ಮತ್ತೆ ಪೇ ಆ್ಯಂಡ್‌ ಪಾರ್ಕ್‌ ವ್ಯವಸ್ಥೆಗೆ ನಿರ್ಧಾರ


Team Udayavani, Dec 2, 2020, 9:46 AM IST

ಮತ್ತೆ ಪೇ ಆ್ಯಂಡ್‌ ಪಾರ್ಕ್‌ ವ್ಯವಸ್ಥೆಗೆ ನಿರ್ಧಾರ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಮತ್ತೆ ಪೇ ಆ್ಯಂಡ್‌ ಪಾರ್ಕ್‌ ವ್ಯವಸ್ಥೆ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಗರದಲ್ಲಿ ಸಂಚಾರ ಶಿಸ್ತು ತರುವ ನಿಟ್ಟಿನಲ್ಲಿ ನೂತನ ವಾಹನ ನಿಲುಗಡೆ ನೀತಿ ಜಾರಿಗೊಳಿಸಲು ತೀರ್ಮಾನಿಸಲಾಗಿದ್ದು ಕರಡು ಸಿದ್ಧಪಡಿಸಲು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಗಿದೆ.

ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಪಾರ್ಕಿಂಗ್‌ ನೀತಿ-2.0 ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಬಿಡಿಎ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌, ನಗರದಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆ ಹಾಗೂ ಸಂಚಾರ ಶಿಸ್ತು ತರಲು ಪಾರ್ಕಿಂಗ್‌ ನೀತಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಪಾರ್ಕಿಂಗ್‌ ಶುಲ್ಕವನ್ನು ಯಾವ ರೀತಿ ಸಂಗ್ರಹಿಸಬೇಕು ಹಾಗೂ ಮಾನದಂಡಗಳು ಯಾವ ರೀತಿ ಇರಬೇಕು ಎಂಬ ಬಗ್ಗೆ ಮಾರ್ಗಸೂಚಿ ತಯಾರಿಸಿ ಕರಡು ನೀತಿ ಸಿದ್ಧಪಡಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ ಎಂದು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸ್ತುತ 80 ರಿಂದ 85 ಸ್ಥಳಗಳಲ್ಲಿ ಸ್ಮಾರ್ಟ್‌ ಪಾರ್ಕಿಂಗ್‌ ಶುಲ್ಕ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿ ನಗರದ ಎಲ್ಲಾಕಡೆ ಶುಲ್ಕ ಸಂಗ್ರಹಕೇಂದ್ರಗಳನ್ನು ಸ್ಥಾಪಿಸುವ ಅನಿವಾರ್ಯತೆ ಇದೆ ಎಂದರು.

ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಮತ್ತು ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಪಾರ್ಕಿಂಗ್‌ ಶುಲ್ಕ ನೀತಿಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಮರ್ಥಿಸಿಕೊಂಡರು. ಮುಖ್ಯ ಕಾರ್ಯದರ್ಶಿಗಳು ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಜಾರಿಗೆ ತರುವ ಬಗ್ಗೆ ಅಂತಿಮ ನಿರ್ಧಾರಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ : ಮಂಗಳೂರು ಬೋಟ್ ದುರಂತ: ನಾಲ್ವರು ಪತ್ತೆಯಾಗುವವರೆಗೂ ಮೀನುಗಾರಿಕಾ ಬಂದರು ಬಂದ್ ಮಾಡಿ ಮುಷ್ಕರ

ನಗರಾಭಿವೃದ್ಧಿ ಸಚಿವ ಬಸವರಾಜ್‌, ಮುಖ್ಯಮಂತ್ರಿಯವರ ಸಲಹೆಗಾರರಾದ ಎಂ. ಲಕ್ಷ್ಮೀ ನಾರಾಯಣ, ನಗರ ಭೂಸಾರಿಗೆ ನಿರ್ದೇಶನಾಲಯದ ಆಯಕ್ತರಾದ ವಿ. ಮಂಜುಳ, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ ಗುಪ್ತಾ, ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ದಟ್ಟಣೆ ನಿಯಂತ್ರಣಕ್ಕೆ ತಂತ್ರಜ್ಞಾನ ಆಧಾರಿತ ಪಾರ್ಕಿಂಗ್‌ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪಾರ್ಕಿಂಗ್‌ ನೀತಿ 2.0 ರೂಪಿಸಲಾಗುತ್ತಿದೆ. ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದು,ನವೀಕರಿಸಿದ ನೀತಿಯನ್ನು ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಎಸ್‌.ಆರ್‌.ವಿಶ್ವನಾಥ್‌, ಬಿಡಿಎ ಅಧ್ಯಕ

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.