ಜೆಡಿಎಸ್‌ಗೆ ಬೆಂಬಲ ನೀಡದಿರಲು ನಿರ್ಧಾರ
Team Udayavani, Mar 31, 2019, 12:23 PM IST
ಬೆಂಗಳೂರು: ಜೆಡಿಎಸ್ ಪಕ್ಷ ಹಿಂದುಳಿದ ಮತ್ತು ದಲಿತರ ವಿರೋಧಿ ನಿಲುವನ್ನು ಪ್ರದರ್ಶಿಸಿದೆ. ಇದನ್ನು ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಮತನೀಡದಿರಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಮಾವಳ್ಳಿ ಶಂಕರ್ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ್ತಿ ಮೀಸಲಾತಿ ಕಾಯ್ದೆ, ಚಿನ್ನಪ್ಪರೆಡ್ಡಿ ಮತ್ತು ಮಂಡಲ್ ಆಯೋಗದ ವರದಿಗಳನ್ನು ಅನುಷ್ಠಾನ ಮಾಡುವಲ್ಲಿ ಜೆಡಿಎಸ್ ನಡೆದುಕೊಂಡ ರೀತಿ ದಲಿತ ವಿರೋಧಿ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ತಿಳಿಸಿದರು.
ಜೆಡಿಎಸ್ ಪಕ್ಷದ ನಾಯಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಯಾವುದೇ ಉನ್ನತ ಹುದ್ದೆ ಸಿಗದಂತೆ ನೋಡಿಕೊಂಡಿದ್ದಾರೆ. ರಾಜಕೀಯದಲ್ಲಿ ಸಹ ಸ್ವಜನಪಕ್ಷಪಾತ ನಿಲುವು ತೆಳೆದಿದ್ದಾರೆ. ಹೆಚ್.ಡಿ ದೇವೇಗೌಡ, ನಿಖೀಲ್ ಕುಮಾರ ಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಅವರನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲಿಸುವ ಮೂಲಕ ದಲಿತರ ಶಕ್ತಿಯನ್ನು ಪ್ರದರ್ಶಿಸಲಾಗುವುದು ಎಂದರು.
ರಾಜ್ಯ ದಲಿತ ಸಂಘರ್ಷ ಸಮಿತಿಯ ಡಾ.ಮೋಹನ್ ರಾಜ್, ಈ ಬಾರಿಯ ಚುನಾವಣೆಯಲಿ É ದಲಿತ ಒಕ್ಕೂಟ ಸಂಘಟನೆಗಳು ಜೆಡಿಎಸ್ ಪಕ್ಷವನ್ನು ಸೋಲಿಸುವ ಮೂಲಕ ಜೆಡಿಎಸ್ ಮುಕ್ತ ರಾಜ್ಯವನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.