ಸಂಚಾರ ನಿಯಮ ಉಲ್ಲಂಘನೆಗೆ ಡಿಎಲ್ ಆಧರಿಸಿ ದಂಡ ವಿಧಿಸಲು ನಿರ್ಧಾರ
Team Udayavani, Jan 24, 2018, 11:58 AM IST
ಬೆಂಗಳೂರು: ಪದೇ ಪದೇ ಸಂಚಾರ ನಿಯಮ ಉಲ್ಲಂ ಸುವವರ ವಿರುದ್ಧ ಚಾಟಿ ಬೀಸಲು ಮುಂದಾಗಿರುವ ಸಾರಿಗೆ ಇಲಾಖೆ, ಚಾಲನಾ ಪರವಾನಗಿ ಆಧಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಪ್ರಸ್ತುತ ಸಂಚಾರ ನಿಯಮ ಉಲ್ಲಂ ಸಿದ ವ್ಯಕ್ತಿಯು ಪೊಲೀಸರ ಕೈಗೆ ಸಿಕ್ಕಿಬಿದ್ದರೆ, ಆ ವಾಹನದ ನೋಂದಣಿ ಸಂಖ್ಯೆ ಆಧರಿಸಿ ದಂಡ ವಿಧಿಸಲಾಗುತ್ತಿದೆ.
ಇದರಿಂದ ಬಹುತೇಕ ಪ್ರಕರಣಗಳಲ್ಲಿ ನಿಯಮ ಉಲ್ಲಂ ಸಿದ ಚಾಲಕ ಪಾರಾಗುತ್ತಿದ್ದು, ವಾಹನದ ಮಾಲೀಕರಿಗೆ ಅದರ ಬಿಸಿ ತಟ್ಟುತ್ತಿದೆ. ಪದೇ ಪದೇ ಸಂಚಾರ ನಿಯಮ ಉಲ್ಲಂ ಸುವವರನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಡಿಎಲ್ ಸಂಖ್ಯೆ ಆಧರಿಸಿ “ದಂಡ ಪ್ರಯೋಗ’ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ಆಯುಕ್ತ ಬಿ. ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈ ಸಂಬಂಧ ಚಾಲನಾ ಪರವಾನಗಿ ಪತ್ರಗಳಿಗೆ ಸಂಬಂಧಿಸಿದ ಎಲ್ಲ ದತ್ತಾಂಶಗಳನ್ನು ಸಾರಿಗೆ ಇಲಾಖೆಯು ಸಂಚಾರ ಪೊಲೀಸರಿಗೂ ನೀಡಲಿದೆ. ಈ ದತ್ತಾಂಶಗಳ ಸಹಾಯದಿಂದ ಸಂಚಾರ ಪೊಲೀಸರು, ಸಂಚಾರ ನಿಯಮ ಉಲ್ಲಂ ಸುವವರ ಡಿಎಲ್ ಸಂಖ್ಯೆ ಆಧರಿಸಿ ಕ್ರಮ ಕೈಗೊಳ್ಳಲಿದ್ದಾರೆ. ಈ ಕುರಿತು ಈಚೆಗೆ ನಡೆದ ರಸ್ತೆ ಸುರಕ್ಷತಾ ಪರಿಷತ್ತಿನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ವಾಹನಕ್ಕೆ ಸಂಬಂಧಿತ ಪ್ರಕರಣ; ಮಾಲಿಕರೇ ಹೊಣೆ
ಇದರ ಸಹಾಯದಿಂದ ದಂಡದ ಜತೆಗೆ ಈಗಾಗಲೇ ಎಷ್ಟು ಬಾರಿ ಸಂಚಾರ ನಿಯಮ ಉಲ್ಲಂ ಸಿದ್ದಾನೆ ಎಂಬುದರ ಮಾಹಿತಿಯೂ ಲಭ್ಯವಾಗಲಿದೆ. ಇದನ್ನು ಆಧರಿಸಿ ಪೊಲೀಸ್ ಇಲಾಖೆಯು ಅಂತಹ ವ್ಯಕ್ತಿಯ ಡಿಎಲ್ ಅಮಾನತಿಗೆ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲು ಸಾಧ್ಯವಾಗುತ್ತದೆ. ಆದರೆ, ಟಿಂಟೆಡ್ ಗಾಜು ಅಳವಡಿಕೆ ಸೇರಿದಂತೆ ವಾಹನಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ ಆಯಾ ವಾಹನಗಳ ಮಾಲಿಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
“ಡಿಎಲ್ ಮಾಹಿತಿಗಳನ್ನು ಪೊಲೀಸ್ ಇಲಾಖೆಗೆ ನೀಡುವ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಭದ್ರತಾ ಲೆಕ್ಕಪರಿಶೋಧನೆ (ಸೆಕ್ಯುರಿಟಿ ಆಡಿಟ್) ಮಾತ್ರ ಬಾಕಿ ಇದೆ. ಕೆಲವು ತಾಂತ್ರಿಕ ತೊಡಕುಗಳಿದ್ದು, ಶೀಘ್ರದಲ್ಲೇ ಬಗೆಹರಿಸಿಕೊಳ್ಳಲಾಗುವುದು. ಕೆಲವೇ ವಾರಗಳಲ್ಲಿ ಇದು ಕಾರ್ಯರೂಪಕ್ಕೆ ಬರಲಿದೆ’ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಆಯುಕ್ತ (ಆಡಳಿತ) ನರೇಂದ್ರ ಹೋಳ್ಕರ್, ನಗರ ಜಂಟಿ ಆಯುಕ್ತರಾದ ಜ್ಞಾನೇಂದ್ರಕುಮಾರ್, ಓಂಕಾರೇಶ್ವರಿ ಉಪಸ್ಥಿತರಿದ್ದರು.
2018ರಲ್ಲಿ ಅಪಘಾತ ಪ್ರಮಾಣವನ್ನು ಶೇ. 15ರಷ್ಟು ಕಡಿಮೆ ಮಾಡುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿ. ದಯಾನಂದ ತಿಳಿಸಿದರು. 2017ರಲ್ಲಿ ಅಪಘಾತಗಳ ಪ್ರಮಾಣವನ್ನು ಶೇ. 10ರಷ್ಟು ಕಡಿಮೆ ಮಾಡಿದ್ದು, ಬರುವ ವರ್ಷ ಇದನ್ನು ಶೇ. 15ಕ್ಕೆ ಇಳಿಸುವ ಗುರಿ ಇದೆ.
ಈ ನಿಟ್ಟಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ, ನಿರಂತರ ಕಾರ್ಯಾಚರಣೆ, ಸ್ಥಳೀಯ ಸಂಸ್ಥೆಗಳು ಮತ್ತು ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಗುಂಡಿ ಮುಚ್ಚುವ ಕಾರ್ಯ, ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Asia Cup Hockey: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 11-0 ಅಂತರದ ಜಯ
Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ
Singapore: ವಿಶ್ವ ಚೆಸ್ ಚಾಂಪಿಯನ್‌ಶಿಪ್: ಮೂರನೇ ಪಂದ್ಯದಲ್ಲಿ ಗುಕೇಶ್ ಗೆಲುವು
Badminton: ಸಯ್ಯದ್ ಮೋದಿ ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ
Border-Gavaskar Trophy: ಮಿಚೆಲ್ ಮಾರ್ಷ್ ಗಾಯಾಳು; ವೆಬ್‌ಸ್ಟರ್ ಬ್ಯಾಕಪ್ ಆಟಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.