17ಕ್ಕೆ ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ
Team Udayavani, Dec 11, 2018, 6:55 AM IST
ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಹಗಲು ದರೋಡೆ ವಿರೋಧಿಸಿ ಡಿ.17 ರಂದು ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಒನರ್ ಅಸೋಸಿಯೇಷನ್ಸ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡ್ರೋಣ್ ಕ್ಯಾಮರಾ ಮೂಲಕ ಸಮೀಕ್ಷೆ ನಡೆಸಿ ಅವೈಜ್ಞಾನಿಕವಾಗಿ ಐದು ಪಟ್ಟು ಹೆಚ್ಚುವರಿ ಪ್ರಮಾಣದಲ್ಲಿ ದಂಡ ವಿಧಿಸುವ ಮೂಲಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸುಲಿಗೆ ಮಾಡುತ್ತಿದ್ದಾರೆ.
ಜತೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ಅವರಗೂ ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿದ್ದಾರೆ. ಈ ಮೂಲಕ ಇಡೀ ಉದ್ಯಮವನ್ನೇ ಅಧಿಕಾರಿಗಳು ಹಾಳು ಮಾಡಲು ಹೊರಟಿದ್ದಾರೆ. ಅಧಿಕಾರಿಗಳ ಈ ಸರ್ವಾಧಿಕಾರಿ ಧೋರಣೆಗೆ ಕೂಡಲೇ ಕಡಿವಾಣ ಬೀಳಬೇಕು. ಆ ನಿಟ್ಟಿನಲ್ಲಿ ಬೆಳಗಾವಿ ಸುವರ್ಣ ಸೌಧದ ಮುಂದೆ ಡಿ.17 ರಂದು ಪ್ರತಿಭಟನೆ ನಡೆಸಲಾಗುವುದು ಎಂದರು.
ಜತೆಗೆ ಸರ್ಕಾರ ಕ್ರಷರ್ ಸಿ ಫಾರ್ಮ್ ಅನ್ನು 20 ವರ್ಷಗಳಿಗೆ ವಿಸ್ತರಿಸಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನವೀಕರಣ ಮಾಡಿಸಿಕೊಡುವ ವ್ಯವಸ್ಥೆ ರೂಪಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.