಒತ್ತಡಕ್ಕೆ ಒಳಗಾದ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡಿದ್ದಾರೆ.
ಬೀದರ ತಾಲೂಕಿನ ಮಿರ್ಜಾಪುರ ಗ್ರಾಮದ ರಾಜರೆಡ್ಡಿ ಪ್ರಭುರೆಡ್ಡಿ ಚೋಟೆನವರ್ (31) ಎಂಬುವರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಇವರಿಗೆ 3.14 ಎಕರೆ ಭೂಮಿ ಇದ್ದು, ಸ್ಥಳೀಯ ಪಿಕೆಜಿಬಿ, ಎಸ್‌ಬಿಐ,ಪಿಕೆಪಿಎಸ್ ಬ್ಯಾಂಕಿನಲ್ಲಿ 2 ಲಕ್ಷಕ್ಕೂ ಅಧಿಕ ಸಾಲ ಇದೆ ಎಂದು ತಿಳಿದು ಬಂದಿದೆ.
ಬಸವಕಲ್ಯಾಣ ತಾಲೂಕಿನ ಹಣಮಂತವಾಡಿ (ಎಂ) ಗ್ರಾಮದ ಪಂಡಿತ ಮಲ್ಲಪ್ಪ ಮದಪೆ (52) ಬಾವಿಗೆ
ಬಿದ್ದು ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಹೆಸರಿನಲ್ಲಿ 2 ಎಕರೆ, 27 ಗುಂಟೆ ಜಮೀನಿದ್ದು, ನಗರದ ಕಾರ್ಪೋ ರೇಶನ್ ಬ್ಯಾಂಕ್‌ನಲ್ಲಿ 2.90 ಲಕ್ಷ ರೂ. ಸೇರಿ ಇತರ ಖಾಸಗಿ ಸಾಲವಿದೆ ಎನ್ನಲಾಗಿದೆ. ಮೃತ ರೈತನಿಗೆ ಪುತ್ರ ಹಾಗೂ ಐವರು ಪುತ್ರಿಯರಿದ್ದು, ಕಳೆದ ಒಂದು ತಿಂಗಳ ಹಿಂದೆಯಷ್ಟೇ ಮಗಳ ಮದುವೆ ಮಾಡಿದ್ದರು. ಹೀಗಾಗಿ ಸಾಲದ ಹೊರೆ ಹೆಚ್ಚಾಗಿತ್ತು ಎನ್ನಲಾಗಿದೆ.
ಚನ್ನಮ್ಮ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ರೈತ ಚಿಂತಾಮಣಿ ಬಸವಣ್ಣೆಪ್ಪಾ ದಾಸ್ತಿಕೊಪ್ಪ (58) ನೇಣಿಗೆ ಶರಣಾಗಿದ್ದಾರೆ. ಗ್ರಾಮದಲ್ಲಿ 7 ಎಕರೆ ಜಮೀನು ಹೊಂದಿದ್ದ ಇವರು ಕರ್ನಾಟಕ ವಿಕಾಸ ಬ್ಯಾಂಕಿನಲ್ಲಿ 3 ಲಕ್ಷ ರೂ. ಸಾಲ ಹಾಗೂ ಹುಬ್ಬಳ್ಳಿಯ ಖಾಸಗಿ ಫೈನಾನ್ಸ್‌ನಲ್ಲಿ ಟ್ರ್ಯಾಕ್ಟರ್ ಖರೀದಿಗೆ 10 ಲಕ್ಷ ಸಾಲ ಮಾಡಿಕೊಂಡಿದ್ದರು. ಮಗಳ ಮದುವೆಗಾಗಿ ಮಾಡಿದ ಕೈಸಾಲ ಕೂಡ ಇತ್ತು ಎನ್ನಲಾಗಿದೆ. ಟ್ರ್ಯಾಕ್ಟರ್ ಸಾಲ ಮರುಪಾವತಿಸಲು ಫೈನಾನ್ಸ್‌ನವರು ರೈತನ ಮೇಲೆ ಒತ್ತಡ ಹಾಕಿದ್ದರೂ ಮರುಪಾವತಿಸದೇ ಇರುವುದರಿಂದ ಅವರು ಟ್ರಾÂಕ್ಟರ್ ಜಪ್ತಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.