ಎಸಿಬಿ ಬಗ್ಗೆ ಚರ್ಚಿಸಿ ತೀರ್ಮಾನ: ಎಚ್‌ಡಿಕೆ
Team Udayavani, Jun 8, 2018, 11:31 AM IST
ಬೆಂಗಳೂರು: ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಮುಂದುವರೆಸುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾಮಾಣಿಕ ಸರ್ಕಾರ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಎಸಿಬಿ ರಚನೆ ಕುರಿತು ಈಗಾಗಲೇ ಹೈಕೋರ್ಟ್‌ನಲ್ಲಿ ಪಿಐಎಲ್ ಹಾಕಿರುವುದರಿಂದ ಈ ಬಗ್ಗೆ ವಾದ ವಿವಾದ ನಡೆಯುತ್ತಿದೆ.
ಹೀಗಾಗಿ ಈ ಸಂದರ್ಭದಲ್ಲಿ ನಾನು ಏಕಾಂಗಿಯಾಗಿ ತೀರ್ಮಾನ ಮಾಡುವುದು ಸರಿಯಲ್ಲ. ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿ ದೇಶದಲ್ಲಿಯೇ ಮಾದರಿ ಲೋಕಾಯುಕ್ತ ಸಂಸ್ಥೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಲೋಕಾಯುಕ್ತದಲ್ಲಿನ ಲೋಪಗಳನ್ನು ಸರಿಪಡಿಸಿ ಮತ್ತೆ ಬಲಪಡಿಸುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.